Featured

ಕುಂದಾಪುರ: ಬಿಜೆಪಿ ನಾಯಕರ ಕಪಟ ಹಿಂದೂತ್ವಕ್ಕೆ ರಾಜ್ಯದ ಜನ ತಕ್ಕ ಪಾಠ ಕಲಿಸುತ್ತಾರೆ : ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ – Vishwanews24

ಕುಂದಾಪುರ: ಬಿಜೆಪಿ ನಾಯಕರ ಕಪಟ ಹಿಂದೂತ್ವಕ್ಕೆ ರಾಜ್ಯದ ಜನ ತಕ್ಕ ಪಾಠ ಕಲಿಸುತ್ತಾರೆ : ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ – Vishwanews24

ಕುಂದಾಪುರ: ದೇವಸ್ಥಾನದ ರಕ್ಷಣೆಯ ಹೆಸರಲ್ಲಿ ನಾಟಕವಾಡಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಇದೀಗ ಹಿಂದೂ ದೇವಾಲಯಗಳನ್ನು ಉರುಳಿಸಲು ಮುಂದಾಗಿದೆ. ಬಿಜೆಪಿ ನಾಯಕರ ಇಂತಹ ಕಪಟ ಹಿಂದೂತ್ವಕ್ಕೆ ರಾಜ್ಯದ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಗೋಪಾಲ ಪೂಜಾರಿ ವಾಗ್ದಾಳಿ ನಡೆಸಿದರು.

ಅವರು ಮೈಸೂರು ನಂಜನಗೂಡಿನ ಪುರಾತನ ಹಿಂದೂ ದೇವಾಲಯ ಸೇರಿದಂತೆ ಧಾರ್ಮಿಕ ಕೇಂದ್ರಗಳನ್ನು ದ್ವಂಸ ಮಾಡುತ್ತಿರುವ ಬಿಜೆಪಿ ಸರ್ಕಾರದ ವಿರುದ್ದ ಬೈಂದೂರು ಯೂತ್ ಕಾಂಗ್ರೆಸ್ ನೇತೃತ್ವದಲ್ಲಿ ಸೋಮವಾರ ಸಂಜೆ ನಡೆದ ಬೃಹತ್ ಪಂಜಿನ ಮೆರವಣಿಗೆಯ ಬಹಿರಂಗಸಭೆಯಲ್ಲಿ ಮಾತನಾಡಿದರು.

ಎರಡು ಸಾವಿರ ಕೋಟಿಗೂ ಅಧಿಕ ಯೋಜನೆಗಳನ್ನು ತಂದು ಬೈಂದೂರನ್ನು ಮಾದರಿ ಕ್ಷೇತ್ರವನ್ನಾಗಿಸಿದರೂ ಮನೆಮನೆಗೆ ತೆರಳಿ ಹಿಂದೂತ್ವದ ಹೆಸರಲ್ಲಿ ನನ್ನ ವಿರುದ್ದ ಅಪಪ್ರಚಾರ ನಡೆಸಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಆದರೆ ಇಂದು ಬಿಜೆಪಿಯ ಸುಳ್ಳು ಪ್ರಚಾರಕ್ಕೆ ಜನರು ಎಚ್ಚೆತ್ತುಕೊಂಡಿದ್ದಾರೆ. ದೇವಸ್ಥಾನದ ನಿರ್ಮಾಣಗಳ ವಿಚಾರದಲ್ಲಿ ಕಾಂಗ್ರೆಸ್‍ನ ಕೊಡುಗೆ ಅಪಾರವಾದುದು. ಹಿಂದೂ ದೇವಾಲಯಗಳನ್ನು ಉರುಳಿಸಿದ ಕೀರ್ತಿ ಅದು ಬಿಜೆಪಿಗೆ ಸಲ್ಲುತ್ತದೆ. ಹಿಂದೂತ್ವದ ಹೆಸರಲ್ಲಿ ಮಾಡುತ್ತಿರುವ ಕಪಟ ನಾಟಕವನ್ನು ನಿಲ್ಲಿಸಿ ಪ್ರಾಮಾಣಿಕವಾಗಿ ಹಿಂದೂ ದೇವಾಲಯಗಳ ರಕ್ಷಣೆ ಮಾಡುವಂತಹ ಕೆಲಸಕ್ಕೆ ಮುಂದಾಗಿ ಎಂದು ಗೋಪಾಲ ಪೂಜಾರಿ ಆಗ್ರಹಿಸಿದರು.

ನಾಡ ಹಬ್ಬ ದಸರಾ ಆಚರಣೆಗೆ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ ; ದಸರಾ ಉದ್ಘಾಟನ ಕಾರ್ಯಕ್ರಮಕ್ಕೆ 100 ಜನರಿಗೆ ಮಾತ್ರ ಪ್ರವೇಶ – Vishwanews24

ಸಾಕಷ್ಟು ಸಂಖ್ಯೆಯಲ್ಲಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಬೈಂದೂರು KSRTC ಬಸ್ ನಿಲ್ದಾಣದಿಂದ ಶನೇಶ್ವರ ದೇವಸ್ಥಾನದ ತನಕವೂ ಬೃಹತ್ ಪಂಜಿನ ಮೆರವಣಿಗೆಯಲ್ಲಿ ಸಾಗಿ ಬಿಜೆಪಿ ಸರ್ಕಾರದ ವಿರುದ್ದ ಆಕ್ರೋಶದ ಘೋಷಣೆಗಳನ್ನು ಕೂಗಿದರು.

