ಕುಂದಾಪುರ : ಬಸವ ವಸತಿ ಯೋಜನೆ ಸಂಬಂಧ ಲಂಚ ಸ್ವೀಕರಿಸುತ್ತಿದ್ದ ಆರೋಪದಡಿ ಬೇಳೂರು ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ಇಂದು ಬಂಧಿಸಿದ್ದಾರೆ.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಂತ್ ಬಂಧಿತ ಆರೋಪಿ. ಬಸವ ವಸತಿ ಯೋಜನೆಯಲ್ಲಿ ಮನೆ ನಿರ್ಮಾಣಕ್ಕೆ ಫಲಾನುಭವಿಗಳಿಗೆ ಒಟ್ಟು ನಾಲ್ಕು ಕಂತಿನಲ್ಲಿ 1.20ಲಕ್ಷ ರೂ. ಹಣ ಬಿಡುಗಡೆಯಾಗಿದ್ದು, ಈ ಹಣದಲ್ಲಿ ಅರ್ಧಂಶ ಹಣ ಮಂಜೂರು ಮಾಡಿಸಲು ಪಿಡಿಓ 10ಸಾವಿರ ರೂ. ಖರ್ಚಾಗಿದ್ದು, ಆ ಹಣವನ್ನು ವಾಸಾಸ್ಸು ನೀಡುವಂತೆ ಲಂಚ ಬೇಡಿಕೆಯನ್ನು ಪಿಡಿಓ ಇಟ್ಟಿದ್ದರು.
ಈ ಬಗ್ಗೆ ಲೋಕಾಯುಕ್ತ ಠಾಣೆಗೆ ದೂರು ನೀಡಿದ್ದು, ಅದರಂತೆ ಕಾರ್ಯಾ ಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ತೆಕ್ಕಟ್ಟೆ ಜಂಕ್ಷನ್‌ನಲ್ಲಿ ದೂರುದಾರರಿಂದ 10ಸಾವಿರ ಲಂಚ ಸ್ವೀಕರಿಸುತ್ತಿದ್ದ ಪಿಡಿಓ ಜಯಂತ್‌ನ ನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಂಗಳೂರು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಸಿ.ಎ.ಸೈಮನ್ ಮಾರ್ಗ ದರ್ಶನದಲ್ಲಿ ಉಡುಪಿ ಡಿವೈಎಸ್ಪಿ ಕೆ.ಸಿ.ಪ್ರಕಾಶ್ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕ ರಫೀಕ್ ಎಂ. ಹಾಗೂ ಸಿಬ್ಬಂದಿ ನಾಗೇಶ್ ಉಡುಪ, ರಾಘವೇಂದ್ರ, ನಾಗರಾಜ್, ರೋಹಿತ್, ಮಲ್ಲಿಕಾ, ಸತೀಶ್ ಹಂದಾಡಿ, ಅಬ್ದುಲ್ ಜಲಾಲ್, ಪ್ರಸನ್ನ ದೇವಾಡಿಗ, ರಾಘವೇಂದ್ರ ಹೊಸ್ಕೋಟೆ, ಸತೀಶ್ ಆಚಾರ್ಯ, ಸೂರಜ್ ಈ ಕಾರ್ಯಾಚರಣೆ ನಡೆಸಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…