ಕುಂದಾಪುರ: ಉಡುಪಿ ಜಿಲ್ಲೆಯ ಕುಂಭಾಶಿಯಿಂದ ಕುಂದಾಪುರ ಕಡೆಗೆ ಬೈಕ್ ನಲ್ಲಿ ಹೋಗುತ್ತಿದ್ದ ಯುವಕನಿಗೆ ಕುಂಭಾಶಿ ಪಾಕಶಾಲಾ ಸಮೀಪದ ಕಡೆಯಿಂದ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಕುಂಭಾಶಿಯಲ್ಲಿ ಸಂಭವಿಸಿದೆ.
ಕುಂಭಾಶಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೊಳೆಕಟ್ಟು ನಿವಾಸಿ ಪ್ರಶಾಂತ್ ಹಾಗೂ ಅವರ ಸ್ನೇಹಿತ ವಿಘ್ನೇಶ್ ಕೆಲಸದನಿಮಿತ್ತ ಕುಂದಾಪುರ ಕಡೆಗೆ ಹೋಗುವಾಗ ಈ ಅಪಘಾತ ಸಂಭವಿಸಿದ್ದು ಬೈಕ್ ಚಾಲನೆ ಮಾಡುತ್ತಿದ್ದ ಯುವಕ ಪ್ರಶಾಂತ್ ಪೂಜಾರಿ (25) ತೀವ್ರ ಸ್ವರೂಪದ ಗಾಯಗಳಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಭಾನುವಾರ ರಾತ್ರಿ ಮೃತಪಟ್ಟಿರುತ್ತಾರೆ ಎಂದು ತಿಳಿದುಬಂದಿದೆ.
ಬೈಕ್ ಸಹಸವಾರ ವಿಘ್ನೇಶ್ ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಕುಂಭಾಶಿ ಪಾಕಶಾಲೆ ಸಮೀಪದಿಂದ ಬಂದ ಕಾರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಂದಾಪುರ ಕಡೆಗೆ ಹೋಗುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಅದೇ ದಿಕ್ಕಿನಿಂದ ಬರುತ್ತಿದ್ದ ಖಾಸಗಿ ಬಸ್ಸಿಗೆ ಕಾರು ಮತ್ತು ಬೈಕ್ ಡಿಕ್ಕಿ ಹೊಡೆದು ಸರಣಿ ಅಪಘಾತಗೊಂಡಿದೆ.
ಈ ಅಪಘಾತದಲ್ಲಿ ಬೈಕು ಸಂಪೂರ್ಣ ನಜ್ಜುಗುಜ್ಜಾಗಿದ್ದು ಕಾರು ಸಹ ಜಖಂ ಗೊಂಡಿದೆ. ಅಲ್ಲದೆ ಬಸ್ಸಿನ ಮುಂಭಾಗಕ್ಕೂ ಹಾನಿಯಾಗಿದೆ.
ಘಟನಾ ಸ್ಥಳಕ್ಕೆ ಕುಂದಾಪುರ ಸಂಚಾರಿ ಠಾಣಾಧಿಕಾರಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿ ದೂರು ದಾಖಲಿಸಿಕೊಂಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…