ಕುಂದಾಪುರ : ಹಾಲಾಡಿ ಶ್ರೀನಿವಾಸ ಶೆಟ್ಟಿ ಆಶೀರ್ವಾದ ಪಡೆದ ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ -Vishwanews24

Featured, ಉಡುಪಿ

ಕುಂದಾಪುರ : ಹಾಲಾಡಿ ಶ್ರೀನಿವಾಸ ಶೆಟ್ಟಿ ಆಶೀರ್ವಾದ ಪಡೆದ ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ

ಕುಂದಾಪುರ : ಕರಾವಳಿ ಭಾಗದ ಪ್ರಭಾವಿ ನಾಯಕ, ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರನ್ನು ಶನಿವಾರ ಬೆಳಗ್ಗೆ ಬೈಂದೂರು ಬಿಜೆಪಿ ಅಭ್ಯರ್ಥಿ, ಯುವ ನಾಯಕ ಗುರುರಾಜ್ ಗಂಟಿಹೊಳೆ ಅವರು ಹಾಲಾಡಿಯವರ ನಿವಾಸದಲ್ಲಿ ಭೇಟಿಯಾಗಿ, ಆಶೀರ್ವಾದ ಪಡೆದು, ಸಹಕಾರ ಕೋರಿದರು.

ಈ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಹಾಲಾಡಿ ಶ್ರೀನಿವಾಸ ಶೆಟ್ರು, ಪಕ್ಷದ ಹಿರಿಯ ನಾಯಕರು, ಪ್ರಮುಖರು ನನಗೆ ಬೈಂದೂರು ಕ್ಷೇತ್ರದ ಜವಾಬ್ದಾರಿಯನ್ನು ವಹಿಸಿಕೊಳ್ಳುವಂತೆ ಮನವಿ‌ ಮಾಡಿದ್ದಾರೆ. ಇದು ನನ್ನ ಕರ್ತವ್ಯವೂ ಹೌದು. ಯುವ ನಾಯಕ ಗುರುರಾಜ್ ಅವರಿಗೆ ನಿಮ್ಮೆಲ್ಲರ ಬೆಂಬಲ, ಸಹಕಾರ ಬೇಕಾಗಿದೆ ಎಂದರು.

ಬಂಟ್ವಾಳ: ಹೃದಯಾಘಾತ – ಮಲಗಿದ್ದಲ್ಲಿಯೇ ಯುವಕ ಮೃತ್ಯು – Vishwanews24

ಗುರುರಾಜ್ ಗಂಟಿಹೊಳೆ ಮಾತನಾಡಿ, ಹಾಲಾಡಿ ಶ್ರೀನಿವಾಸ ಶೆಟ್ಟರು ನಮಗೆಲ್ಲ ಆದರ್ಶಪ್ರಾಯರು. ಅವರ ಆರ್ಶಿವಾದವನ್ನು ಪಡೆದಿದ್ದೇನೆ. ಅವರ ಬೆಂಬಲ, ಸಹಕಾರವಿಂದು ಸಿಕ್ಕಿದೆ.‌ ಈಗ ನನಗೆ ಧೈರ್ಯ ಬಂದಿದೆ. ಅವರ ಸಾಮಾಜಿಕ ಕೈಂಕರ್ಯ ನಮಗೆಲ್ಲ ಮಾದರಿ ಎಂದು ಹೇಳಿದಲ್ಲದೆ ಬೈಂದೂರು ಹಾಲಿ ಶಾಸಕ ಸುಕುಮಾರ್ ಶೆಟ್ಟರನ್ನು ಭೇಟಿಯಾಗಿದ್ದು, ಅವರು ಸಹ ನಾನಿದ್ದೇನೆ, ಹೆದರಬೇಡ, ಧೈರ್ಯದಿಂದ ಇರು ಎನ್ನುವ ಮಾತನ್ನು ಕೊಟ್ಟಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

ಕಾಪು ವಿಧಾನಸಭಾ ಕ್ಷೇತ್ರ : ಸಬೀನಾ ಸಮದ್ ಜೆಡಿಎಸ್ ಅಭ್ಯರ್ಥಿ – Vishwanews24 

Leave a Reply