ಕುಂದಾಪುರ : ದೃಢಕಾಯದ ಯುವಕನೊಬ್ಬನ ದೇಹವು ಕೊಳೆತು ಹುಳುಗಳಾದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಡ ಹಕ್ಲಾಡಿ ಎಂಬಲ್ಲಿ ನಡೆದಿದ್ದು, ಗಿಡಗಂಟಿಗಳ ಮಧ್ಯೆ ಕೊಳೆತು ಹೋದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸ್ಥಳೀಯರು ಓಡಾಡುತ್ತಿದ್ದ ಸಂದರ್ಭ ವಿಪರೀತ ವಾಸನೆ ಬರುತ್ತಿದ್ದು, ಗಮನಿಸಿದಾಗ ಘಟನೆ ಬೆಳಕಿಗೆ ಬಂದಿದೆ. ತಕ್ಷಣ ಗಂಗೊಳ್ಳಿ ಪೊಲೀಸರಿಗೆ ಸುದ್ಧಿ ಮುಟ್ಟಿಸಿದ್ದು, ಪೊಲೀಸರು ಆಗಮಿಸಿ ಪರಿಶೀಲಿಸಿದ್ದಾರೆ. ಬಳಿಕ ಗಂಗೊಳ್ಳಿ 24×7 ಆಂಬ್ಯುಲೆನ್ಸ್ ಮೂಲಕ ಕುಂದಾಪುರ ಸರಕಾರಿ ಆಸ್ಪತ್ರೆ ಶವಾಗಾರಕ್ಕೆ ರವಾನಿಸಲಾಯಿತು. ಕೊಳೆತ ಸ್ಥಿತಿಯಲ್ಲಿದ್ದ ಶವ ಹೊರತೆಗೆಯಲು ಹಾಗೂ ಸಾಗಿಸಲು 24×7 ಇಬ್ರಾಹಿಂ ಗಂಗೊಳ್ಳಿ, ಕೃಷ್ಣ (ಕಿಟ್ಟ), ಸ್ವಯಂಸೇವಕ ನದೀಮ್ ಹಾಗೂ ಸಫ್ವಾನ್, ಗಂಗೊಳ್ಳಿ ಪೊಲೀಸ್ ಠಾಣಾ ಹೆಡ್ ಕಾನ್ಸ್ಟೇಬಲ್ ಚಂದ್ರಶೇಕರ್ ಸಹಕರಿಸಿದರು.
ಶವದ ಗುರುತು ಪತ್ತೆಯಾಗಿಲ್ಲ. ಅಲ್ಲದೇ ಯುವಕನನ್ನು ಯಾರಾದರೂ ಕೊಂದು ಹಾಕಿದ್ದಾರೆಯೇ ಅಥವಾ ಆತ್ಮಹತ್ಯೆ ಮಾಡಿಕೊಂಡಿದ್ದಾನೆಯೇ ಅಥವಾ ಅಪಘಾತ ಸಂಭವಿಸಿ ಸಾವನ್ನಪ್ಪಿದ್ದಾನೆಯೇ ಎಂಬುದು ಮರಣೋತ್ತರ ಪರೀಕ್ಷೆಯ ಬಳಿಕವಷ್ಟೇ ತಿಳಿದು ಬರಬೇಕಿದೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…