Featured

ಕುಂದಾಪುರ: ಬಸ್ ನಿಂದ ಇಳಿಯುತ್ತಿದ್ದಾಗ ಆಯತಪ್ಪಿ ಚಕ್ರದಡಿ ಸಿಲುಕಿ ವಿದ್ಯಾರ್ಥಿ ದಾರುಣ ಸಾವು – Vishwanews24

ಬಸ್ ನ‌ ಫೂಟ್ ಬೋರ್ಡ್‌ ಮೇಲೆ ಕಾಲೇಜು ವಿದ್ಯಾರ್ಥಿಗಳ ಅಪಾಯಕಾರಿ ಸಂಚಾರ..

ಬಸ್ ನಿಂದ ಇಳಿಯುತ್ತಿದ್ದಾಗ ವಿದ್ಯಾರ್ಥಿಯ ಮೇಲೆ ಹರಿದ ಬಸ್..

ಆಯತಪ್ಪಿ ಬಸ್ ನ ಚಕ್ರದಡಿ ಸಿಲುಕಿ ವಿದ್ಯಾರ್ಥಿ ದಾರುಣ ಸಾವು..

ಹೆಚ್ಚುವರಿ ಸರ್ಕಾರಿ ಬಸ್ ಗೆ ಸಾರ್ವಜನಿಕರ ಆಗ್ರಹ..

ಕುಂದಾಪುರ: ಬಸ್ ಫೂಟ್ ಬೋರ್ಡ್ ಮೇಲೆ ನಿಂತು ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿಯೋರ್ವ ಕೆಳಗೆ ಇಳಿಯುವ ಸಂದರ್ಭದಲ್ಲಿ ಆಯತಪ್ಪಿ ಬಸ್ ನ ಚಕ್ರದಡಿ ಸಿಲುಕಿ ಸಾವನ್ನಪ್ಪಿದ ದಾರುಣ ಘಟನೆ ಶನಿವಾರ ಬೆಳಿಗ್ಗೆ ಹೆಮ್ಮಾಡಿಯ ಜಂಕ್ಷನ್ ನಲ್ಲಿ ನಡೆದಿದೆ.

ಹೆಮ್ಮಾಡಿ ಸಮೀಪದ‌ ಕಟ್ ಬೇಲ್ತೂರು ನಿವಾಸಿ, ಕೋಟೇಶ್ವರ ಕಾಗೇರಿ ಕಾಲೇಜಿನ ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿ ಸುದೀಪ್ (20) ಸಾವನ್ನಪ್ಪಿದ ದುರ್ದೈವಿ.

