ಕುಂದಾಪುರ: ಕುಂದಾಪುರ ನಗರ ವ್ಯಾಪ್ತಿಯಲ್ಲಿ ಅವೈಜ್ಞಾನಿಕವಾದ ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಿಂದ ರಸ್ತೆ ಮಳೆಗೆ ಹೊಳೆಯಾಗುತ್ತಿದ್ದು, ನೀರು ಹರಿದು ಹೋಗಲು ವ್ಯವಸ್ಥೆ ಇಲ್ಲದಿರುವುದರಿಂದ ಈ ರಸ್ತೆಯಲ್ಲಿ ವಾಹನ ಸಂಚರಿಸುವುದು ಕಷ್ಟ ಸಾಧ್ಯವಾಗುತ್ತದೆ.
ಹೆದ್ದಾರಿ ನಿರ್ಮಾಣದ ಅವಾಂತರದಿಂದ ಸೃಷ್ಟಿಯಾದ ಸಮಸ್ಯೆಗೆ ಜನ ಸಮಸ್ಯೆ ಅನುಭವಿಸುತ್ತಿದ್ದು ಸೋಮವಾರ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರು ಸಂಬಂಧಿತ ಅಧಿಕಾರಿಗಳನ್ನು ತೀವ್ರ ತರಾಟೆಗೆ ತಗೆದುಕೊಂಡರು. ತಕ್ಷಣವೇ ತುರ್ತು ದುರಸ್ತಿ ಕಾರ್ಯ ಆರಂಭಿಸಲಾಯಿತು. ಶಾಸಕರು ಖುದ್ದು ನಿಂತು ಸಮಸ್ಯೆ ಸರಿಪಡಿಸಿದರು. ನೀರು ಹರಿದು ಹೋಗಲು ಸರಿಯಾದ ವ್ಯವಸ್ಥೆ ಇಲ್ಲದಿರುವುದನ್ನು ಸರಿಪಡಿಸಿಲು ಸೂಚಿಸಿದರು.
ಚರಂಡಿಗಳಿಗೆ ಸಂಪರ್ಕ ಕಲ್ಪಿಸಲಾಯಿತು. ಬೆಳಿಗ್ಗೆಯಿಂದಲೇ ಶಾಸಕರು ಕುಂದಾಪುರ, ಬಸ್ರೂರು ಮೂರ್‍ಕೈ ಮೊದಲಾದ ಪ್ರದೇಶಗಳಲ್ಲಿ ಹೆದ್ದಾರಿಯಿಂದ ನೀರು ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿರುವ ಪ್ರದೇಶಗಳನ್ನು ಸರಿ ಪಡಿಸುವಲ್ಲಿ ತಾವೇ ನಿಂತು ಮಾರ್ಗದರ್ಶನ ನೀಡಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…