Featured

ಕುಂದಾಪುರ :  ರೈಲ್ವೆ ಮೇಲ್ದರ್ಜೆಗೆ ಆದ್ಯತೆ :  ಕೋಟ ಭರವಸೆ – vishwanews24

ಕುಂದಾಪುರ :  ರೈಲ್ವೆ ಮೇಲ್ದರ್ಜೆಗೆ ಆದ್ಯತೆ :  ಕೋಟ ಭರವಸೆ

ಕುಂದಾಪುರ:ರೈಲ್ವೆ ಪ್ರಯಾಣಿಕರ ಹಿತರಕ್ಷಣ ಸಮಿತಿಯಿಂದ ನಾಲ್ಕು ಬೇಡಿಕೆಗಳು ಬಂದಿವೆ. ಅದರಲ್ಲಿ ಒಂದು ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯ ಜೊತೆ ವಿಲೀನಗೊಳಿಸುವುದು. ಕುಂದಾಪುರದಲ್ಲಿ ಹೊಸ ರೈಲುಗಳನ್ನು ನಿಲುಗಡೆಗೊಳಿಸುವಂಥದ್ದು. ಕುಂದಾಪುರ ಮತ್ತು ಬೆಂಗಳೂರು ಸಂಚಾರದ ರೈಲ್ವೆಯಗಳನ್ನು ಪಡೆಯಲು ಬೈಪಾಸ್ ಮೂಲಕ ಹೊಸ ರೈಲುಗಳನ್ನು ಬಿಡುಗಡೆಗೊಳಿಸಬೇಕು. ತಿರುಪತಿ ಮತ್ತು ವಾರಣಾಸಿಗೆ ಹೊಸ ರೈಲು ಆರಂಭಿಸಬೇಕು. ರೈಲು ಮಾರ್ಗಗಳ ಅವಧಿಯನ್ನು ವಿಸ್ತರಣೆ ಮಾಡಬೇಕು ಏನು ಅಂತ ಬೇಡಿಕೆಗಳನ್ನು ಇಟ್ಟಿದ್ದು ಹೊಸ ಸಂಸದನಾಗಿ ನಾನು ಈ ಬೇಡಿಕೆಗಳಿಗೆ ಪ್ರಥಮ ಆದ್ಯತೆಯನ್ನು ನೀಡುತ್ತೇನೆ ಎಂದು ಭರವಸೆ ನೀಡಿದರು.

ಕುಂದಾಪುರದ ರೈಲ್ವೆ ನಿಲ್ದಾಣವನ್ನು ಉನ್ನತೀಕರಣಗೊಳಿಸುವುದರ ಜೊತೆಗೆ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ಸಲುವಾಗಿ ಮುಂದಿನ ದಿನಗಳಲ್ಲಿ ಪ್ರಯತ್ನ ಪಡುತ್ತೇನೆ ಎಂದು ಈ ಸಂದರ್ಭದಲ್ಲಿ ಹೇಳಲು ಇಷ್ಟಪಡುತ್ತೇನೆ. ಜಿಲ್ಲಾಧಿಕಾರಿಗಳನ್ನು ಕರೆದು ಈ ಬಗ್ಗೆ ಮಾತನಾಡಿದ್ದೇನೆ. ಎರಡು ದಿನಗಳ ಒಳಗೆ ಭೇಟಿ ನೀಡಲಾಗುವುದು ರಾಷ್ಟ್ರೀಯ ಹೆದ್ದಾರಿ ಮತ್ತು ರೈಲ್ವೆ ಸಂಪರ್ಕ ರಸ್ತೆಗಳು ಒಟ್ಟಾಗಿರುವುದರಿಂದ ಎರಡು ಮೂರು ವರ್ಷಗಳಿಂದ ನೆನೆಗುದಿಗೆ ಬಿದ್ದಿದೆ ಎಂದರು.

ಪೆಟ್ರೋಲ್ ಬೆಲೆ ಏರಿಕೆಯ ಬಗ್ಗೆ ಪ್ರತಿಕ್ರಿಸಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕಳೆದ ಬಾರಿ ನಮ್ಮ ಸರ್ಕಾರ ಇದ್ದಾಗ ಪೆಟ್ರೋಲ್ ನ ಬೆಲೆ ಏರಿಕೆ ಆಗಿತ್ತು. ಆ ಸಂದರ್ಭ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರು ವಾಹನಕ್ಕೆ ಹಗ್ಗ ಕಟ್ಟಿಕೊಂಡು ಬೆಳೆಯುವ ರೀತಿಯ ಚಿತ್ರವನ್ನು ಹಾಕಿದ್ದರು ಹಾಗಾಗಿ ಈಗ ಅವರ ಸರ್ಕಾರ ಪೆಟ್ರೋಲ್ ನ ಬೆಲೆ ಏರಿಸಬಾರದಿತ್ತು. ಇದು ಸಂಪೂರ್ಣವಾಗಿ ಜನವಿರೋಧಿ ನೀತಿ ಯಾಕೆಂದರೆ ಈ ಹಂತದಲ್ಲಿ ದಿಡೀರ್ ಆಗಿ ಮೂರು ಮೂರುವರೆ ರೂಪಾಯಿ ಏರಿಸುವುದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಮುಖ್ಯಮಂತ್ರಿಗಳು ಎಷ್ಟೇ ಸಮರ್ಥನೆ ಮಾಡಿಕೊಂಡು ಕೊಂಡರೂ ಕೂಡ ಜನಸಾಮಾನ್ಯರಿಗೆ ಬಹುದೊಡ್ಡ ಹೊಡೆತ ಆಗಿದೆ ಇದನ್ನು ವಿರೋಧಿಸಿ ನಾವು ರಾಜ್ಯದಾದ್ಯಂತ ಬೃಹತ್ ಹೋರಾಟವನ್ನು ಹಮ್ಮಿಕೊಂಡಿದ್ದೇವೆ ಎಂದರು.

ಕಾಂಗ್ರೆಸ್ ಮುಖಂಡರು ಈಗಾಗಲೇ ಹೇಳಿಕೆ ನೀಡಿದ್ದು ಚುನಾವಣೆ ಬಂತು ಎಂಬ ಕಾರಣಕ್ಕೆ ಬೆಲೆ ಏರಿಕೆ ಮಾಡಿಲ್ಲ ಚುನಾವಣೆ ಮುಗಿದಿದೆ ಎನ್ನುವ ಕಾರಣಕ್ಕೆ ಮಾಡ್ತಾ ಇದ್ದೇವೆ ಎಂದು ಅವರೇ ಹೇಳಿಕೊಂಡಿದ್ದಾರೆ ಹಾಗಾಗಿ ಚುನಾವಣಾ ಕಾರಣಗಳನ್ನು ಇಟ್ಟುಕೊಂಡು ಚುನಾವಣೆ ಮುಗಿದ ಬಳಿಕ ಬೆಲೆ ಏರಿಕೆ ಮಾಡಿರುವುದು ಸ್ಪಷ್ಟವಾಗಿದೆ ಎಂದರು.

ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಸಿದ ಕೋಟ ಕಾನೂನು ಎಲ್ಲರಿಗೂ ಒಂದೇ . ಇಲ್ಲಿ ಯಾರು ದೊಡ್ಡವರಿಲ್ಲ ಸಣ್ಣವರಿಲ್ಲ ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕು ಎಂದು ನಾವು ಆಗ್ರಹಿಸುತ್ತೇವೆ ಎಂದರು

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago