ಕುಂದಾಪುರ: ಕೋಟದ ಮಣೂರುನಲ್ಲಿ 2019ರ ಜ.26ರಂದು ನಡೆದಿದ್ದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ರಾಘವೇಂದ್ರ ಕಾಂಚನ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲಾಪಂಚಾಯತ್ ಮಾಜಿ ಸದಸ್ಯ ಬಾರಿಕೆರೆ ರಾಘವೇಂದ್ರ ಕಾಂಚನ್ ಸುಪ್ರೀಂ ಕೋರ್ಟ್ ಗೆ ಜಾಮೀನು ಅರ್ಜಿ ಸಲ್ಲಿಸಿದ್ದು, ಈ ಅರ್ಜಿ ವಿಚಾರಣೆಯನ್ನು ಮುಂದಿನ ಆರು ತಿಂಗಳೊಳಗೆ ಪೂರ್ಣಗೊಳಿಸುವಂತೆ ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಆದೇಶ ನೀಡಿದೆ.
ಆರೋಪಿಗಳ ಪೈಕಿ ರಾಘವೇಂದ್ರ ಕಾಂಚನ್‍ಗೆ ಹೈಕೋರ್ಟ್ 2019ರಲ್ಲಿ ಜಾಮೀನು ನೀಡಿತ್ತು. ಆದರೆ ಭರತ್ ತಾಯಿ ಪಾರ್ವತಿ, ಈ ಜಾಮೀನು ರದ್ದುಗೊಳಿಸುವಂತೆ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. ಅದರಂತೆ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ 2020ರ ಜ.20ರಂದು ರಾಘವೇಂದ್ರ ಕಾಂಚನ್‍ನ ಜಾಮೀನು ವಜಾಗೊಳಿಸಿ ಆದೇಶ ನೀಡಿತು. ಇದೀಗ ಎರಡನೇ ಬಾರಿಗೆ ರಾಘವೇಂದ್ರ ಕಾಂಚನ್ ಜಾಮೀನಿಗಾಗಿ ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದರು.
ಈ ಇದೀಗ ಈ ಅರ್ಜಿಯನ್ನು ಕೂಡ ಸುಪ್ರೀಂಕೋರ್ಟ್ ತಿರಸ್ಕರಿಸಿದ್ದು, ಒಂದು ವೇಳೆ ಮುಂದಿನ ಆರು ತಿಂಗಳಲ್ಲಿ ಪ್ರಕರಣದ ವಿಚಾರಣೆ ಪೂರ್ಣಗೊಳ್ಳದೇ ಇದ್ದಲ್ಲಿ, ಮತ್ತೆ ಜಾಮೀನಿಗಾಗಿ ಸಂಬಂಧಪಟ್ಟ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಸುಪ್ರೀಂಕೋರ್ಟ್ ನ್ಯಾಯಾಧೀಶರಾದ ಇಂದಿರಾ ಬ್ಯಾನರ್ಜಿ ಹಾಗೂ ಜೆ.ಕೆ. ಮಹೇಶ್ವರಿ ಅವರಿದ್ದ ದ್ವಿ ಸದಸ್ಯ ಪೀಠ ಆದೇಶದಲ್ಲಿ ತಿಳಿಸಿದೆ.
2019ರ ಜ.26ರಂದು ಗೆಳೆಯರಾದ ಯತೀಶ್ ಕಾಂಚನ್ ಹಾಗೂ ಭರತ್ ರನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾರಿಕೆರೆ ರಾಘವೇಂದ್ರ ಕಾಂಚನ್ ಸೇರಿದಂತೆ ಒಟ್ಟು 18 ಮಂದಿ ಆರೋಪಿಗಳನ್ನು ಕೋಟ ಪೊಲೀಸರು ಬಂಧಿಸಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…