ಶನಿವಾರ ಬೆಳಿಗ್ಗೆ ಸಾಗರದಿಂದ ಕುಂದಾಪುರಕ್ಕೆ ತೆರಳುವ ಖಾಸಗಿ ಬಸ್ ನಲ್ಲಿ ಸುದೀಪ್ ಸಂಚರಿಸುತ್ತಿದ್ದಾಗ ಈ ಅವಘಡ ನಡೆದಿದೆ. ಹೆಮ್ಮಾಡಿ ಜಂಕ್ಷನ್ ಹಿಂದಿನ ನಿಲ್ದಾಣವಾದ ಕಟ್ ಬೇಲ್ತೂರಿನಲ್ಲಿ ಬಸ್ ಹತ್ತಿದ್ದ ಸುದೀಪ್ ಬಸ್ ನೊಳಗೆ ಜನ ಹಾಗೂ ವಿದ್ಯಾರ್ಥಿಗಳು ತುಂಬಿದ್ದರಿಂದ ಫೂಟ್ ಬೋರ್ಡ್ ಮೇಲೆ ನಿಂತು ಸಾಗುತ್ತಿದ್ದರು. ಹೆಮ್ಮಾಡಿಯಲ್ಲಿ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಇಳಿಸಿ ಮತ್ತೆ ಹತ್ತಿಸಿಕೊಳ್ಳಲಾಯಿತು. ಬಸ್ ಮತ್ತೆ ಚಲಿಸಲು ಪ್ರಾರಂಭಿಸುತ್ತಿದ್ದ ವೇಳೆ ಮಹಿಳೆಯೊಬ್ಬರು ಇಳಿಯದ ಹಿನ್ನೆಲೆ ಮತ್ತೆ ಅವರನ್ನು ಇಳಿಸಲು ಬಸ್ ನಿಲ್ಲಿಸುತ್ತಿದ್ದಾಗ ಸುದೀಪ್ ಹಠಾತ್ತನೆ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ. ಬಸ್ ಗೆ ಮುಂಭಾಗದಲ್ಲಿ ಮಾತ್ರವೇ ಬಾಗಿಲಿದ್ದ ಕಾರಣ ಮುಂಬದಿಯ ಬಾಗಿಲಲ್ಲಿ ನಿಂತಿದ್ದ ಸುದೀಪ್ ಬಸ್ ನ ಮುಂಬದಿಯ ಚಕ್ರದಡಿಯಲ್ಲಿ ಸಿಲುಕಿದ್ದಾನೆ. ಚಾಲಕ ವಿದ್ಯಾರ್ಥಿಯನ್ನು ಉಳಿಸುವ ಪ್ರಯತ್ನ ನಡೆಸಿದರಾದರೂ ಸೊಂಟದ ಮೇಲೆ ಚಕ್ರ ಹರಿದ ಪರಿಣಾಮ ಗಂಭೀರ ಗಾಯಗೊಂಡ ಸುದೀಪ್ ಕೊನೆಯುಸಿರೆಳೆದಿದ್ದಾನೆ.

ಜೀವಭಯದಲ್ಲೇ ಸಂಚಾರ
ಕುಂದಾಪುರ ಭಾಗದ ಎಲ್ಲಾ ಶೈಕ್ಷಣಿಕ ಸಂಸ್ಥೆಗಳು ಒಂದೇ ಸಮಯದಲ್ಲಿ ಆರಂಭವಾಗುವ ಕಾರಣ ಬೆಳಗ್ಗಿನ‌ ಶಾಲಾ-ಕಾಲೇಜು ಆರಂಭಗೊಳ್ಳುವ ಸಮಯದಲ್ಲಿ ಎಲ್ಲಾ ಖಾಸಗಿ ಹಾಗೂ ಸರ್ಕಾರಿ ಬಸ್ ಗಳು ತುಂಬಿ ವಿದ್ಯಾರ್ಥಿಗಳು ಬಸ್ ನ‌ ಫೂಟ್ ಬೋರ್ಡ್‌ ಮೇಲೆ ಜೀವಭಯದಲ್ಲೇ ನಿಂತು ಸಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ಹೆಚ್ಚುವರಿ ಬಸ್ ಗೆ ಆಗ್ರಹ:
ವಿದ್ಯಾರ್ಥಿಗಳು ಬಸ್ ಫೂಟ್ ಬೋರ್ಡ್ ಮೇಲೆ ನಿಂತು ಸಾಗುತ್ತಿದ್ದಾಗ ಆಯತಪ್ಪಿ ಬಿದ್ದು ಸಾವನ್ನಪ್ಪಿದ‌ ಪ್ರಕರಣ ಮತ್ತೆ ಮತ್ತೆ ಮರುಕಳಿಸುತ್ತಿದ್ದರೂ ಏನೂ‌ ಕ್ರಮ ಕೈಗೊಳ್ಳದ ಆಡಳಿತದ ವಿರುದ್ದ ಸಾರ್ವಜನಿಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಶಾಲಾ- ಕಾಲೇಜಿಗೆ ಹೋಗುವ ಹಾಗೂ ಬರುವ ಸಮಯದಲ್ಲಾದರೂ ಹೆಚ್ಚುವರಿ ಸರ್ಕಾರಿ ಬಸ್ ಗಳನ್ನು ಬಿಡಲಿ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

15 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

15 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

16 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

16 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

16 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

17 hours ago