ಕುಂದಾಪುರ: ದೇವಸ್ಥಾನದ ರಕ್ಷಣೆಯ ಹೆಸರಲ್ಲಿ ನಾಟಕವಾಡಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಇದೀಗ ಹಿಂದೂ ದೇವಾಲಯಗಳನ್ನು ಉರುಳಿಸಲು ಮುಂದಾಗಿದೆ. ಬಿಜೆಪಿ ನಾಯಕರ ಇಂತಹ ಕಪಟ ಹಿಂದೂತ್ವಕ್ಕೆ ರಾಜ್ಯದ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಗೋಪಾಲ ಪೂಜಾರಿ ವಾಗ್ದಾಳಿ ನಡೆಸಿದರು.
ಅವರು ಮೈಸೂರು ನಂಜನಗೂಡಿನ ಪುರಾತನ ಹಿಂದೂ ದೇವಾಲಯ ಸೇರಿದಂತೆ ಧಾರ್ಮಿಕ ಕೇಂದ್ರಗಳನ್ನು ದ್ವಂಸ ಮಾಡುತ್ತಿರುವ ಬಿಜೆಪಿ ಸರ್ಕಾರದ ವಿರುದ್ದ ಬೈಂದೂರು ಯೂತ್ ಕಾಂಗ್ರೆಸ್ ನೇತೃತ್ವದಲ್ಲಿ ಸೋಮವಾರ ಸಂಜೆ ನಡೆದ ಬೃಹತ್ ಪಂಜಿನ ಮೆರವಣಿಗೆಯ ಬಹಿರಂಗಸಭೆಯಲ್ಲಿ ಮಾತನಾಡಿದರು.
ಎರಡು ಸಾವಿರ ಕೋಟಿಗೂ ಅಧಿಕ ಯೋಜನೆಗಳನ್ನು ತಂದು ಬೈಂದೂರನ್ನು ಮಾದರಿ ಕ್ಷೇತ್ರವನ್ನಾಗಿಸಿದರೂ ಮನೆಮನೆಗೆ ತೆರಳಿ ಹಿಂದೂತ್ವದ ಹೆಸರಲ್ಲಿ ನನ್ನ ವಿರುದ್ದ ಅಪಪ್ರಚಾರ ನಡೆಸಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಆದರೆ ಇಂದು ಬಿಜೆಪಿಯ ಸುಳ್ಳು ಪ್ರಚಾರಕ್ಕೆ ಜನರು ಎಚ್ಚೆತ್ತುಕೊಂಡಿದ್ದಾರೆ. ದೇವಸ್ಥಾನದ ನಿರ್ಮಾಣಗಳ ವಿಚಾರದಲ್ಲಿ ಕಾಂಗ್ರೆಸ್‍ನ ಕೊಡುಗೆ ಅಪಾರವಾದುದು. ಹಿಂದೂ ದೇವಾಲಯಗಳನ್ನು ಉರುಳಿಸಿದ ಕೀರ್ತಿ ಅದು ಬಿಜೆಪಿಗೆ ಸಲ್ಲುತ್ತದೆ. ಹಿಂದೂತ್ವದ ಹೆಸರಲ್ಲಿ ಮಾಡುತ್ತಿರುವ ಕಪಟ ನಾಟಕವನ್ನು ನಿಲ್ಲಿಸಿ ಪ್ರಾಮಾಣಿಕವಾಗಿ ಹಿಂದೂ ದೇವಾಲಯಗಳ ರಕ್ಷಣೆ ಮಾಡುವಂತಹ ಕೆಲಸಕ್ಕೆ ಮುಂದಾಗಿ ಎಂದು ಗೋಪಾಲ ಪೂಜಾರಿ ಆಗ್ರಹಿಸಿದರು.
ಸಾಕಷ್ಟು ಸಂಖ್ಯೆಯಲ್ಲಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಬೈಂದೂರು KSRTC ಬಸ್ ನಿಲ್ದಾಣದಿಂದ ಶನೇಶ್ವರ ದೇವಸ್ಥಾನದ ತನಕವೂ ಬೃಹತ್ ಪಂಜಿನ ಮೆರವಣಿಗೆಯಲ್ಲಿ ಸಾಗಿ ಬಿಜೆಪಿ ಸರ್ಕಾರದ ವಿರುದ್ದ ಆಕ್ರೋಶದ ಘೋಷಣೆಗಳನ್ನು ಕೂಗಿದರು.
ಯೂತ್ ಕಾಂಗ್ರೆಸ್‍ನ ಜಿಲ್ಲಾಧ್ಯಕ್ಷರಾದ ದೀಪಕ್ ಕೋಟ್ಯಾನ್, ಬೈಂದೂರು ಯೂತ್ ಕಾಂಗ್ರೆಸ್‍ನ ಶೇಖರ ಪೂಜಾರಿ, ಮುಖಂಡರಾದ ರಾಜು ಪೂಜಾರಿ, ಮದನ್ ಕುಮಾರ್, ಪ್ರದೀಪ್ ಶೆಟ್ಟಿ ಗುಡಿಬೆಟ್ಟು, ಶರತ್ ಕುಮಾರ್ ಶೆಟ್ಟಿ, ರಮೇಶ್ ಗಾಣಿಗ, ಗೌರಿ ದೇವಾಡಿಗ, ಜಗದೀಶ್ ದೇವಾಡಿಗ, ಪ್ರಶಾಂತ ಪೂಜಾರಿ ಕರ್ಕಿ ಮೊದಲಾದವರು ಇದ್ದರು.
ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…
ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…
ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…