ಕುಂದಾಪುರ: ಮೊಬೈಲ್ ಯಾಪ್ ನಲ್ಲಿ ಮಾಡಿಕೊಂಡ ಸಾಲ ತೀರಿಸಲಾಗದೆ ಡೆತ್ ನೋಟ್ ಬರೆದಿಟ್ಟು ಎಮ್ಎನ್ಸಿ ಕಂಪೆನಿ ಉದ್ಯೋಗಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಕಳವಳಕಾರಿ ಘಟನೆ ಇಲ್ಲಿನ ಹೆಮ್ಮಾಡಿಯ ಹರೆಗೋಡುವಿನಲ್ಲಿ ನಡೆದಿದೆ.
ಹೆಮ್ಮಾಡಿಯ ಹರೆಗೋಡು ಕೊಳಹಿತ್ಲು ನಿವಾಸಿ ಸಂಜೀವ ದೇವಾಡಿಗ ಹಾಗೂ ಕನಕ ಎಂಬವರ ಪುತ್ರ ವಿಘ್ನೇಶ್ (25) ಆತ್ಮಹತ್ಯೆ ಮಾಡಿಕೊಂಡ ಯುವಕ.
ಬುಧವಾರ ರಾತ್ರಿ ಮನೆಯಲ್ಲಿ ಊಟ ಮುಗಿಸಿ ಬೇಗನೇ ಮಲಗಿದ್ದ ವಿಘ್ನೇಶ್ ನಸುಕಿನ ಜಾವ ಐದು ಗಂಟೆಯ ಸುಮಾರಿಗೆ ಮನೆ ಎದುರಿನ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಘ್ನೇಷ್ ತಾಯಿ ಬೆಳಿಗ್ಗೆ ಎದ್ದು ನೋಡುವಾಗ ಮನೆಯ ಬಾಗಿಲು ತೆರೆದಿತ್ತು. ಅನುಮಾನಗೊಂಡು ಹೊರಗಡೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.
ಡೆತ್ ನೋಟ್ :
“ನನ್ನ ಸಾವಿಗೆ ಕಾರಣ ನಾನು ಮಾಡಿಕೊಂಡಿರುವ ಸಾಲ. ಮೊಬೈಲ್ ಯಾಪ್‌ನಲ್ಲಿ ಮಾಡಿಕೊಂಡ ಸಾಲ ನನಗೆ ತೀರಿಸಲು ಆಗುತ್ತಿಲ್ಲ. ಆದ್ದರಿಂದ ನಾನು ಸೂಸೈಡ್ ಮಾಡಿಕೊಳ್ಳುತ್ತಿದ್ದೇನೆ. ನನ್ನ ಸಾಲ ಇದೆ ಕಟ್ಟಿ ಎಂದು ಯಾರಾದರೂ ಕರೆ ಮಾಡಿದರೆ ಅವನು ನಮಗೆ ಗೊತ್ತಿಲ್ಲ ಅಥವಾ ಸತ್ತು ಹೋದ ಎಂದು ಹೇಳಿ ಬಿಡಿ. ಎಲ್ಲರಿಗೂ ಮೋಸ ಮಾಡಿ ಹೋಗುತ್ತಿದ್ದೇನೆ. ಕ್ಷಮಿಸಿ ಬಿಡಿ. ಕೆಳಗಡೆ ಆಫೀಸ್ ಕೆಲಸ ಮಾಡುವವನ ನಂಬರ್ ಇದೆ. ಕಾಲ್ ಮಾಡಿ ತಿಳಿಸಿ ಬಿಡಿ. ಶುಕ್ರವಾರ ಸಂಬಳ ಬರುತ್ತದೆ” ಎಂದು ಎಟಿಎಂ ಪಾಸ್ವರ್ಡ್ ಬರೆದಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…