ಕುಂದಾಪುರ : ಕರಾವಳಿ ಭಾಗದ ಪ್ರಭಾವಿ ನಾಯಕ, ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರನ್ನು ಶನಿವಾರ ಬೆಳಗ್ಗೆ ಬೈಂದೂರು ಬಿಜೆಪಿ ಅಭ್ಯರ್ಥಿ, ಯುವ ನಾಯಕ ಗುರುರಾಜ್ ಗಂಟಿಹೊಳೆ ಅವರು ಹಾಲಾಡಿಯವರ ನಿವಾಸದಲ್ಲಿ ಭೇಟಿಯಾಗಿ, ಆಶೀರ್ವಾದ ಪಡೆದು, ಸಹಕಾರ ಕೋರಿದರು.
ಈ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಹಾಲಾಡಿ ಶ್ರೀನಿವಾಸ ಶೆಟ್ರು, ಪಕ್ಷದ ಹಿರಿಯ ನಾಯಕರು, ಪ್ರಮುಖರು ನನಗೆ ಬೈಂದೂರು ಕ್ಷೇತ್ರದ ಜವಾಬ್ದಾರಿಯನ್ನು ವಹಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ. ಇದು ನನ್ನ ಕರ್ತವ್ಯವೂ ಹೌದು. ಯುವ ನಾಯಕ ಗುರುರಾಜ್ ಅವರಿಗೆ ನಿಮ್ಮೆಲ್ಲರ ಬೆಂಬಲ, ಸಹಕಾರ ಬೇಕಾಗಿದೆ ಎಂದರು.
ಗುರುರಾಜ್ ಗಂಟಿಹೊಳೆ ಮಾತನಾಡಿ, ಹಾಲಾಡಿ ಶ್ರೀನಿವಾಸ ಶೆಟ್ಟರು ನಮಗೆಲ್ಲ ಆದರ್ಶಪ್ರಾಯರು. ಅವರ ಆರ್ಶಿವಾದವನ್ನು ಪಡೆದಿದ್ದೇನೆ. ಅವರ ಬೆಂಬಲ, ಸಹಕಾರವಿಂದು ಸಿಕ್ಕಿದೆ. ಈಗ ನನಗೆ ಧೈರ್ಯ ಬಂದಿದೆ. ಅವರ ಸಾಮಾಜಿಕ ಕೈಂಕರ್ಯ ನಮಗೆಲ್ಲ ಮಾದರಿ ಎಂದು ಹೇಳಿದಲ್ಲದೆ ಬೈಂದೂರು ಹಾಲಿ ಶಾಸಕ ಸುಕುಮಾರ್ ಶೆಟ್ಟರನ್ನು ಭೇಟಿಯಾಗಿದ್ದು, ಅವರು ಸಹ ನಾನಿದ್ದೇನೆ, ಹೆದರಬೇಡ, ಧೈರ್ಯದಿಂದ ಇರು ಎನ್ನುವ ಮಾತನ್ನು ಕೊಟ್ಟಿದ್ದಾರೆ ಎಂದು ಹೇಳಿಕೊಂಡಿದ್ದಾರೆ.
ಉಡುಪಿ : ಮಲಬಾರ್ ಗೋಲ್ಡ್‌ನಲ್ಲಿ ‘ನಾಯ್ರಾ’ ನೂತನ ಸಂಗ್ರಹ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ : ಕಾಪು ತಾಲೂಕು ಪಡುಬಿದ್ರಿ ಬೇಂಗ್ರೆ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸಮಾಡಿಕೊಂಡಿದ್ದ ಕೂಲಿ…
ಕಾರ್ಕಳದಲ್ಲಿ ಕಾಂಗ್ರೆಸ್ ಪ್ರತಿಭಟನೆ: ಸುನಿಲ್ ಕುಮಾರ್ ರಾಜೀನಾಮೆಗೆ ಆಗ್ರಹ ; ಕಚೇರಿಗೆ ಮುತ್ತಿಗೆ ಯತ್ನ ಕಾರ್ಕಳ: ಸಚಿವ ನಾಗೇಂದ್ರ ರಾಜೀನಾಮೆ…
ಅಯೋಧ್ಯೆ ರಾಮಮಂದಿರದ ಸಿಇಓ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ ಲಕ್ನೋ: ಅಯೋಧ್ಯೆ ಶ್ರೀ ರಾಮ ಜನ್ಮಭೂಮಿ…
ರಾಹುಲ್ ಗಾಂಧಿಯನ್ನ ರಾಜಕೀಯವಾಗಿ ಮುಗಿಸಲು ಬಿಜೆಪಿ ಸಂಚು ಮಾಡಿದೆ : ಸಿದ್ದರಾಮಯ್ಯ ಬೆಂಗಳೂರು : ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ…
ಕುಂದಾಪುರ: ಗಂಗೊಳ್ಳಿಯಲ್ಲಿ ಮತ್ತೊಂದು ಮೀನುಗಾರಿಕಾ ಬೋಟ್ ಮುಳುಗಡೆ; 6 ಮೀನುಗಾರರ ರಕ್ಷಣೆ ಕುಂದಾಪುರ : ಮೀನುಗಾರಿಕೆಗೆ ತೆರಳುತ್ತಿದ್ದ ಮೀನುಗಾರಿಕಾ ಬೋಟ್‌ವೊಂದು…