Featured

ಕುಂದಾಪುರ: ಹೆರಿಗೆ ಸಂದರ್ಭ ಮಗು ಸಾವು – ವೈದ್ಯರ ನಿರ್ಲಕ್ಷ್ಯ ಸರ್ಕಾರಿ ಎಂದು ಆರೋಪಿಸಿ ಆಸ್ಪತ್ರೆಯ ಎದುರು ಪ್ರತಿಭಟನೆ – vishwanews24

ಕುಂದಾಪುರ: ಹೆರಿಗೆ ಸಂದರ್ಭ ಮಗು ಸಾವು – ವೈದ್ಯರ ನಿರ್ಲಕ್ಷ್ಯ ಸರ್ಕಾರಿ ಎಂದು ಆರೋಪಿಸಿ ಆಸ್ಪತ್ರೆಯ ಎದುರು ಪ್ರತಿಭಟನೆ

ಕುಂದಾಪುರ : ಕುಂದಾಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೆರಿಗೆ ಸಂದರ್ಭ ವೈದ್ಯರ ನಿರ್ಲಕ್ಷ್ಯದಿಂದಾಗಿ ಮಗು ಸಾವನ್ನಪ್ಪಿದೆ ಎಂದು ಆರೋಪಿಸಿ ಆಸ್ಪತ್ರೆಯ ಎದುರು ಮಗುವನ್ನು ಕಳೆದುಕೊಂಡ ಪೋಷಕರ ಜೊತೆಗೆ ನೂರಾರು ಜನ ಸಾರ್ವಜನಿಕರು ಪ್ರತಿಭಟನೆ ನಡೆಸಿದ ಘಟನೆ ಸೋಮವಾರ ಕುಂದಾಪುರದ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ.

ಗಂಗೊಳ್ಳಿಯ ಶ್ರೀನಿವಾಸ ಖಾರ್ವಿ ಹಾಗೂ ಜ್ಯೋತಿ ಖಾರ್ವಿ ಎಂಬ ದಂಪತಿಗಳೇ ಮಗುವನ್ನು ಕಳೆದುಕೊಂಡವರು. ಎಂಟೂವರೆ ತಿಂಗಳ ಗರ್ಭಿಣಿಯಾಗಿದ್ದ ಜ್ಯೋತಿ ಖಾರ್ವಿ ಅವರು ನವಂಬರ್ 16ರಂದು ಚೆಕಪ್ ಮಾಡಿಸಿಕೊಳ್ಳಲು ಕುಂದಾಪುರ ತಾಲೂಕು ಆಸ್ಪತ್ರೆಗೆ ಬಂದಿದ್ದರು. ಆ ಸಂದರ್ಭ ಎಂಟೂವರೆ ತಿಂಗಳ ಸ್ಕ್ಯಾನಿಂಗ್ ಮಾಡಿಸಿಕೊಳ್ಳುವ ಬಗ್ಗೆ ವೈದ್ಯರಲ್ಲಿ ಪ್ರಸ್ತಾವಿಸಿದಾಗ ಅದೇನೂ ಬೇಡ ಎಂದಿದ್ದರು ಎನ್ನಲಾಗಿದೆ. ಬಳಿಕ ಮನೆಗೆ ಹಿಂತಿರುಗಿದ್ದು. ಮಾರನೇ ದಿನ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ತಕ್ಷಣ ಪತಿ ಶ್ರೀನಿವಾಸ ಖಾರ್ವಿಯವರು ಪತ್ನಿಯನ್ನು ಕುಂದಾಪುರ ಸರ್ಕಾರೀ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಆದರೆ ಅಲ್ಲಿ ಸರಿಯಾಗಿ ಡ್ಯೂಟಿ ಡಾಕ್ಟರ್ ಕೂಡಾ ಇಲ್ಲದೇ ಅಡ್ಮಿಷನ್ ಮಾಡಿಸಿಕೊಂಡಿರಲಿಲ್ಲ ಎನ್ನಲಾಗಿದೆ. ನವೆಂಬರ್ 20ರಂದು ಬೆಳಿಗ್ಗೆ ನಾರ್ಮಲ್ ಡೆಲಿವರಿ ಆಗಿದೆ. ಆದರೆ ಹೆರಿಗೆ ಆದ ತಕ್ಷಣ ಮಗು ಸಾವನ್ನಪ್ಪಿದೆ ಎಂದು ವೈದ್ಯರು ಶ್ರೀನಿವಾಸ ಖಾರ್ವಿಯಲ್ಲಿ ತಿಳಿಸಿದ್ದಾರೆ. ಕಾರಣ ಕೇಳಿದಾಗ ಮಗುವಿನ ಕುತ್ತಿಗೆಗೆ ಕರುಳು ಸಿಕ್ಕಿಹಾಕಿಕೊಂಡಿತ್ತು ಎನ್ನಲಾಗಿದೆ. ಇದರಿಂದ ಆಕ್ರೋಶಿತಗೊಂಡ ಸಾರ್ವಜನಿಕರು ಎಲ್ಲವೂ ಸರಿಯಾಗಿದ್ದ ಮೇಲೆ ವೈದ್ಯರ ನಿರ್ಲಕ್ಷ್ಯದಿಂದಲೇ ಮಗು ಸಾವನ್ನಪ್ಪಿದೆ ಎಂದು ಆರೋಪಿಸಿ ಬೆಳಿಗ್ಗೆಯಿಂದಲೇ ಪ್ರತಿಭಟನೆ ನಡೆಸಲಾಗುತ್ತಿದೆ.

