Featured

ಕುಂದಾಪುರ : ಬ್ಯಾಂಕುಗಳ ವಿಲೀನ ಮಾಡಿರುವುದು ದೇಶದ ಒಳಿತಿಗಾಗಿ : ಸಂಸದ ಬಿ ವೈ ರಾಘವೇಂದ್ರ -Vishwanews24

ಕುಂದಾಪುರ : ಬ್ಯಾಂಕುಗಳ ವಿಲೀನ ಮಾಡಿರುವುದು ದೇಶದ ಒಳಿತಿಗಾಗಿ : ಸಂಸದ ಬಿ ವೈ ರಾಘವೇಂದ್ರ -Vishwanews24

ಕುಂದಾಪುರ: ದೇಶದ ಹಿತದೃಷ್ಟಿಯಿಂದ ಪ್ರಧಾನಿ ನರೇಂದ್ರ ಮೋದಿ ಹಾಗೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಷ್ಟದಲ್ಲಿರುವ ಬ್ಯಾಂಕ್ಗಳನ್ನು ಲಾಭದಲ್ಲಿರುವ ಬ್ಯಾಂಕ್ಗಳೊಂದಿಗೆ ವಿಲೀನಗೊಳಿಸುವ ಪ್ರಕ್ರಿಯೆ ಮಾಡಿದ್ದಾರೆ. ಇಷ್ಟೆಲ್ಲಾ ಮಾಡಿರುವುದು ದೇಶದ ಒಳಿತಿಗಾಗಿ ಎಂದು ಸಂಸದ ಬಿವೈ ರಾಘವೇಂದ್ರ ಹೇಳಿದರು.

ಅವರು ಬುಧವಾರ ಕೊಲ್ಲೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕರಾವಳಿ ಬ್ಯಾಂಕ್ಗಳನ್ನು ವಿಲೀನಗೊಳಿಸಿದರೂ ಈ ಭಾಗದ ಸಂಸದರು ವಿರೋಧಿಸದ ಬಗೆಗಿನ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಕ್ಕೆ ಪ್ರತಿಕ್ರಿಯಿಸಿದರು.

ಉಜಿರೆ: ಕಳೆದ ಒಂಬತ್ತು ದಿನದ ಹಿಂದೆ ನಾಪತ್ತೆಯಾದ ಯುವತಿಯ ಮೃತದೇಹ ಕಾಡಿನಲ್ಲಿ ಪತ್ತೆ -Vishwanews24

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಕುರಿತಂತೆ ಕೂಡಲೇ ರಾಜ್ಯ ಮುಜುರಾಯಿ ಸಚಿವ ಶ್ರೀನಿವಾಸ ಪೂಜಾರಿಯವರ ಜತೆ ಮಾತನಾಡಿ ಶೀಘ್ರವೇ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಮಾಡಲಾಗುವುದು. ಈ ಕುರಿತಂತೆ ಯಾಕೆ ವಿಳಂಬವಾಗಿದೆ ಎನ್ನುವುದರ ಬಗ್ಗೆಯೂ ಮಾಹಿತಿ ಪಡೆಯುತ್ತೇನೆ ಎಂದರು.

ಮುಂದಿನ ಕೆಲವೇ ವರ್ಷಗಳಲ್ಲಿ ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿಯವರ ನೇತೃತ್ವದಲ್ಲಿ ಬೈಂದೂರನ್ನು ಉನ್ನತ ಪ್ರವಾಸಿ ಕ್ಷೇತ್ರವನ್ನಾಗಿ ಅಭಿವೃದ್ಧಿಪಡಿಸಲಾಗುವುದು. ಕೊಲ್ಲೂರಿನಲ್ಲಿ ರಿಂಗ್ ರೋಡ್, ಕೊಡಚಾದ್ರಿಗೆ ಕೇಬಲ್ ಕಾರ್ ಸೇರಿದಂತೆ ಸಾಕಷ್ಟು ಯೋಜನೆಗಳಿವೆ ಎಂದರು.

ರಮೇಶ್ ಜಾರಕಿಹೊಳಿ ಅವರ ಸಿಡಿ ವಿಚಾರಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ಶಿಸ್ತು ಕ್ರಮಕೈಗೊಳ್ಳುವ ಬಗ್ಗೆ ಪಕ್ಷದ ಹೈಕಮಾಂಡ್ಗೆ ಬಿಟ್ಟ ವಿಚಾರ. ಈ ಬಗ್ಗೆ ಈಗಾಗಲೇ ರಾಜ್ಯಾಧ್ಯಕ್ಷರು, ಮುಖ್ಯಮಂತ್ರಿಗಳು, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಪ್ರತಿಕ್ರಿಯಿಸಿದ್ದಾರೆ. ಸೂಕ್ತ ನಿರ್ಧಾರವನ್ನು ಪಕ್ಷದ ಅಧ್ಯಕ್ಷರು, ಮುಖ್ಯಮಂತ್ರಿಗಳು ಕೈಗೊಳ್ಳುತ್ತಾರೆ ಎಂದು ಸಂಸದರು ಸ್ಪಷ್ಟಪಡಿಸಿದರು.

Vishwa News 24

Recent Posts

80ನೇ ಸ್ವಾತಂತ್ರ್ಯ ದಿನಾಚರಣೆ : ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಡಿಕೆಶಿ ಧ್ವಜಾರೋಹಣ – vishwanews24

80ನೇ ಸ್ವಾತಂತ್ರ್ಯ ದಿನಾಚರಣೆ : ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ ಬೆಂಗಳೂರು: ಇಡೀ ದೇಶವೇ ಇಂದು 80ನೇ…

6 minutes ago

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ : ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ – vishwanews24

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ : ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ ಬೆಂಗಳೂರು: ಇಡೀ ದೇಶವೇ ಇಂದು 80ನೇ ಸ್ವಾತಂತ್ರ್ಯ…

11 minutes ago

ಉಡುಪಿ: 80ನೇ ಸ್ವಾತಂತ್ರ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್‌ – vishwanews24

ಉಡುಪಿ: 80ನೇ ಸ್ವಾತಂತ್ರ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್‌ ಉಡುಪಿ: ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಾಗಾಂಧಿ…

18 minutes ago

ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ( ರಿ) ಮೂಳೂರು ವತಿಯಿಂದ  80ನೇ ಸ್ವಾತಂತ್ರ್ಯ ದಿನಾಚರಣೆ  – vishwanews24

ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ( ರಿ) ಮೂಳೂರು ವತಿಯಿಂದ  80ನೇ ಸ್ವಾತಂತ್ರ್ಯ ದಿನಾಚರಣೆ  ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್…

23 minutes ago

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ರಿಜ್ವಾನ್ ಅರ್ಷದ್ ನೇಮಕ – vishwanews24

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ದಕ ಜಿಲ್ಲೆಗೆ ಯುಟಿ ಖಾದರ್, ಉಡುಪಿಗೆ ರಿಜ್ವಾನ್ ಅರ್ಷದ್ ಉಡುಪಿ/ಮಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಿಗೆ…

29 minutes ago

ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 80 ನೇ ಸ್ವಾತಂತ್ರ್ಯ ದಿನಾಚರಣೆ – vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 80 ನೇ ಸ್ವಾತಂತ್ರ್ಯ ದಿನಾಚರಣೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ…

35 minutes ago