udupi – ಕುಂದಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿಯಲ್ಲಿ ಎದ್ದಿರುವ ಭಿನ್ನಮತ ಸ್ಪೋಟಗೊಂಡ ಬೆನ್ನಲ್ಲೇ ಹಾಲಾಡಿ ಶ್ರೀನಿವಾಸ ಶೆಟ್ಟಿ ಮೌನಮುರಿದಿದ್ದಾರೆ. ಹೌದು ಭಿನ್ನಮತ, ವಿರೋಧ ಹೀಗೆ ಯಾವುದೇ ರಾಜಕೀಯ ಬೆಳವಣಿಗೆ ಬಗ್ಗೆ ಚಕಾರ ಎತ್ತದ ಹಾಲಾಡಿ ಇಂದು ಎಲ್ಲಾ ಆರೋಪಗಳಿಗೆ ಪ್ರತ್ಯುತ್ತರ ನೀಡಿದ್ದಾರೆ.
ಬಿಜೆಪಿ ತೊರೆದು ಪಕ್ಷೇತರರಾಗಿ ಗೆದ್ದು ಮತ್ತೆ ಬಿಜೆಪಿಗೆ ಬಂದ ಹಾಲಾಡಿ ಶ್ರೀನಿವಾಸ ಶೆಟ್ಟಿವರಿಗೆ ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ವಿರೋಧದ ನಡುವೆಯೂ ಟಿಕೆಟ್ ಸಿಕ್ಕಿರುವುದು ಮೂಲ ಬಿಜೆಪಿಗರನ್ನು ಕೆರಳಿಸಿದೆ. ಇದಕ್ಕೆ 7ಮಂದಿ ಪದಾಧಿಕಾರಿಗಳು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿ ಹಾಲಾಡಿ ವಿರುದ್ದ ಕೆಲಸ ಮಾಡುವ ಶಪಥ ಕೈಗೊಂಡಿದ್ರು ಇದಕ್ಕೆ ಹಾಲಾಡಿ ಶ್ರೀನಿವಾಸ ಶೆಟ್ಟಿ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ಪಕ್ಷದೊಳಗಿನ ಭಿನ್ನಮತವನ್ನು ರಾಜ್ಯಾಧ್ಯಕ್ಷ ರು ಶಮನ ಮಾಡುತ್ತಾರೆ. ಅಧಿಕೃತ ಅಭ್ಯರ್ಥಿಯಾಗಿ ನನ್ನ ಹೆಸರು ಘೋಷಣೆಯಾಗಿದೆ.ಅತೀ ಹೆಚ್ಚು ಅಂತರದಲ್ಲಿ ಗೆಲ್ಲುತ್ತೇನೆ.ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ಕೆಲಸ ಮಾಡುತ್ತೇನೆ. ಭಿನ್ನಮತೀಯರು ಪಕ್ಷದಲ್ಲಿ ಇದ್ದಾರೋ ಇಲ್ಲವೋ ಅವರೇ ತೀರ್ಮಾನಿಸಲಿ. ಪಕ್ಷದಲ್ಲಿದ್ದರೆ ಅಭ್ಯರ್ಥಿ ಪರ ಕೆಲಸ ಮಾಡಬೇಕು. ಪಕ್ಷ ತೊರೆದವರಿಂದ ಯಾವ ಹಾನಿಯಾಗುತ್ತದೆ ಎಂದು ಜನರಿಗೆ ಗೊತ್ತು ಎಂದು ವಿರೋಧಿಗಳಿಗೆ ತಿರುಗೇಟು ನೀಡಿದ್ದಾರೆ.
ಇನ್ನು ಸಂಸದೆ ಶೋಭಾ ಕರಂದ್ಲಾಜೆ ಕೂಡ ಈ ಭಿನ್ನಮತದ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ, ಎಲ್ಲೆಲ್ಲಿ ಭಿನ್ನಮತವಿರುತ್ತೋ ಅದನ್ನು ಶಮನ ಮಾಡಲಾಗುವುದು. ಯಾವುದೇ ಪಕ್ಷದಲ್ಲಿ ಹೆಚ್ಚುವರಿ ಟಿಕೆಟ್ ಆಕಾಂಕ್ಷಿಯಿರ್ತಾರೆ. ಆದರೆ ಟಿಕೆಟ್ ಒಬ್ಬರಿಗೆ ಸಿಗಲಿದೆ.ಟಿಕೆಟ್ ಸಿಗದವರು ಅಭ್ಯರ್ಥಿಯ ಪರ ಕೆಲಸ ಮಾಡಲಿ. ಕುಂದಾಪುರದಲ್ಲಿ ಕೂಡ ಈ ಅಸಮಧಾನ ಗಮನಕ್ಕೆ ಬಂದಿದೆ. ಯಾರೂ ಅಸಮಧಾನಗೊಂಡಿದ್ದಾರೋ ಅವರನ್ನು ಸಮಾಧಾನಪಡಿಸುತ್ತೇವೆ. ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡುತ್ತೇವೆ. ಹೀಗಾಗಿ ಸರ್ವೇ ಆಧಾರದಲ್ಲಿ ಟಿಕೆಟ್ ನೀಡಲಾಗುತ್ತಿದೆ ಎಂದ್ರು.
ಒಟ್ನಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಭುಗಿಲೆದ್ದಿರುವ ಭಿನ್ನಮತವನ್ನು ಶಮನ ಮಾಡುವ ಕಾರ್ಯ ತೆರೆಮರೆಯ ಹಿಂದೆ ಭರದಿಂದ ಸಾಗಿದೆ. ಇತ್ತ ಹಾಲಾಡಿ ಶ್ರೀನಿವಾಸ ಶೆಟ್ಟಿ ಯಾವುದೇ ವಿರೋಧಗಳಿಗೆ ತಲೆಕೆಡಿಸಿಕೊಳ್ಳದೆ ಎಂದಿನಂತೆ ನಾನೇ ಗೆಲ್ಲುತ್ತೇನೆ ಎಂಬ ಭರವಸೆಯಲ್ಲೇ ಮುಂದೆ ಸಾಗುತ್ತಿದ್ದಾರೆ. ಹೀಗಾಗಿ ಎಲ್ಲರ ಚಿತ್ತ ಸೆಳೆದಿರುವ ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಹಾಲಾಡಿ ಭವಿಷ್ಯ ಯಾವರೀತಿ ಇರಲಿದೆ ಎಂಬುದನ್ನು ಮತಎಣಿಕೆಯ ದಿನವೇ ಕಾದುನೋಡಬೇಕಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…