ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಂಗಳವಾರ ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಗಂಭೀರ ಗಾಯಗೊಂಡ ಘಟನೆ ಕುಂದಾಪುರದ ಕೆ ಎಸ್ ಆರ್ ಟಿ ಸಿ ಡಿಪೋ ಎದುರುಗಡೆ ನಡೆದಿದೆ.
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದು ಕೇರಳ ರಾಜ್ಯದ ಪಾಂಡಿಚೇರಿ ಮಾಹಿತಿ ಎಂಬಲ್ಲಿಗೆ ಹಿಂತಿರುಗುತ್ತಿದ್ದ ಮೂವರು ಭಕ್ತರು ಪ್ರಯಾಣಿಸುತ್ತಿದ್ದ ಟೊಯೋಟೊ ಇನ್ನೋವಾ ಕಾರು ಅಪಘಾತಗೀಡಾಗಿದೆ. ಕುಂದಾಪುರ ಉಡುಪಿ ನಡುವಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕುಂದಾಪುರ ಸಮೀಪದ ಕೆ ಎಸ್ ಆರ್ ಟಿ ಸಿ ಡಿಪೋ ಎದುರುಗಡೆ ಫ್ಲೈ ಓವರ್ ಮೇಲೆ ಚಲಿಸುತ್ತಿದ್ದ ಕಾರು ಏಕಾಏಕಿ ಸರ್ವಿಸ್ ರಸ್ತೆ ಮತ್ತು ಹೆದ್ದಾರಿ ನಡುವಿನ ಡಿವೈಡೆರ್ ಗೆ ಡಿಕ್ಕಿ ಹೊಡೆದಿದೆ ಅಪಘಾತದ ತೀವ್ರತೆಗೆ ಡಿಕ್ಕಿ ಹೊಡೆದ ಫಾರ್ಚುನರ್ ಇನ್ನೋವಾ ಕಾರು ಕಬ್ಬಿಣದ ಗ್ರಿಲ್ ಗಳನ್ನು ಮುರಿದು ಸರ್ವಿಸ್ ರಸ್ತೆ ಮೇಲೆ ತಲೆಕೆಳಗಾಗಿ ಬಿದ್ದಿದೆ ಸಂಪೂರ್ಣ ನುಚ್ಚು ನೂರಾಗಿರುವ ಇನ್ನೋವಾ ಕಾರಿನಲ್ಲಿದ್ದ ಮೂವರ ಪೈಕಿ ಒಬ್ಬರು ಜೀವನ್ಮರಣ ಸ್ಥಿತಿಯಲ್ಲಿ ಇದ್ದಾರೆ ಎಂದು ತಿಳಿದುಬಂದಿದೆ .
ಉಳಿದ ಇಬ್ಬರು ಗಂಭೀರ ಗಾಯಗೊಂಡಿದ್ದು ಮೂವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ. ಅಪಘಾತದ ಸಂದರ್ಭ ಸರ್ವಿಸ್ ರಸ್ತೆಯಲ್ಲಿ ಯಾವುದೇ ವಾಹನ ಸಂಚಾರ ಇಲ್ಲದ ಕಾರಣ ಹೆಚ್ಚಿನ ಅನಾಹುತ ತಪ್ಪಿದೆ.
ಘಟನಾ ಸ್ಥಳಕ್ಕೆ ಕುಂದಾಪುರ ಸಂಚಾರಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಸರ್ವಿಸ್ ರಸ್ತೆಯಲ್ಲಿ ಮಗುಚಿ ಬಿದ್ದ ಕಾರಿನಿಂದಾಗಿ ಸಂಚಾರ ಸಮಸ್ಯೆ ಉಂಟಾಗಿದ್ದು ಸ್ಥಳೀಯ ಸಾರ್ವಜನಿಕರು ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಿ ಕೊಟ್ಟರು.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…