ಕುಂದಾಪುರ: ಲೈಂಗಿಕ ಕಿರುಕುಳ ಸಹಿತ ವಿವಿಧ ಕಿರುಕುಳದ ಆರೋಪದ ಮೇರೆಗೆ ಕುಂದಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಆಡಳಿತ ಶಸ್ತ್ರ ಚಿಕಿತ್ಸಕ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ| ರಾಬರ್ಟ್ ರೆಬೆಲ್ಲೊ ಅವರನ್ನು ಜೂನ್ 4ರಂದು ಕರ್ತವ್ಯದಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ವೈದ್ಯಾಧಿಕಾರಿಯನ್ನು ಅಮಾನತು ಮಾಡಿ ಆರೋಗ್ಯ ಇಲಾಖೆಯ ಆಯುಕ್ತ ಡಿ. ರಂದೀಪ್ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರು ವೈದ್ಯಾಧಿಕಾರಿ ವಿರುದ್ಧ ಆರೋಗ್ಯ ಸಚಿವರಿಗೆ ರೋಗಿಗಳ ಜತೆಗಿನ ದುರ್ನಡತೆಯ ಕುರಿತ ದೂರು ಅರ್ಜಿ, ಇದರೊಂದಿಗೆ ಸಹ ವೈದ್ಯೆಯಿಂದ ಲೈಂಗಿಕ ಕಿರುಕುಳ ಕುರಿತು ದಾಖಲಾದ ಪ್ರಕರಣ, ಕೇಸ್ ಸಂಬಂಧ ಪೊಲೀಸ್ ನಿರೀಕ್ಷಕರಿಂದ ಬಂದ ಪತ್ರ, ಆಸ್ಪತ್ರೆ ಆವರಣದಲ್ಲಿ ಕೊಳಚೆ ನೀರು, ತ್ಯಾಜ್ಯ ಹರಿದು ರೋಗ ಬರಲು ಆಸ್ಪದವಿದ್ದರೂ ನಿರ್ಲಕ್ಷ್ಯ ತೋರಿರುವುದು, ಈ ಎಲ್ಲಾ ಆರೋಪಗಳಿಗಾಗಿ ಇಲಾಖಾ ವಿಚಾರಣೆ ಬಾಕಿ ಇರಿಸಿ ವೈದ್ಯಾಧಿಕಾರಿಯನ್ನು ಅಮಾನತು ಮಾಡಿ ಆದೇಶಿಸಲಾಗಿದೆ.
ಇನ್ನು ವೈದ್ಯಾಧಿಕಾರಿಯ ಜೀವನ ನಿರ್ವಹಣೆ ಭತ್ತೆಗಾಗಿ ಮೂಡಿಗೆರೆ ಸಾರ್ವಜನಿಕ ಆಸ್ಪತ್ರೆಯ ಇಎನ್‌ಟಿ ವೈದ್ಯರ ಹುದ್ದೆಯ ಸ್ಥಳ ನಿಗದಿ ಪಡಿಸಲಾಗಿದೆ. ಆರೋಗ್ಯ ಇಲಾಖೆಯ ಆಯುಕ್ತರ ಅನುಮತಿಯನ್ನು ಪಡೆಯದೇ ಕೇಂದ್ರ ಸ್ಥಳ ತೊರೆಯದಂತೆ ಸೂಚನೆ ನೀಡಲಾಗಿದೆ. ಸದ್ಯ ಡಾ| ರಾಬರ್ಟ್ ತಲೆಮರೆಸಿಕೊಂಡಿದ್ದು, ನಿರೀಕ್ಷಣಾ ಜಾಮೀನಿಗಾಗಿ ಪ್ರಯತ್ನಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…