ಕುಂದಾಪುರ: ಬಸ್ಸಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪತಿ ಸಾವು ಪತ್ನಿ ಗಂಭೀರ -Vishwanews24

ಕುಂದಾಪುರ: ಗುರುವಾರ ಸಂಜೆ ಕೊಲ್ಲೂರಿನಿಂದ ಉಡುಪಿಗೆ ಬರುತ್ತಿದ್ದ ಬಸ್ಸಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ದಂಪತಿ ಪೈಕಿಪತಿ ರಾಜ್‌ಕುಮಾರ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯಲ್ಲಿ ಗುರುವಾರ ರಾತ್ರಿಯೇ ನಿಧನ ಹೊಂದಿದ್ದು, ಆತನ ಪತ್ನಿ ಸಂಗೀತಾ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಗುರುವಾರ ತಮಿಳುನಾಡು ಮೂಲದ ಪ್ರಸ್ತುತ ಉಡುಪಿ ಅಂಬಲಪಾಡಿ ಸಮೀಪ ಟೆಂಟಿನಲ್ಲಿ ವಾಸಮಾಡುತ್ತಿರುವ ರಾಜ್‌ಕುಮಾರ್(35) ಹಾಗೂ ಆತನ ಪತ್ನಿ ಸಂಗೀತಾ(28) ವಿಷ ಸೇವಿಸಿದ ಬಳಿಕ ತಮ್ಮ ಒಂದೂವರೆ ವರ್ಷದ ಪುಟ್ಟ ಮಗುವಿಗೂ ವಿಷ ಕುಡಿಸಿದ್ದರು. ವಿಷದ ಅಂಶ ಬಾಲಕನ ಬಾಯಿಯಲ್ಲಿಯೂ ಇತ್ತೆನ್ನಲಾಗಿದ್ದು, ಮಗುವಿನ ಆರೋಗ್ಯ ಸಮಸ್ಥಿತಿಯಲ್ಲಿ ಇರುವುದರಿಂದ ಖಾಲಿ ಬಾಟಲಿಯನ್ನು ಮಗುವಿನ ಬಾಯಿಗೆ ಬಗ್ಗಿಸಿರಬಹುದು ಎಂದು ಅಂದಾಜಿಸಲಾಗಿದೆ.

ಕಾರ್ಕೋಟಕ ವಿಷ: ಆತ್ಮಹತ್ಯೆಗಾಗಿ ದಂಪತಿ ಸೇವಿಸಿದ ವಿಷಕ್ಕೆ ಆಂಟಿಟಾಕ್ಸಿನ್ ಇಲ್ಲ ಎನ್ನಲಾಗಿದ್ದು, ಇದನ್ನು ಅರೋಮೈನ್ ಅಥವಾ ಯೆಲ್ಲೋ ಕೌ ಡಂಗ್ ಪೌಡರ್ ಎಂದು ಕರೆಯಲಾಗುತ್ತದೆ. ಫ್ಲೋರೋಸೆಂಟ್ ಹಳದಿ ಬಣ್ಣ ಹೊಂದಿರುವ ವಾಸನೆಯಿಲ್ಲದ, ರುಚಿಯೂ ಇಲ್ಲದ ಆದರೆ ಕಾರ್ಕೋಟಕ ವಿಷವಾಗಿರು ಈ ಅರೋಮೈನ್ ದ್ರಾವಣನ್ನು ತಮಿಳುನಾಡು, ಈರೋಡ್, ಕೊಯಮುತ್ತೂರು, ತಿರಪ್ಪೂರು ಮೊದಲಾದೆಡೆ ಬಹುತೇಕ ಮಂದಿ ಆತ್ಮಹತ್ಯಗೆ ಬಳಸಿದ ಬಗ್ಗೆ ದಾಖಲೆಗಳಿವೆ, ಬಹುಷಃ ರಾಜ್‌ಕುಮಾರ್ ದಂಪತಿ ಈ ಹಿಂದೆಯೇ ಈ ವಿಷವನ್ನು ತಮಿಳುನಾಡಿನಿಂದ ತಂದಿದ್ದು, ಬ್ಯಾಗಿನಲ್ಲಿಟ್ಟುಕೊಂಡಿರಬೇಕು ಎಂದು ಅಂದಾಜಿಸಲಾಗಿದೆ.

ಕುಂದಾಪುರದಲ್ಲಿ ಪ್ರಥಮ ಚಿಕಿತ್ಸೆ ಬಳಿಕ ಉಡುಪಿ ಅಜ್ಜರಕಾಡಿಗೆ ಸಾಗಿಸಲಾಯಿತಾದರೂ ಗಂಭೀರಗೊಂಡಿದ್ದ ಅವರನ್ನು ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ರಾಜ್‌ಕುಮಾರ್ ಗುರುವಾರ ರಾತ್ರಿಯೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಕಂಡ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

19 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago