ಕುಂದಾಪುರ : ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಪಾಲನೆ ಎಲ್ಲಾ ನಾಗರಿಕರ ಜವಬ್ದಾರಿಯಾಗಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧಾರಣೆ, ಅಂತರ ಪಾಲನೆ ಮಾಡಬೇಕೆಂದು ಸೋಮವಾರ ಹೊಸ ನಿರ್ದೇಶನ ನೀಡಿದ್ದು ಎಲ್ಲರೂ ಸರಕಾರದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದ್ದಾರೆ.
ಕುಂದಾಪುರ ತಾಲೂಕು ಪಂಚಾಯತ್ ಎದುರು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹೊಸ ನಿರ್ದೇಶನದ ಹಿನ್ನೆಲೆ ಸ್ಥಳೀಯಾಡಳಿತ ತಂಡದ ಜೊತೆಗೆ ಈ ಆದೇಶ ಪಾಲನೆಯಲ್ಲಿ ತೊಡಗಿಸಿಕೊಳ್ಳಲಿದೆ. ಸಾರ್ವಜನಿಕರು ಸ್ವಯಂಪ್ರೇರಿತವಾಗಿ ಇದನ್ನು ಮೈಗೂಡಿಸಿಕೊಳ್ಳಬೇಕು. ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಲಸಿಕಾಕರಣ ಉತ್ತಮವಾಗಿ ನಡೆದಿದೆ. ಮೊದಲನೇ ಡೋಸ್ ಪಡೆದವರು ನೂರಕ್ಕೆ ನೂರುಪ್ರತಿಶತವಾಗಿದ್ದು, 98.5% ಜನರು ಎರಡನೇ ಡೋಸ್ ಪಡೆದಿದ್ದಾರೆ. ಉಳಿದವರು ಕೂಡ ಲಸಿಕೆ ಪಡೆಯಬೇಕು ಹಾಗೂ ಅರ್ಹರು ಮುನ್ನೆಚ್ಚರಿಕಾ ಡೋಸ್ ಕೂಡ ಪಡೆಯಲು ಪ್ರಚಾರ ಮಾಡಲಾಗುತ್ತದೆ. ಖಾಸಗಿವೈದ್ಯಕೀಯ ಶಿಕ್ಷಣ ಸಂಸ್ಥೆಗಳ ಜೊತೆ ವಿಡಿಯೋ ಕಾನ್ಪರೆನ್ಸ್ ನಡೆಸಿ ಲಸಿಕೆ ಲಭ್ಯತೆಯ ಬಗ್ಗೆ ಗಮನಹರಿಸಲು ಸೂಚನೆ ನೀಡಲಾಗಿದೆ. ಕೋವಿಡ್ ವಿರುದ್ಧ ಹೋರಾಟಕ್ಕೆ ವ್ಯಾಕ್ಸಿನ್ ಅತ್ಯಗತ್ಯವಾಗಿದೆ ಎಂದವರು ಹೇಳಿದರು.
ಇನ್ನು ಕೊರೋನಾ ಲಕ್ಷಣಗಳಿದ್ದವರು ಪರೀಕ್ಷೆ ಮಾಡಿಸಿಕೊಂಡು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳು, ಐಸೋಲೇಶನ್ ಮೊದಲಾದ ಪ್ರಕ್ರಿಯೆಗಳಿಗೆ ಒಳಪಡಬೇಕು. ಪರೀಕ್ಷೆ ಮಾಡಿಸಿಕೊಳ್ಳುವುದರಿಂದ ಆರಂಭದಲ್ಲೇ ಸೂಕ್ತ ಚಿಕಿತ್ಸೆ ಪಡೆಯಬಹುದು ಹಾಗೂ ಹರಡುವಿಕೆ ತಡೆಯಬಹುದು ಎಂದವರು ಹೇಳಿದರು.
ಈ ಸಂದರ್ಭದಲ್ಲಿ ಉಡುಪಿ ಅಪರ ಜಿಲ್ಲಾಧಿಕಾರಿ ವೀಣಾ, ಕುಂದಾಪುರ ಉಪವಿಭಾಗಾಧಿಕಾರಿ ಕೆ. ರಾಜು, ತಹಶಿಲ್ದಾರ್ ಕಿರಣ್ ಗೌರಯ್ಯ ಮೊದಲಾದವರು ಇದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…