ಕುಂದಾಪುರ: ಬೈಂದೂರು ತಾಲೂಕಿನ ಮರವಂತೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಜೆಕಟ್ಟೆ ವಿಶ್ವನಾಥ ಶಾನುಭೋಗ್ ಅವರ ಮನೆ ಮೇಲೆ ಮೂರು ತೆಂಗಿನ ಮರ ಉರುಳಿ ಬಿದ್ದ ಪರಿಣಾಮ ಮನೆ ಸಂಪೂರ್ಣ ಜಖಂಗೊಂಡಿದ್ದು 1.50 ಲಕ್ಷ.ಕ್ಕೂ ಅಧಿಕ ಹಣ ನಷ್ಟ ಉಂಟಾದ ಘಟನೆ ಭಾನುವಾರ ನಡೆದಿದೆ.
ಮರವಂತೆ ಭಾಗದಲ್ಲಿ ಭಾನುವಾರ ರಾತ್ರಿ ಕಾಣಿಸಿಕೊಂಡಿದ್ದ ಭಾರಿ ಮಳೆ ಗಾಳಿಗೆ ತೆಂಗಿನ ಮರ ವಿಶ್ವನಾಥ ಶಾನುಭೋಗ್ ಮನೆ ಮೇಲೆ ಉರುಳಿ ಬಿದ್ದು ಮನೆಗೆ ಹಾನಿ ಆಗಿದ್ದು ಮಾತ್ರವಲ್ಲದೆ ಜಗುಲಿಯಲ್ಲಿ ಮಲಗಿದ್ದ ಅವರ ತಲೆ ಮೇಲೆ ಹೆಂಚಿನ ತುಂಡುಗಳು ಉರುಳಿ ಬಿದ್ದ ಪರಿಣಾಮ ಗಾಯವಾಗಿದೆ. ಮರವಂತೆ ಅನಂತ ಶೆಣೈ ಅವರ ಮನೆ ಮೇಲೆ ತೆಂಗಿನ ಮರ ಬಿದ್ದು ಮನೆಗೆ ಹಾನಿಯಾದ ಘಟನೆ ಕೂಡ ನಡೆದಿದೆ. ಘಟನೆಯ ಸ್ಥಳಕ್ಕೆ ಗ್ರಾಮ ಲೆಕ್ಕಾಧಿಕಾರಿ ಸಂದೀಪ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…