ಕುಂದಾಪುರ : ಬೆಂಗಳೂರಿನಲ್ಲಿ ನಡೆದ ಸ್ಕೂಟಿ ಹಾಗೂ ಟ್ಯಾಂಕರ್ ನಡುವಿನ ಅಪಘಾತದಲ್ಲಿ ಕುಂದಾಪುರದ ಬೈಂದೂರು ಸಮೀಪದ ಹೊಸ್ಕೋಟೆ ಬಳಿಯ ನಿವಾಸಿ ಸಾವನ್ನಪ್ಪಿದ ಘಟನೆ ಸೆ .12ರ ಭಾನುವಾರ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟವರನ್ನು ಹೊಸ್ಕೋಟೆ ಸಮೀಪದ ಬೊಳ್ಳುಗುಡ್ಡೆ ನಿವಾಸಿ ಪ್ರೇಮ ಪೂಜಾರಿ(35) ಎಂದು ಗುರುತಿಸಲಾಗಿದೆ.
ಪ್ರೇಮ ಪೂಜಾರಿ ಎರಡು ವರ್ಷದ ಹಿಂದೆ ಬೆಂಗಳೂರಿಗೆ ಉದ್ಯೋಗಕ್ಕಾಗಿ ಹೋಗಿದ್ದರು. ಬೆಂಗಳೂರಿನಲ್ಲಿ ಅಂಚೆ ಕಚೇರಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಭಾನುವಾರ ಮಧ್ಯಾಹ್ನ ಪತಿ ಜೊತೆ ಹೊರಗೆ ಹೋಗಿದ್ದರೆನ್ನಲಾಗಿದೆ. ಯಲಹಂಕ ಸಮೀಪ ಅಪಘಾತ ಸಂಭವಿಸಿದ್ದು ಪ್ರೇಮ ಪೂಜಾರಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇಂದು ಬೆಳಿಗ್ಗೆ ದೇಹವನ್ನು ಬೊಳ್ಳುಗುಡ್ಡೆಯ ಸ್ವಗೃಹಕ್ಕೆ ತರಲಾಗಿದ್ದು, ಅಂತ್ಯಕ್ರಿಯೆ ನೆರವೇರಿಸಲಾಯಿತು. ಪ್ರೇಮ ಪೂಜಾರಿಯವರು ಪತಿ, ಇಬ್ಬರು ಮಕ್ಕಳು ಹಾಗೂ ಕುಟುಂಬವನ್ನು ಅಗಲಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…