ಕುಂದಾಪುರ: ಮಾಜಿ ಶಾಸಕ, ಧಾರ್ಮಿಕ ಹಾಗೂ ಸಾಮಾಜಿಕ ಮುಂದಾಳು ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಶನಿವಾರ ಬೆಳಿಗ್ಗೆ ನಿಧನ ಹೊಂದಿದರು. ಅವರಿಗೆ 91 ವರ್ಷ ವಯಸ್ಸಾಗಿತ್ತು.ರಾಜಕೀಯ ಸಾಮಾಜಿಕ ಧಾರ್ಮಿಕ ಕ್ಷೇತ್ರದಲ್ಲಿ ಛಾಪು ಮೂಡಿಸಿದ್ದ ಅವರು ವಯೋಸಹಜ ಅಸೌಖ್ಯದಿಂದ ಸಾವನ್ನಪ್ಪಿದ್ದಾಗಿ ತಿಳಿದುಬಂದಿದೆ.
ರಾಜಕೀಯದಲ್ಲಿ ತನ್ನದೇ ಛಾಪು ಮೂಡಿಸಿದ್ದ ಅಪ್ಪಣ್ಣ ಹೆಗ್ಡೆಯವರು 1960 – 83 ರ ವರೆಗೆ ಗ್ರಾಮ ಪಂಚಾಯತ್ ಸದಸ್ಯರಾಗಿ, ಅಧ್ಯಕ್ಷರಾಗಿ ರಾಜಕೀಯ ಜೀವನ ಪ್ರಾರಂಭಿಸಿದರು. 1983 -1994 ರವರೆಗೆ ಶಾಸಕರಾಗಿ ಸೇವೆ ಸಲ್ಲಿಸಿದ್ದರು.
ಸಾಮಾಜಿಕ ಕ್ಷೇತ್ರಗಳಲ್ಲೂ ತೊಡಗಿಸಿಕೊಂಡಿದ್ದ ಅವರು ತಾಲೂಕು ಕೋ ಅಪರೇಟಿವ್ ಮಾರಾಟ ಸೊಸೈಟಿ ಹಾಗೂ ಭೂ ಅಭಿವೃದ್ಧಿ ಬ್ಯಾಂಕ್ ಉಪಾಧ್ಯಕ್ಷರಾಗಿ, ಬನ್ನೂರು ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ, ಬನ್ನೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಖ್ಯಸ್ಥರಾಗಿ, ಕೊಲ್ಲೂರು ಮೂಕಾಂಬಿಕಾ ದೇವಳದ ಅಧ್ಯಕ್ಷರಾಗಿ ಕೂಡ ಸೇವೆ ಸಲ್ಲಿಸಿದ್ದಾರೆ.ಮೃತರು ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…