ಯೂತ್ ಕಾಂಗ್ರೆಸ್‍ನ ಜಿಲ್ಲಾಧ್ಯಕ್ಷರಾದ ದೀಪಕ್ ಕೋಟ್ಯಾನ್, ಬೈಂದೂರು ಯೂತ್ ಕಾಂಗ್ರೆಸ್‍ನ ಶೇಖರ ಪೂಜಾರಿ, ಮುಖಂಡರಾದ ರಾಜು ಪೂಜಾರಿ, ಮದನ್ ಕುಮಾರ್, ಪ್ರದೀಪ್ ಶೆಟ್ಟಿ ಗುಡಿಬೆಟ್ಟು, ಶರತ್ ಕುಮಾರ್ ಶೆಟ್ಟಿ, ರಮೇಶ್ ಗಾಣಿಗ, ಗೌರಿ ದೇವಾಡಿಗ, ಜಗದೀಶ್ ದೇವಾಡಿಗ, ಪ್ರಶಾಂತ ಪೂಜಾರಿ ಕರ್ಕಿ ಮೊದಲಾದವರು ಇದ್ದರು.

Vishwa News 24

Recent Posts

ಶಿರ್ವ: ಪಾಪನಾಶಿನಿ ಹೊಳೆಯಲ್ಲಿ ಹಸುವಿನ ಅವಶೇಷ ಪತ್ತೆ; ಪ್ರಕರಣ ದಾಖಲು – vishwanews24

ಶಿರ್ವ: ಪಾಪನಾಶಿನಿ ಹೊಳೆಯಲ್ಲಿ ಹಸುವಿನ ಅವಶೇಷ ಪತ್ತೆ; ಪ್ರಕರಣ ದಾಖಲು ಶಿರ್ವ: ಕಾಪು ತಾಲೂಕಿನ ಶಿರ್ವ ಗ್ರಾಮದ ಕಲ್ಲೊಟ್ಟು ಸೇತುವೆ…

11 hours ago

ಬೈಂದೂರು: ಶಿರೂರು ನದಿಯಲ್ಲಿ ಈಜಲು ತೆರಳಿದ್ದ ಹಾವೇರಿ ಮೂಲದ ವಿದ್ಯಾರ್ಥಿ ನೀರುಪಾಲು – vishwanews24

ಬೈಂದೂರು: ಶಿರೂರು ನದಿಯಲ್ಲಿ ಈಜಲು ತೆರಳಿದ್ದ ಹಾವೇರಿ ಮೂಲದ ವಿದ್ಯಾರ್ಥಿ ನೀರುಪಾಲು ಬೈಂದೂರು : ಕುಟುಂಬದವರೊಂದಿಗೆ ಪ್ರವಾಸಕ್ಕೆ ಬಂದಿದ್ದ ಹಾವೇರಿ…

11 hours ago

ಉಡುಪಿ: ಡಿಕೆಶಿ ಸಂಪುಟದಲ್ಲಿ ಜಾರ್ಜ್ ಗೆ ಉಪ ಮುಖ್ಯಮಂತ್ರಿ, ಐವನ್ ಗೆ ಸಚಿವ ಸ್ಥಾನ ನೀಡಲು ಕಥೊಲಿಕ್ ಸಭಾ ಆಗ್ರಹ – vishwanews24

ಉಡುಪಿ: ಡಿಕೆಶಿ ಸಂಪುಟದಲ್ಲಿ ಜಾರ್ಜ್ ಗೆ ಉಪ ಮುಖ್ಯಮಂತ್ರಿ, ಐವನ್ ಗೆ ಸಚಿವ ಸ್ಥಾನ ನೀಡಲು ಕಥೊಲಿಕ್ ಸಭಾ ಆಗ್ರಹ…

14 hours ago

ಮಲೇಷ್ಯಾದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆ ನಿಷೇಧ – vishwanews24

ಮಲೇಷ್ಯಾದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆ ನಿಷೇಧ.. ನಿಯಮ ಉಲ್ಲಂಘಸಿದ್ರೆ 23.95 ಕೋಟಿ ರೂ. ದಂಡ ಕೌಲಾಲಂಪುರ್: 16…

14 hours ago

ಸುವೇಂಧು ಸಂಪುಟ ವಿಸ್ತರಣೆ: ಬಂಗಾಳದ ನೂತನ ಸಚಿವರಾಗಿ 35 ಶಾಸಕರಿಂದ ಪ್ರಮಾಣ ಸ್ವೀಕಾರ – vishwanews24

ಸುವೇಂಧು ಸಂಪುಟ ವಿಸ್ತರಣೆ: ಬಂಗಾಳದ ನೂತನ ಸಚಿವರಾಗಿ 35 ಶಾಸಕರಿಂದ ಪ್ರಮಾಣ ಸ್ವೀಕಾರ ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು…

14 hours ago

ಬೆಂಗಳೂರು – ಮಂಗಳೂರು ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ರದ್ದು – vishwanews24

ಬೆಂಗಳೂರು – ಮಂಗಳೂರು ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ರದ್ದು ಮಂಗಳೂರು : ಜೂನ್ 3ರಂದು ನಿಗದಿಯಾಗಿದ್ದ ಬಹು…

16 hours ago