ಕುಂದಾಪುರ: ಸಮುದ್ರದಲ್ಲಿ ಮೀನುಗಾರಿಕೆ ನಡೆಸುವ ಸಲುವಾಗಿ ಬಿಟ್ಟಿದ್ದ ಮಾರಣಬಲೆ ತರಲು ಸಮುದ್ರಕ್ಕಿಳಿದ ಮೀನುಗಾರ ಅಲೆಗಳ ಅಬ್ಬರಕ್ಕೆ ಕೊಚ್ಚಿ ಹೋಗಿ ಮೃತಪಟ್ಟ ಘಟನೆ ಸೋಮವಾರ ಮಧ್ಯಾಹ್ನ ಮಲ್ಪೆ ಕರಾವಳಿ ಕಾವಲು ಪೊಲೀಸ್ ವ್ಯಾಪ್ತಿಯ ಕೋಟ ಸಮೀಪದ ಪಾರಂಪಳ್ಳಿ ಎಂಬಲ್ಲಿ ನಡೆದಿದೆ.
ಮೃತರನ್ನು ಪಾರಂಪಳ್ಳಿ ನಿವಾಸಿ ಭಾಸ್ಕರ ಪೂಜಾರಿ (55) ಎಂದು ಗುರುತಿಸಲಾಗಿದೆ.
ಭಾಸ್ಕರ ಪೂಜಾರಿ ಪಾರಂಪಳ್ಳಿಯ ಬಳಿ ಸಮುದ್ರದಲ್ಲಿ ಬಿಟ್ಟಿದ್ದ ಮಾರಣಬಲೆಯನ್ನು ಮೇಲೆತ್ತಲು ಸಮುದ್ರಕ್ಕೆ ಇಳಿದಾಗ ಅಲೆಗೆ ಹೊಡೆತಕ್ಕೆ ಸಿಲುಕಿ ಮುಳುಗಿದ್ದಾರೆ. ತಕ್ಷಣ ನಿಯೋಜಿತರಾಗಿದ್ದ ಮಲ್ಪೆ ಕರಾವಳಿ ಕಾವಲು ಪಡೆ ಪೊಲೀಸ್ ಠಾಣೆಯ ಕೆ.ಎನ್.ಡಿ. (ಕರಾವಳಿ ನಿಯಂತ್ರಣ ದಳ) ಸಿಬ್ಬಂದಿ ಸತೀಶ್ ಮತ್ತು ಸುದರ್ಶನ್ ಎಸ್. ಕುಂದರ್ ಸಮುದ್ರಕ್ಕೆ ಹಾರಿ ಅವರನ್ನು ದಡಕ್ಕೆ ತಂದು ಸ್ಥಳೀಯರ ನೆರವಿನಿಂದ ಆಸ್ಪತ್ರೆಗೆ ಸಾಗಿಸಿದ್ದರು. ಆದರೆ ಆಸ್ಪತ್ರೆಯಲ್ಲಿ ವೈದ್ಯರು ಪರೀಕ್ಷಿಸಿ ಭಾಸ್ಕರ್ ಪೂಜಾರಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…