Featured

ಕುಂದಾಪುರ : ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧಾರಣೆ, ಎಲ್ಲರೂ ಸರಕಾರದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು : ಉಡುಪಿ ಜಿಲ್ಲಾಧಿಕಾರಿ – Vishwnaews24

ಕುಂದಾಪುರ : ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧಾರಣೆ, ಎಲ್ಲರೂ ಸರಕಾರದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು : ಉಡುಪಿ ಜಿಲ್ಲಾಧಿಕಾರಿ

ಕುಂದಾಪುರ : ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಪಾಲನೆ ಎಲ್ಲಾ ನಾಗರಿಕರ ಜವಬ್ದಾರಿಯಾಗಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧಾರಣೆ, ಅಂತರ ಪಾಲನೆ ಮಾಡಬೇಕೆಂದು ಸೋಮವಾರ ಹೊಸ ನಿರ್ದೇಶನ ನೀಡಿದ್ದು ಎಲ್ಲರೂ ಸರಕಾರದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದ್ದಾರೆ.

ಕುಂದಾಪುರ ತಾಲೂಕು ಪಂಚಾಯತ್ ಎದುರು‌ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹೊಸ ನಿರ್ದೇಶನದ ಹಿನ್ನೆಲೆ ಸ್ಥಳೀಯಾಡಳಿತ ತಂಡದ ಜೊತೆಗೆ ಈ ಆದೇಶ ಪಾಲನೆಯಲ್ಲಿ ತೊಡಗಿಸಿಕೊಳ್ಳಲಿದೆ. ಸಾರ್ವಜನಿಕರು ಸ್ವಯಂಪ್ರೇರಿತವಾಗಿ ಇದನ್ನು ಮೈಗೂಡಿಸಿಕೊಳ್ಳಬೇಕು. ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಲಸಿಕಾಕರಣ ಉತ್ತಮವಾಗಿ ನಡೆದಿದೆ. ಮೊದಲನೇ ಡೋಸ್ ಪಡೆದವರು ನೂರಕ್ಕೆ ನೂರು‌ಪ್ರತಿಶತವಾಗಿದ್ದು, 98.5% ಜನರು ಎರಡನೇ ಡೋಸ್ ಪಡೆದಿದ್ದಾರೆ. ಉಳಿದವರು ಕೂಡ ಲಸಿಕೆ‌ ಪಡೆಯಬೇಕು ಹಾಗೂ ಅರ್ಹರು ಮುನ್ನೆಚ್ಚರಿಕಾ ಡೋಸ್ ಕೂಡ ಪಡೆಯಲು ಪ್ರಚಾರ ಮಾಡಲಾಗುತ್ತದೆ. ಖಾಸಗಿ‌ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ಜೊತೆ ವಿಡಿಯೋ ಕಾನ್ಪರೆನ್ಸ್ ನಡೆಸಿ ಲಸಿಕೆ ಲಭ್ಯತೆಯ ಬಗ್ಗೆ ಗಮನಹರಿಸಲು ಸೂಚನೆ ನೀಡಲಾಗಿದೆ. ಕೋವಿಡ್ ವಿರುದ್ಧ ಹೋರಾಟಕ್ಕೆ ವ್ಯಾಕ್ಸಿನ್ ಅತ್ಯಗತ್ಯವಾಗಿದೆ ಎಂದವರು ಹೇಳಿದರು.

ಇನ್ನು ಕೊರೋನಾ ಲಕ್ಷಣಗಳಿದ್ದವರು ಪರೀಕ್ಷೆ ಮಾಡಿಸಿಕೊಂಡು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳು, ಐಸೋಲೇಶನ್ ಮೊದಲಾದ ಪ್ರಕ್ರಿಯೆಗಳಿಗೆ ಒಳಪಡಬೇಕು. ಪರೀಕ್ಷೆ ಮಾಡಿಸಿಕೊಳ್ಳುವುದರಿಂದ ಆರಂಭದಲ್ಲೇ ಸೂಕ್ತ ಚಿಕಿತ್ಸೆ ಪಡೆಯಬಹುದು ಹಾಗೂ ಹರಡುವಿಕೆ ತಡೆಯಬಹುದು ಎಂದವರು ಹೇಳಿದರು.

ಈ ಸಂದರ್ಭದಲ್ಲಿ ಉಡುಪಿ‌ ಅಪರ ಜಿಲ್ಲಾಧಿಕಾರಿ ವೀಣಾ, ಕುಂದಾಪುರ ಉಪವಿಭಾಗಾಧಿಕಾರಿ ಕೆ. ರಾಜು, ತಹಶಿಲ್ದಾರ್ ಕಿರಣ್ ಗೌರಯ್ಯ ಮೊದಲಾದವರು ಇದ್ದರು.

Vishwa News 24

Recent Posts

ಇ-ಫಾರ್ಮಸಿ ವಿರೋಧಿಸಿ ಇಂದು ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್ -vishwanews24

ಇ-ಫಾರ್ಮಸಿ ವಿರೋಧಿಸಿ ಇಂದು ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್ ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್…

13 seconds ago

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು -vishwanews24

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು ಬೆಳ್ತಂಗಡಿ : ಇಂಜಿನಿಯರಿಂಗ್ ವಿದ್ಯಾರ್ಥಿಗಳ ಏಳು ಜನರ ತಂಡವೊಂದು ಈಜಲು…

17 minutes ago

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ’ ವಜ್ರಾಭರಣ ಅನಾವರಣ -vishwanews24

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…

2 days ago

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು – vishwanews24

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…

2 days ago

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ – vishwanews24

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…

2 days ago

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…

2 days ago