Featured

ಕುಂದಾಪುರ: ಭೀಕರ ರಸ್ತೆ ಅಪಘಾತ ಪ್ರಕರಣ: ದಂಪತಿ ಸಾವು, ಅಪಾಯದಿಂದ ಪಾರಾದ ಮಗ – Vishwanews24

ಕುಂದಾಪುರ: ಭೀಕರ ರಸ್ತೆ ಅಪಘಾತ ಪ್ರಕರಣ: ದಂಪತಿ ಸಾವು, ಅಪಾಯದಿಂದ ಪಾರಾದ ಮಗ

ಕುಂದಾಪುರ: ಬೊಬ್ಬರ್ಯನಕಟ್ಟೆ ಎದುರಿನ ಮೇಲ್ಸೇತುವೆ ಮೇಲೆ ಮಂಗಳವಾರ ಸಂಭವಿಸಿದ ಅಪಘಾತದಲ್ಲಿ ದಂಪತಿ ಸಾವನ್ನಪ್ಪಿದ್ದು, ಅವರ ಪುತ್ರ ಬದುಕುಳಿದಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಕಾರಣ ವೇಗವಾಗಿ ಬಂದ ಕಾರು ಮೇಲ್ಸೇತುವೆಯಿಂದ ಸರ್ವಿಸ್ ರಸ್ತೆಗೆ ಬಿದ್ದಿದೆ.

ಮೃತರನ್ನು ಕೇರಳದ ಕಣ್ಣೂರು ಮೂಲದ ಮುನ್ನಾವರ್ (49), ಅವರ ಪತ್ನಿ ಸಮೀರ (41) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಅವರ ಪುತ್ರ ಸುಹೇಲ್ (18) ಗಂಭೀರವಾಗಿ ಗಾಯಗೊಂಡಿದ್ದು, ಮಣಿಪಾಲ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದು, ಅಪಾಯದಿಂದ ಪಾರಾಗಿದ್ದಾನೆ.

ಅವರ ಪತ್ನಿ ಸಮೀರಾ ಕೇರಳದ ಕಣ್ಣೂರಿನವರಾದ ಕಾರಣ ಮುನ್ನಾವರ್ ಮತ್ತು ಅವರ ಕುಟುಂಬ ಕೊಲ್ಲಾಪುರದಿಂದ ಕಣ್ಣೂರಿಗೆ ಪ್ರಯಾಣಿಸುತ್ತಿದ್ದರು. ಅವಘಡ ಸಂಭವಿಸಿದ ಕೂಡಲೇ ಕಾರಿನಲ್ಲಿದ್ದ ಮೂವರನ್ನೂ ಕುಂದಾಪುರದ ಆಸ್ಪತ್ರೆಗೆ ಸಾಗಿಸಲಾಯಿತು. ಆಸ್ಪತ್ರೆಗೆ ದಾಖಲಿಸಿದ ತಕ್ಷಣ ಸಮೀರ ಮೃತಪಟ್ಟರೆ, ಮುನ್ನಾವರ್ ಅವರು ಮಣಿಪಾಲ ಆಸ್ಪತ್ರೆಯಲ್ಲಿ ಬುಧವಾರ ಮೃತಪಟ್ಟರು. ಮರಣೋತ್ತರ ಪರೀಕ್ಷೆ ಬಳಿಕ ಇಬ್ಬರ ಮೃತದೇಹವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ.

ಚಾಲಕ ಮುನ್ನಾವರ್‌ನ ಅತಿವೇಗ ಹಾಗೂ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಕುಂದಾಪುರ ಸಂಚಾರ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

21 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

2 days ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

2 days ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

2 days ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

2 days ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

2 days ago