ಕುಂದಾಪುರ: ರಾಷ್ಟ್ರೀಯ ಹೆದ್ದಾರಿಯ ಹೊಂಡಗಳ ಪರಿಣಾಮವಾಗಿ ಬಸ್ ಒಂದು ಹೊಂಡಕ್ಕಿಳಿದು ಚಾಲಕನ ನಿಯಂತ್ರಣ ತಪ್ಪಿ ಸೀದಾ ಡಿವೈಡರ್ ಮೇಲೆ ಏರಿದ ಘಟನೆ ನಡೆದಿದೆ.
ಕರಾವಳಿಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಇದರ ಬೆನ್ನಲ್ಲೆ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಹೊಂಡಗಳು ಇದೀಗ ಯಮಸ್ವರೂಪಿಯಾಗಲಾರಂಭಿಸಿವೆ. ಸುಮಾರು ಎರಡು ಅಡಿ ಹೊಂಡಕ್ಕೆ ಬಸ್ ಇಳಿದ ಪರಿಣಾಮ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು 300 ಮೀಟರ್ ದೂರ ಡಿವೈಡರ್ ಮೇಲೆ ಚಲಿಸಿದ ಘಟನೆ ತಾಲೂಕಿನ ಕುಂಭಾಸಿ ಸಮೀಪದ ಕೊರವಡಿ ಕ್ರಾಸ್ ಬಳಿ ಶನಿವಾರ ನಡೆದಿದೆ.
ಮುಂಬೈನಿಂದ ಮಂಗಳೂರಿನತ್ತ ಸಾಗುತ್ತಿದ್ದ ಆನಂದ್ ಹೆಸರಿನ ಖಾಸಗಿ ಬಸ್ ಕುಂಭಾಸಿ ಸಮೀಪದ ಕೊರವಡಿ ಕ್ರಾಸ್ ಬಳಿ ಹೆದ್ದಾರಿ ಹೊಂಡಕ್ಕೆ ಬಸ್ ಟಯರ್ ಇಳಿದಾಗ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಸುಮಾರು 300 ಮೀಟರ್ ದೂರ ಡಿವೈಡರ್ ಏರಿ ಸಾಗಿದ್ದು, ಚಾಲಕನ ಜಾಗರುಕತೆಯಿಂದಾಗಿ ಪಲ್ಟಿಯಾಗುವುದು ತಪ್ಪಿದಂತಾಗಿದೆ. ಹೀಗೆ ಅಪಾಯದಲ್ಲಿ ಸಾಗಿದ ಬಸ್ ಕನ್ನುಕರೆ ಮಸೀದಿ ಎದುರು ಡಿವೈಡರ್ ಏರಿ ನಿಂತಿದೆ. ಬಸ್ಸಿನಲ್ಲಿ 40ಕ್ಕೂ ಅಧಿಕ ಪ್ರಯಾಣಿಕರು ಇದ್ದರು ಎಂದು ತಿಳಿದುಬಂದಿದ್ದು ಯಾವುದೇ ಅಪಾಯ ಸಂಭವಿಸಿಲ್ಲ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…