Featured

ಕುಂದಾಪುರ: ಮಾಜಿ ಶಾಸಕ ಬಿ. ಅಪ್ಪಣ್ಣ ಹೆಗ್ಡೆ ಕೃಷಿ ಪ್ರಶಸ್ತಿಗೆ ಕುರಿಯಾಜೆ ತಿರುಮಲೇಶ್ವರ ಭಟ್ ಆಯ್ಕೆ -Vishwanews24

ಕುಂದಾಪುರ: ಮಾಜಿ ಶಾಸಕ ಬಿ. ಅಪ್ಪಣ್ಣ ಹೆಗ್ಡೆ ಕೃಷಿ ಪ್ರಶಸ್ತಿಗೆ ಕುರಿಯಾಜೆ ತಿರುಮಲೇಶ್ವರ ಭಟ್ ಆಯ್ಕೆ -Vishwanews24

ಕುಂದಾಪುರ: ಮಾಜಿ ಶಾಸಕ, ಹಿರಿಯ ಧಾರ್ಮಿಕ ನೇತಾರ ಬಸ್ರೂರು ಅಪ್ಪಣ್ಣ ಹೆಗ್ಡೆ ಜನ್ಮದಿನ ಹಿನ್ನೆಲೆಯಲ್ಲಿ ಬಸ್ರೂರು ಅಪ್ಪಣ್ಣ ಹೆಗ್ಡೆ ಪ್ರತಿಷ್ಠಾನವು ಪ್ರತಿವರ್ಷದಂತೆ ನೀಡುತ್ತಾ ಬಂದಿರುವ ಬಸ್ರೂರು ಅಪ್ಪಣ್ಣ ಹೆಗ್ಡೆ ಕೃಷಿ ಪ್ರಶಸ್ತಿಗೆ ಕುರಿಯಾಜೆ ತಿರುಮಲೇಶ್ವರ ಭಟ್ ಆಯ್ಕೆಯಾಗಿದ್ದಾರೆ.

ಬಸ್ರೂರು ಶಾರದಾ ಕಾಲೇಜಿನ ಆವರಣದಲ್ಲಿ ಡಿ.24ರ ಸಂಜೆ 4ಕ್ಕೆ ನಡೆಯುವ ಅಪ್ಪಣ್ಣ ಹೆಗ್ಡೆ 87ನೇ ಹುಟ್ಟು ಹಬ್ಬದಲ್ಲಿ ಪ್ರಶಸ್ತಿ ಪ್ರಧಾನ, ವಿದ್ಯಾರ್ಥಿಗಳು, ಅನಾರೋಗ್ಯ ಪೀಡಿತರು ಹಾಗೂ ಅಶಕ್ತರಿಗೆ ದತ್ತಿನಿಧಿ ಸಹಾಯಧನ ವಿತರಿಸಲಾಗುತ್ತದೆ.

ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಜೆ. ಸಿ. ಮಾಧುಸ್ವಾಮಿ ಅಧ್ಯಕ್ಷತೆ ವಹಿಸಲಿದ್ದು, ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ ಎಂದು ಪ್ರತಿಷ್ಠಾನದ ಅಧ್ಯಕ್ಷ ರಾಮ್‌ಕಿಶನ್ ಹೆಗ್ಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಶಸ್ತಿ ಪುರಸ್ಕೃತರಾದ ಕುರಿಯಾಜೆ ತಿರುಮಲೇಶ್ವರ ಭಟ್…
ಕುರಿಯಾಜೆ ತಿರುಮಲೇಶ್ವರ ಭಟ್ ಸುಳ್ಯ ತಾಲೂಕು, ಬೆಳ್ಳಾರೆ ಸಮೀಪದ ಕುರಿಯಾಜೆಯವರಾಗಿದ್ದು, ಕಳೆದ ಕೆಲವು ವರ್ಷಗಳಿಂದ ಕೃಷಿಯಲ್ಲಿ ಅದ್ಭುತವಾದ ಸಾಧನೆ ಮಾಡಿ ಸಾವಯವ ಕೃಷಿ ಸರದಾರ ಎಂದು ಖ್ಯಾತಿ ಪಡೆದಿದ್ದಾರೆ. ದೇಶ-ವಿದೇಶಗಳಿಂದ ತಂದು ಬೆಳೆಸಿದ ಹೂ-ಹಣ್ಣು, ಗಿಡಮೂಲಿಕೆ ಸೇರಿದಂತೆ ನೂರಾರು ಬಗೆಯ ಸಸ್ಯರಾಶಿ ಇವರ ತೋಟದಲ್ಲಿ ಇದೆ. ಸಾಂಪ್ರದಾಯಿಕ ಬೆಳೆಗಳ ಈ ಸುಂದರ ತೋಟ ಬೆಳ್ಳಾರೆ ನಂದನವನ ಎಂದು ಖ್ಯಾತಿಯಾಗಿದೆ. ಕೃಷಿ ಜೊತೆಗೆ ಹೈನುಗಾರಿಕೆಯನ್ನು ನೆಚ್ಚಿಕೊಂಡಿದ್ದಾರೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

15 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

17 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

17 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

17 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

18 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

18 hours ago