Featured

ಕುಂದಾಪುರ : ಸರ್ಕಾರ ಯಾವುದೇ ಕಾರಣಕ್ಕೂ ಬಡವರ ವಿರೋಧಿಯಾಗಿ ವರ್ತಿಸುವುದಿಲ್ಲ : ಡಿಕೆ ಶಿವಕುಮಾರ್‌ – vishwanews24

ಕುಂದಾಪುರ:ಯಾವುದೇ ಕಾರಣಕ್ಕೂ ಸರ್ಕಾರ ಬಡವರ ವಿರೋಧಿಯಾಗಿ ವರ್ತಿಸುವುದಿಲ್ಲ : ಡಿಕೆ ಶಿವಕುಮಾರ್‌

ಕುಂದಾಪುರ:ರಾಜ್ಯದ ಯಾವುದೇ ಅರ್ಹ ಬಡವರಿಗೆ ಅನ್ಯಾಯವಾಗಲು ರಾಜ್ಯ ಸರ್ಕಾರ ಬಿಡುವುದಿಲ್ಲ. ಒಂದೊಮ್ಮೆ ಯಾರಿಗಾದರೂ ಬಿಪಿಎಲ್ ಕಾರ್ಡ್ ತಪ್ಪಿ ಹೋದರೆ ಹೊಸದಾಗಿ ಅರ್ಜಿ ಪಡೆದುಕೊಂಡು ಬಿಪಿಎಲ್ ಕಾರ್ಡ್ ನೀಡಲಾಗುತ್ತದೆ. ಯಾವುದೇ ಕಾರಣಕ್ಕೂ ಬಡವರ ವಿರೋಧಿಯಾಗಿ ವರ್ತಿಸುವುದಿಲ್ಲ ಎಂದು ಕರ್ನಾಟಕದ ಉಪಮುಖ್ಯಮಂತ್ರಿ, ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಗುರುವಾರ ಬೆಳಿಗ್ಗೆ ಮುರ್ಡೇಶ್ವರಕ್ಕೆ ಸಮಾವೇಶಕ್ಕೆ ತೆರಳುವ ಮುನ್ನ ಕೊಲ್ಲೂರು ಮೂಕಾಂಬಿಕೆಯ ಸನ್ನಿಧಿಯಲ್ಲಿ ಪತ್ನಿ ಸಮೇತ ಪೂಜೆ ಸಲ್ಲಿಸಿದ ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದರು.

ದೇಶದ ವಿಧಾನಸಭೆಗಳ ಚುನಾವಣೆ ಬಗ್ಗೆ ಸಮೀಕ್ಷೆ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕರ್ನಾಟಕದಲ್ಲಿಯೂ ಸಮೀಕ್ಷೆ ನಡೆದಿತ್ತು. ಆದರೆ ಅದು ತಲೆಕೆಳಗಾಗಿದೆ. ಹಾಗಾಗಿ ಚುನಾವಣಾ ಸಮೀಕ್ಷೆ ಬಗ್ಗೆ ನಂಬಿಕೆಯಿಲ್ಲ. ಎಲ್ಲೆಡೆ ಐಎನ್ಡಿಐಎ ಜಯಭೇರಿ ಬಾರಿಸುತ್ತದೆ ಎಂದರು.

ರಾಜ್ಯದ ಉಪಚುನಾವಣೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಮ್ಮ ಪ್ರಯತ್ನವನ್ನು ನಾವು ಪ್ರಾಮಾಣಿಕವಾಗಿ ಮಾಡಿದ್ದೇವೆ. ಉಳಿದದ್ದು ದೇವರಿಗೆ ಬಿಟ್ಟಿದ್ದೇವೆ ಎಂದರು. ಕೊಲ್ಲೂರು ಆಡಳಿತ ಮಂಡಳಿಯಲ್ಲಿ ಮೂಲ ಕಾಂಗ್ರೆಸ್ ಗೆ ಮಣೆ ಹಾಕಿಲ್ಲ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಕೆಶಿ, ಚುನಾವಣಾ ಸಂದರ್ಭದಲ್ಲಿ ನೀಡಿದ ಮಾತಿನಂತೆ ನಡೆದುಕೊಂಡಿದ್ದೇವೆ. ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ ಎಂದರು.

ಈ ಸಂದರ್ಭ ಮೀನುಗಾರಿಕಾ ಸಚಿವ ಮಾಂಕಾಳ್ ವೈದ್ಯ, ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ, ಎಸ್ಪಿ ಕೆ ಅರುಣ್ ಕುಮಾರ್, ಮಾಜೀ ಶಾಸಕ ಕೆ ಗೋಪಾಲ ಪೂಜಾರಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಪೂಜಾರಿ, ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ ಗುಡಿಬೆಟ್ಟು, ಕೊಲ್ಲೂರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಬು ಶೆಟ್ಟಿ, ಮಾಜೀ ಜಿಲ್ಲಾ ಪಂಚಾಯತ್ ಅಧ್ಯಕ್ಷ ರಾಜು ಪೂಜಾರಿ, ಮುಖಂಡರುಗಳಾದ ಉದ್ಯಮಿ ರಾಜೇಶ್ ಕಾರಂತ್, ಸಹನಾ ಸುರೇಂದ್ರ ಶೆಟ್ಟಿ ಮೊದಲಾದವರು ಇದ್ದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

25 minutes ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

37 minutes ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

52 minutes ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

4 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

4 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

4 hours ago