ಕುಂದಾಪುರ: ಯಾರ ಪಡಿತರ ಚೀಟಿಯೂ ರದ್ದಾಗುವುದಿಲ್ಲ ಎಂದು ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಹೆಚ್ ಕೆ ಮುನಿಯಪ್ಪ ಹೇಳಿದ್ದಾರೆ.
ಭಾನುವಾರ ಕುಂದಾಪುರ ತಾಲೂಕಿನ ಜನ್ನಾಡಿ ಮತ್ತು ಮಣಿಗೇರಿ ಎಂಬಲ್ಲಿ 14 ಕೊರಗ ಕುಟುಂಬಗಳಿಗೆ ಹೆಗ್ಗುಂಜೆಬರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನೂತನವಾಗಿ ಕಟ್ಟಿಸಿಕೊಡಲಾದ ಮನೆಗಳ ಲೋಕಾರ್ಪಣೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದಿನ ಸರ್ಕಾರಗಳು 5 ಗೈಡ್ ಲೈನ್ಸ್ ಅಳವಡಿಸಿದ್ದು ಅದರಂತೆ ಬಿಪಿಎಲ್ ಕಾರ್ಡುಗಳ ಪರಿಷ್ಕರಣೆ ನಡೆಯುತ್ತಿದೆ. ಗೈಡ್ ಲೈನ್ಸ್ ಗಳ ಪ್ರಕಾರ ಆದಾಯ ತೆರಿಗೆ ಪಾವತಿಸುವವರ ಮತ್ತು ಕಾರು ಹಾಗೂ ಐಷಾರಾಮಿ ಜೀವನ ನಡೆಸುವವರ ಬಳಿ ಬಿಪಿಎಲ್ ಕಾರ್ಡ್ ಇದ್ದರೆ ಅದು ಎಪಿಎಲ್ ಕಾರ್ಡ್ ಆಗಿ ವರ್ಗಾವಣೆಯಾಗುತ್ತದೆ ಆದರೆ ರಾಜ್ಯದಲ್ಲಿ ಯಾವ ಪಡಿತರ ಚೀಟಿಯು ರದ್ದಾಗುವುದಿಲ್ಲ ಎಂದು ಭರವಸೆ ನೀಡಿದರು.
ಸಾಮಾನ್ಯವಾಗಿ ಸಾಲ ಪಡೆಯಬೇಕಾದರೆ ಬ್ಯಾಂಕಿನವರು ಆದಾಯ ತೆರಿಗೆ ಪಾವತಿ ಪ್ರಮಾಣ ಪತ್ರವನ್ನು ಕೇಳುತ್ತಾರೆ ಎಂದು ಮಾಧ್ಯಮ ವರದಿಗಾರರು ಪ್ರಶ್ನಿಸಿದಾಗ ಪ್ರತಿಕ್ರಿಯಿಸಿದ ಸಚಿವ ಮುನಿಯಪ್ಪ, ಅಂತಹ ಸಂದರ್ಭದಲ್ಲಿ ಪರಿಷ್ಕರಣೆ ನಡೆಸಿ ನಿಜವಾದ ಅರ್ಹ ಫಲಾನುಭವಿಗಳಿಗೆ ಬಿಪಿಎಲ್ ಕಾರ್ಡ್ ವಿತರಿಸಲಾಗುವುದು ಎಂದರು.
ಎಲ್ಲಕ್ಕಿಂತ ಮುಖ್ಯವಾಗಿ ಆರೋಗ್ಯ ವಿಚಾರದಲ್ಲಿ ಸರ್ಕಾರ ಯಾವುದೇ ಸಮಸ್ಯೆ ಉಂಟುಮಾಡುವುದಿಲ್ಲ ಎಂದ ಅವರು ಅಂತಹ ಸಂದರ್ಭದಲ್ಲಿ ಒಂದು ವಾರದಲ್ಲಿ ಕಾರ್ಡ್ ಮಂಜೂರು ಮಾಡುತ್ತದೆ. ದಕ್ಷಿಣ ಭಾರತದ ಇತರ ರಾಜ್ಯಗಳಲ್ಲಿ ಬಿಪಿಎಲ್ ಕಾಡಿನ ಶೇಕಡವಾರು ಐವತ್ತರಷ್ಟಿದೆ ಆದರೆ ಕರ್ನಾಟಕದಲ್ಲಿ ಅದರ ಪರಿಮಾಣ 80 ಶೇಕಡ ಇರುವುದರಿಂದ ಪರಿಷ್ಕರಣೆ ಅನಿವಾರ್ಯವಾಗಿದೆ. 2 ಲಕ್ಷದ 95 ಸಾವಿರ ಕಾರ್ಡುಗಳ ಪೈಕಿ 2 ಲಕ್ಷದ 60 ಸಾವಿರ ಬಿಪಿಎಲ್ ಕಾರ್ಡಿನ ಪರಿಷ್ಕರಣೆ ನಡೆಸಿದ್ದು, ಉಳಿದ ಮೂವತ್ತೈದು ಸಾವಿರ ಕಾರ್ಡುಗಳನ್ನು ಶೀಘ್ರವೇ ಪರಿಷ್ಕರಣೆ ನಡೆಸಿ ಬಳಿಕ ಹೊಸ ಕಾರ್ಡುಗಳಿಗೆ ಅವಕಾಶ ಕಲ್ಪಿಸಲಾಗುವುದು. ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ಸರ್ವರೂ ಸಮಸ್ಯೆ ಉಂಟಾಗುವುದಿಲ್ಲ ಎಂದು ಅವರು ಹೇಳಿದರು.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…