ಕುಂದಾಪುರ: ವ್ಯಕ್ತಿಯಿಂದ ಪಾಕಿಸ್ತಾನ ಜಿಂದಾಬಾದ್ ಘೋಷಣೆ ; ಆರೋಪಿ ಪೊಲೀಸರ ವಶಕ್ಕೆ (ವಿಡಿಯೋ) -Vishwanews24

ಕುಂದಾಪುರ: ಪಾಕಿಸ್ತಾನದ ಪರ ಘೋಷಣೆ ಕೂಗುವ ಪರಿಪಾಠ ಇಂದು ಅಧಿಕೃತವಾಗಿ ಕುಂದಾಪುರಕ್ಕೂ ಕಾಲಿಟ್ಟಿದೆ. ಕುಂದಾಪುರದ ಸರ್ಕಾರೀ ಕಚೇರಿಗಳ ಸಂಕೀರ್ಣ ಮಿನಿ ವಿಧಾನ ಸೌಧದ ಒಳಗೆ ವ್ಯಕ್ತಿಯೊಬ್ಬ ಪಾಕಿಸ್ತಾನ ಜಿಂದಾಬಾದ್ ಎನ್ನುತ್ತಾ ನಿರಂತರವಾಗಿ ಘೋಷಣೆ ಕೂಗಿದ ಘಟನೆ ಸೋಮವಾರ ಬೆಳಿಗ್ಗೆ ಸುಮಾರು 10 ಗಂಟೆಗೆ ನಡೆದಿದೆ.

ಘೋಷಣೆ ಕೂಗಿದ ವ್ಯಕ್ತಿಯನ್ನು ಕೋಡಿ ನಿವಾಸಿಯಾಗಿರುವ ರಾಘವೇಂದ್ರ ಗಾಣಿಗ(43) ಎಮದು ಗುರುತಿಸಲಾಗಿದ್ದು, ಕುಂದಾಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸೋಮವಾರ ಬೆಳಿಗ್ಗೆ ಸುಮಾರು 9.45ರ ಸುಮಾರಿಗೆ ಆರೋಪಿ ರಾಘವೇಂದ್ರ ಗಾಣಿಗ ಕುಂದಾಪುರ ಕುಂದಾಪುರದ ಸರ್ಕಾರೀ ಕಚೇರಿಗಳ ಸಂಕೀರ್ಣ ಮಿನಿ ವಿಧಾನಸೌಧಕ್ಕೆ ಬಂದಿದ್ದಾನೆ. ಮೆಟ್ಟಿಲುಗಳನ್ನು ಹತ್ತುತ್ತಿದ್ದಂತೆಯೇ ಪಾಕಿಸ್ತಾನ ಜಿಂದಾಬಾದ್ ಪಾಕಿಸ್ತಾನ ಜಿಂದಾಬಾದ್ ಎನ್ನುವ ಘೋಷಣೆಗಳನ್ನು ಕಾರಿಡಾರ್ ಉದ್ದಕ್ಕೂ ಕೂಗುತ್ತಾ ಸಾಗಿದ್ದಾನೆ. ಇದನ್ನು ಗಮನಿಸಿದ ಸಾರ್ವಜನಿಕರು ಅದನ್ನು ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದು, ಕುಂದಾಪುರ ಪೊಲೀಸರಿಗೆ ಸುದ್ಧಿ ಮುಟ್ಟಿಸಿದ್ದಾರೆ. ಬಳಿಕ ಆರೋಪಿ ರಾಘವೇಂದ್ರ ಗಾಣಿಗ ಕಾರಿಡಾರ್‌ನಿಂದ ಮಿನಿ ವಿಧಾನಸವಧದ ಒಳಗೆ ಪ್ರವೇಶಿಸಿದ್ದು, ಅಲ್ಲಿಯೂ ನಿರಂತರವಾಗಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆಗಳನ್ನು ಕೂಗಿದ್ದಾನೆ. ಈ ಸಂದರ್ಭ ಮಾಹಿತಿ ಪಡೆದ ಕುಂದಾಪುರ ತಹಸೀಲ್ದಾರ್ ಲಿಖಿತವಾಗಿ ಆರೋಪಿಯ ವಿರುದ್ದ ದೂರು ನೀಡಿದ್ದು, ಪೊಲೀಸರು ಆರೋಪಿ ರಾಘವೇಂದ್ರ ಗಾಣಿಗನನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ.

 

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

52 minutes ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

3 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

3 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

3 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

4 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

4 hours ago