Featured

ಕುಂದಾಪುರ: ಮೊಬೈಲ್ ಯಾಪ್ ನಲ್ಲಿ‌ ಮಾಡಿಕೊಂಡ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡ ಯುವಕ – Vishwanews24

ಕುಂದಾಪುರ: ಮೊಬೈಲ್ ಯಾಪ್ ನಲ್ಲಿ‌ ಮಾಡಿಕೊಂಡ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡ ಯುವಕ – Vishwanews24

ಕುಂದಾಪುರ: ಮೊಬೈಲ್ ಯಾಪ್ ನಲ್ಲಿ‌ ಮಾಡಿಕೊಂಡ ಸಾಲ ತೀರಿಸಲಾಗದೆ ಡೆತ್ ನೋಟ್ ಬರೆದಿಟ್ಟು ಎಮ್ಎನ್ಸಿ ಕಂಪೆನಿ ಉದ್ಯೋಗಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಕಳವಳಕಾರಿ ಘಟನೆ ಇಲ್ಲಿನ ಹೆಮ್ಮಾಡಿಯ ಹರೆಗೋಡುವಿನಲ್ಲಿ ನಡೆದಿದೆ.

ಹೆಮ್ಮಾಡಿಯ ಹರೆಗೋಡು ಕೊಳಹಿತ್ಲು ನಿವಾಸಿ ಸಂಜೀವ ದೇವಾಡಿಗ ಹಾಗೂ ಕನಕ ಎಂಬವರ ಪುತ್ರ ವಿಘ್ನೇಶ್ (25) ಆತ್ಮಹತ್ಯೆ ಮಾಡಿಕೊಂಡ ಯುವಕ.

ಬುಧವಾರ ರಾತ್ರಿ ಮನೆಯಲ್ಲಿ ಊಟ ಮುಗಿಸಿ ಬೇಗನೇ ಮಲಗಿದ್ದ ವಿಘ್ನೇಶ್ ನಸುಕಿನ ಜಾವ ಐದು ಗಂಟೆಯ ಸುಮಾರಿಗೆ ಮನೆ ಎದುರಿನ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಘ್ನೇಷ್ ತಾಯಿ ಬೆಳಿಗ್ಗೆ ಎದ್ದು ನೋಡುವಾಗ ಮನೆಯ ಬಾಗಿಲು ತೆರೆದಿತ್ತು. ಅನುಮಾನಗೊಂಡು ಹೊರಗಡೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಡೆತ್ ನೋಟ್ :
“ನನ್ನ ಸಾವಿಗೆ ಕಾರಣ ನಾನು ಮಾಡಿಕೊಂಡಿರುವ ಸಾಲ. ಮೊಬೈಲ್ ಯಾಪ್‌ನಲ್ಲಿ ಮಾಡಿಕೊಂಡ ಸಾಲ ನನಗೆ ತೀರಿಸಲು ಆಗುತ್ತಿಲ್ಲ. ಆದ್ದರಿಂದ ನಾನು ಸೂಸೈಡ್ ಮಾಡಿಕೊಳ್ಳುತ್ತಿದ್ದೇನೆ. ನನ್ನ‌ ಸಾಲ ಇದೆ ಕಟ್ಟಿ ಎಂದು ಯಾರಾದರೂ ಕರೆ ಮಾಡಿದರೆ ಅವನು‌ ನಮಗೆ ಗೊತ್ತಿಲ್ಲ ಅಥವಾ ಸತ್ತು ಹೋದ ಎಂದು ಹೇಳಿ ಬಿಡಿ. ಎಲ್ಲರಿಗೂ ಮೋಸ ಮಾಡಿ ಹೋಗುತ್ತಿದ್ದೇನೆ. ಕ್ಷಮಿಸಿ ಬಿಡಿ. ಕೆಳಗಡೆ ಆಫೀಸ್ ಕೆಲಸ ಮಾಡುವವನ‌ ನಂಬರ್ ಇದೆ. ಕಾಲ್‌ ಮಾಡಿ ತಿಳಿಸಿ ಬಿಡಿ. ಶುಕ್ರವಾರ ಸಂಬಳ ಬರುತ್ತದೆ” ಎಂದು ಎಟಿಎಂ ಪಾಸ್ವರ್ಡ್ ಬರೆದಿದ್ದಾರೆ.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

23 hours ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

24 hours ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

1 day ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

1 day ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

1 day ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

1 day ago