ಕುಂದಾಪುರ: ಬಸ್ ಫೂಟ್ ಬೋರ್ಡ್ ಮೇಲೆ ನಿಂತು ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿಯೋರ್ವ ಕೆಳಗೆ ಇಳಿಯುವ ಸಂದರ್ಭದಲ್ಲಿ ಆಯತಪ್ಪಿ ಬಸ್ ನ ಚಕ್ರದಡಿ ಸಿಲುಕಿ ಸಾವನ್ನಪ್ಪಿದ ದಾರುಣ ಘಟನೆ ಶನಿವಾರ ಬೆಳಿಗ್ಗೆ ಹೆಮ್ಮಾಡಿಯ ಜಂಕ್ಷನ್ ನಲ್ಲಿ ನಡೆದಿದೆ.
ಹೆಮ್ಮಾಡಿ ಸಮೀಪದ ಕಟ್ ಬೇಲ್ತೂರು ನಿವಾಸಿ, ಕೋಟೇಶ್ವರ ಕಾಗೇರಿ ಕಾಲೇಜಿನ ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿ ಸುದೀಪ್ (20) ಸಾವನ್ನಪ್ಪಿದ ದುರ್ದೈವಿ.
ಶನಿವಾರ ಬೆಳಿಗ್ಗೆ ಸಾಗರದಿಂದ ಕುಂದಾಪುರಕ್ಕೆ ತೆರಳುವ ಖಾಸಗಿ ಬಸ್ ನಲ್ಲಿ ಸುದೀಪ್ ಸಂಚರಿಸುತ್ತಿದ್ದಾಗ ಈ ಅವಘಡ ನಡೆದಿದೆ. ಹೆಮ್ಮಾಡಿ ಜಂಕ್ಷನ್ ಹಿಂದಿನ ನಿಲ್ದಾಣವಾದ ಕಟ್ ಬೇಲ್ತೂರಿನಲ್ಲಿ ಬಸ್ ಹತ್ತಿದ್ದ ಸುದೀಪ್ ಬಸ್ ನೊಳಗೆ ಜನ ಹಾಗೂ ವಿದ್ಯಾರ್ಥಿಗಳು ತುಂಬಿದ್ದರಿಂದ ಫೂಟ್ ಬೋರ್ಡ್ ಮೇಲೆ ನಿಂತು ಸಾಗುತ್ತಿದ್ದರು. ಹೆಮ್ಮಾಡಿಯಲ್ಲಿ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಇಳಿಸಿ ಮತ್ತೆ ಹತ್ತಿಸಿಕೊಳ್ಳಲಾಯಿತು. ಬಸ್ ಮತ್ತೆ ಚಲಿಸಲು ಪ್ರಾರಂಭಿಸುತ್ತಿದ್ದ ವೇಳೆ ಮಹಿಳೆಯೊಬ್ಬರು ಇಳಿಯದ ಹಿನ್ನೆಲೆ ಮತ್ತೆ ಅವರನ್ನು ಇಳಿಸಲು ಬಸ್ ನಿಲ್ಲಿಸುತ್ತಿದ್ದಾಗ ಸುದೀಪ್ ಹಠಾತ್ತನೆ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ. ಬಸ್ ಗೆ ಮುಂಭಾಗದಲ್ಲಿ ಮಾತ್ರವೇ ಬಾಗಿಲಿದ್ದ ಕಾರಣ ಮುಂಬದಿಯ ಬಾಗಿಲಲ್ಲಿ ನಿಂತಿದ್ದ ಸುದೀಪ್ ಬಸ್ ನ ಮುಂಬದಿಯ ಚಕ್ರದಡಿಯಲ್ಲಿ ಸಿಲುಕಿದ್ದಾನೆ. ಚಾಲಕ ವಿದ್ಯಾರ್ಥಿಯನ್ನು ಉಳಿಸುವ ಪ್ರಯತ್ನ ನಡೆಸಿದರಾದರೂ ಸೊಂಟದ ಮೇಲೆ ಚಕ್ರ ಹರಿದ ಪರಿಣಾಮ ಗಂಭೀರ ಗಾಯಗೊಂಡ ಸುದೀಪ್ ಕೊನೆಯುಸಿರೆಳೆದಿದ್ದಾನೆ.
ಜೀವಭಯದಲ್ಲೇ ಸಂಚಾರ
ಕುಂದಾಪುರ ಭಾಗದ ಎಲ್ಲಾ ಶೈಕ್ಷಣಿಕ ಸಂಸ್ಥೆಗಳು ಒಂದೇ ಸಮಯದಲ್ಲಿ ಆರಂಭವಾಗುವ ಕಾರಣ ಬೆಳಗ್ಗಿನ ಶಾಲಾ-ಕಾಲೇಜು ಆರಂಭಗೊಳ್ಳುವ ಸಮಯದಲ್ಲಿ ಎಲ್ಲಾ ಖಾಸಗಿ ಹಾಗೂ ಸರ್ಕಾರಿ ಬಸ್ ಗಳು ತುಂಬಿ ವಿದ್ಯಾರ್ಥಿಗಳು ಬಸ್ ನ ಫೂಟ್ ಬೋರ್ಡ್ ಮೇಲೆ ಜೀವಭಯದಲ್ಲೇ ನಿಂತು ಸಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.
ಹೆಚ್ಚುವರಿ ಬಸ್ ಗೆ ಆಗ್ರಹ:
ವಿದ್ಯಾರ್ಥಿಗಳು ಬಸ್ ಫೂಟ್ ಬೋರ್ಡ್ ಮೇಲೆ ನಿಂತು ಸಾಗುತ್ತಿದ್ದಾಗ ಆಯತಪ್ಪಿ ಬಿದ್ದು ಸಾವನ್ನಪ್ಪಿದ ಪ್ರಕರಣ ಮತ್ತೆ ಮತ್ತೆ ಮರುಕಳಿಸುತ್ತಿದ್ದರೂ ಏನೂ ಕ್ರಮ ಕೈಗೊಳ್ಳದ ಆಡಳಿತದ ವಿರುದ್ದ ಸಾರ್ವಜನಿಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಶಾಲಾ- ಕಾಲೇಜಿಗೆ ಹೋಗುವ ಹಾಗೂ ಬರುವ ಸಮಯದಲ್ಲಾದರೂ ಹೆಚ್ಚುವರಿ ಸರ್ಕಾರಿ ಬಸ್ ಗಳನ್ನು ಬಿಡಲಿ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…