ಕುಂದಾಪುರ: ಲಂಚ ಸ್ವೀಕರಿಸುತ್ತಿದ್ದ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಲೋಕಾಯುಕ್ತ ಪೊಲೀಸರ ವಶಕ್ಕೆ – vishwanews24

ಉಡುಪಿ

ಕುಂದಾಪುರ: ಲಂಚ ಸ್ವೀಕರಿಸುತ್ತಿದ್ದ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಲೋಕಾಯುಕ್ತ ಪೊಲೀಸರ ವಶಕ್ಕೆ

ಕುಂದಾಪುರ: ಲಂಚ ಸ್ವೀಕರಿಸುತ್ತಿದ್ದ ವೇಳೆ ಅರಣ್ಯ ಇಲಾಖೆ ಸಿಬ್ಬಂದಿಯನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯಲ್ಲಿ ಲಿಪಿಕ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಜು ಪೂಜಾರಿ ಲೋಕಾಯುಕ್ತ ವಶದಲ್ಲಿರುವ ಸಿಬ್ಬಂದಿ.

ಅರಣ್ಯ ಇಲಾಖೆಯಲ್ಲಿ ಸೀಜ್ ಮಾಡಿದ್ದ 407 ವಾಹನ ಬಿಡಿಸಲು ಕಡತ ಮುಂದೂಡಲು ವ್ಯಕ್ತಿಯೊಬ್ಬರಿಂದ 15 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ದಾಳಿ ನಡೆದಿದೆ. ನಗದು ಸಹಿತ ಆರೋಪಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

ಲೋಕಾಯುಕ್ತ ಮಂಗಳೂರು ಎಸ್‌ಪಿ ಸೈಮನ್, ಡಿವೈಎಸ್‌ಪಿ ಪ್ರಕಾಶ್ ಮಾರ್ಗದರ್ಶನದಲ್ಲಿ ಇನ್ಸ್‌ಪೆಕ್ಟರ್‌ಗಳಾದ ಮಂಜುನಾಥ್ ಹಾಗೂ ರಫೀಕ್ ಹಾಗೂ ಸಿಬ್ಬಂದಿಗಳಾದ ನಾಗೇಶ್ ಉಡುಪ, ನಾಗರಾಜ್, ರಾಘವೇಂದ್ರ, ರೋಹಿತ್, ಪ್ರಸನ್ನ ದೇವಾಡಿಗ, ಅಬ್ದುಲ್ ಜಲಾಲ್, ರವೀಂದ್ರ ಗಾಣಿಗ, ರಮೇಶ್, ಸೂರಜ್, ಸುಧೀರ್ ರವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Leave a Reply