ಕುಂದಾಪುರ: ಗೋವಾದ ಪಣಜಿಯಿಂದ ಸಾಸ್ತಾನದ ಐರೋಡಿಗೆ ಬಸ್ಸಿನಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರು 20 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳೆದುಕೊಂಡಿದ್ದು, ವಸ್ತುಗಳನ್ನು ಹಿಂದಿ ಮಾತನಾಡುವ ತಂಡ ಕದ್ದೊಯ್ದಿರುವ ಶಂಕೆ ವ್ಯಕ್ತವಾಗಿದೆ.
ಐರೋಡಿ ನಿವಾಸಿ ಸಂಗೀತಾ ಭಟ್ ಚಿನ್ನಾಭರಣ ಕಳೆದುಕೊಂಡ ಮಹಿಳೆಯಾಗಿದ್ದು, ಆಕೆಯು ಡಿಸೆಂಬರ್ 24ರಂದು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪಣಜಿಯಿಂದ ಪುತ್ತೂರಿಗೆ ತೆರಳುತ್ತಿದ್ದರು. ಸಂಗೀತಾ ತನ್ನ ಬಟ್ಟೆ ಮತ್ತು ಚಿನ್ನಾಭರಣಗಳಿರುವ ಚಿಕ್ಕ ಕಾಟನ್ ಬ್ಯಾಗ್ ಅನ್ನು ಟ್ರಾಲಿ ಬ್ಯಾಗ್‌ನಲ್ಲಿ ಇಟ್ಟುಕೊಂಡು ಅದನ್ನು ಲಾಕ್ ಮಾಡಿ ತಾನು ಕುಳಿತಿದ್ದ ಸೀಟಿನ ಕೆಳಗೆ ಇಟ್ಟಿದ್ದರು.
ಇನ್ನು ತನ್ನ ಹುಟ್ಟೂರು ಮಾಬುಕಳ ತಲುಪಿದ ನಂತರ ಸಂಗೀತಾ ಇಳಿದು ಮನೆಗೆ ಬಂದಿದ್ದು, ಟ್ರಾಲಿ ಬ್ಯಾಗ್‌ನಲ್ಲಿ ಚಿನ್ನಾಭರಣಗಳಿದ್ದ ಕಾಟನ್ ಬ್ಯಾಗ್ ನಾಪತ್ತೆಯಾಗಿರುವು ತಿಳಿದು ಬಂದಿದೆ.
ತನ್ನ ಹಿಂದಿನ ಸೀಟಿನಲ್ಲಿ ಕುಳಿತಿದ್ದ ಇಬ್ಬರು ಹಿಂದಿ ಮಾತನಾಡುವ ಪುರುಷರ ಮೇಲೆ ಆಕೆ ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಿದ್ದಾರೆ.
ಕಳ್ಳತನ ನಡೆದ ಸ್ಥಳದ ಬಗ್ಗೆ ಸ್ಪಷ್ಟತೆ ಸಿಕ್ಕಿಲ್ಲ. ಹೀಗಾಗಿ ಸಂಗೀತಾ ಅವರು ಯಾವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಬೇಕು ಎಂದು ತಿಳಿಯದೆ ಪರದಾಡಿದ್ದು, ಕೊನೆಗೆ ಆಕೆ ನ್ಯಾಯಾಲಯದ ಮೊರೆ ಹೋಗಿದ್ದು, ನ್ಯಾಯಾಲಯದ ನಿರ್ದೇಶನದಂತೆ ಕೋಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಠಾಣಾಧಿಕಾರಿ ಮಧು ಮುಂದಿನ ತನಿಖೆ ಕೈಗೊಂಡಿದ್ದಾರೆ.
Join our Whatsapp group by clicking the below link 👇👇
ಸುರತ್ಕಲ್ ಎನ್‌ಐಟಿಕೆಯಲ್ಲಿ ನಿವೃತ್ತ ಮಿಗ್-21 ಯುದ್ಧ ವಿಮಾನ ಅನಾವರಣ ಮಂಗಳೂರು: ಸುರತ್ಕಲ್‌ನ ರಾಷ್ಟ್ರೀಯ ತಾಂತ್ರಿಕ ಸಂಸ್ಥೆ ಕರ್ನಾಟಕ (ಎನ್‌ಐಟಿಕೆ)ಯ ಮುಂಭಾಗದಲ್ಲಿ…
ಡಿಜಿಟಲ್ ಜಗತ್ತಿಗೆ ತುಳು ಲಿಪಿಯ ಹೊಸ ಹೆಜ್ಜೆ: ‘ಕುರಲ್ ತುಳು ಟಚ್’ ಕೀಬೋರ್ಡ್ ಬಿಡುಗಡೆ ಮಂಗಳೂರು: ಕರಾವಳಿ ಕರ್ನಾಟಕದ ಹೆಮ್ಮೆಯ…
ಶಿರ್ವ : ಸೂಡ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು, ಶಾಲಾ ಮಕ್ಕಳಲ್ಲಿ ಆತಂಕ ಶಿರ್ವ: ಸೂಡ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ…
ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ ನವದೆಹಲಿ: ಭಾರತೀಯ ವಾಯುಪಡೆಯ ಮುಂದಿನ ಮುಖ್ಯಸ್ಥರಾಗಿ ಏರ್…
ಕಾರ್ಕಳ : ಮನೆಯ ಗೋಡೌನ್‌ನಿಂದ 95 ಸಾವಿರ ರೂ. ಮೌಲ್ಯದ ಅಡಿಕೆ ಕಳವು ಕಾರ್ಕಳ: ತಾಲೂಕಿನ ಮಿಯ್ಯಾರು ಗ್ರಾಮದ ಮನೆಯೊಂದರ…
ಮೋದಿ ಸರ್ಕಾರದಿಂದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ದಿಕ್ಕು: ಬಿ.ವೈ .ವಿಜಯೇಂದ್ರ ಗದಗ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ…