ಕುಂದಾಪುರ : ಮುಂದುವರೆದ ಹಿಜಾಬ್ ವಿವಾದ: ಸರಕಾರ ಆದೇಶ ನೀಡಿದ ಬಳಿಕವೂ ಇಂದು ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರು – Vishwanews24
ಕುಂದಾಪುರ: ಮುಂದುವರೆದ ಹಿಜಾಬ್ ವಿವಾದ: ಸರಕಾರ ಆದೇಶ ನೀಡಿದ ಬಳಿಕವೂ ಇಂದು ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರು – Vishwanews24
ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಕೊಠಡಿ..
ಕುಂದಾಪುರ: ಈಗಾಗಲೇ ಹಿಜಾಬ್ ವಿವಾದದ ಹಿನ್ನಲೆಯಲ್ಲಿ ಕುಂದಾಪುರದ ಸರ್ಕಾರಿ ಕಾಲೇಜುಗಳಿಗೆ 2 ದಿನ ರಜೆ ಘೋಷಣೆ ಮಾಡಲಾಗಿತ್ತು. ಇದರ ನಡುವೆ ರಾಜ್ಯ ಸರ್ಕಾರ ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯಗೊಳಿಸಿ, ಆದೇಶಿಸಿತ್ತು.
ಹೀಗಿದ್ದೂ ಇಂದು ಕಾಲೇಜು ಆರಂಭವಾಗುತ್ತಿದ್ದಂತೆ ವಿದ್ಯಾರ್ಥಿನಿಯರು ಮತ್ತೆ ಹಿಜಾಬ್ ಧರಿಸಿಯೇ ಕಾಲೇಜಿಗೆ ಆಗಮಿಸಿದ್ದಾರೆ. ಹೀಗಾಗಿ ಅವರನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಲಾಗಿದೆ.
ಉಡುಪಿ ಜಿಲ್ಲೆಯ ಕುಂದಾಪುರದ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿನಿಯರು ಮತ್ತೆ ಇಂದು ಹಿಜಾಬ್ ಧರಿಸಿಯೇ ಕಾಲೇಜಿಗೆ ಆಗಮಿಸಿದ್ದಾರೆ. ಹಿಜಾಬ್ ಧರಿಸದೇ ತರಗತಿ ಪ್ರವೇಶಕ್ಕೂ ನಿರಾಕರಿಸಿದ ಕಾರಣ, ಅವರನ್ನು ಶಾಲೆಯ ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಲಾಗಿದೆ.
ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿರುವಂತ ವಿದ್ಯಾರ್ಥಿನಿಯರನ್ನು ಹಿಜಾಬ್ ತೆಗೆದು ತರಗತಿಗೆ ಹಾಜರಾಗುವಂತೆ ಪ್ರಾಂಶುಪಾಲರು, ಉಪನ್ಯಾಸಕರು ಮನವೊಲಿಸುತ್ತಿದ್ದಾರೆ. ಆದ್ರೇ ವಿದ್ಯಾರ್ಥಿನಿಯರು ಮಾತ್ರ ನಮ್ಮ ಮನೆಯಲ್ಲಿ ಹೇಳಿ ಕಳುಹಿಸಿದ್ದಾರೆ. ನಾವು ಸ್ಕಾರ್ಫ್ ತೆಗೆಯೋದಿಲ್ಲ. ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಕೋರ್ಟ್ ಸೂಚನೆ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳೋದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.