ಸೋಮವಾರ ಸಂಜೆ ಘಟನಾ ಸ್ಥಳಕ್ಕೆ ಕುಂದಾಪುರ ತಹಶೀಲ್ದಾರ್ ಶೋಭಾಲಕ್ಷ್ಮಿ ಆಗಮಿಸಿ ಸಂತ್ರಸ್ತರ ಅಹವಾಲು ಆಲಿಸಿ ಕ್ರಮಕೈಗೊಳ್ಳುವ ಭರವಸೆ ನೀಡಿದರೂ ಸಮಾಧಾನಗೊಳ್ಳದ ಪ್ರತಿಭಟನಾಕಾರರು ಜಿಲ್ಲಾ ಆರೋಗ್ಯ ಅಧಿಕಾರಿ ಡಿ ಎಚ್ ಓ ಸ್ಥಳಕ್ಕೆ ಆಗಮಿಸಿ ತಪ್ಪಿತಸ್ಥ ವೈದ್ಯನ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಡಿ ಹೆಚ್ ಒ ಸಂಜೆಯ ವೇಳೆ ಆಗಮಿಸಿದರಾದರೂ ವೈದ್ಯನ ಅಮಾನತು ಮಾಡದೇ ಮನವಿ ಪ್ರತಿಭಟನೆ ಹಿಂತೆಗೆದುಕೊಳ್ಳುವುದಿಲ್ಲ ಎಂದು ಪಟ್ಟು ಹಿಡಿದು ಕುಳಿತುಕೊಂಡರು.

ಬಳಿಕ ರಾತ್ರಿ ಸ್ಥಳಕ್ಕೆ ಆಗಮಿಸಿದ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಪ್ರತಿಭಟನಾಕಾರರ ಬೆಂಬಲಕ್ಕೆ ನಿಂತರು. ಈ ಸಂದರ್ಭ ಕುಂದಾಪುರದ ನಾಗರೀಕರೂ ಆಸ್ಪತ್ರೆಯ ಮುಂದೆ ಪ್ರತಿಭಟನಾಕಾರರ ಬೆಂಬಲಕ್ಕೆ ನಿಂತಿದ್ದಲ್ಲದೇ, ಮಂಗಳವಾರ ವೈದ್ಯನನ್ನು ಅಮಾನತ್ತು ಮಾಡದೇ ಇದ್ದರೆ ಕುಂದಾಪುರ ಹಾಗೂ ಗಂಗೊಳ್ಳಿ ಬಂದ್ ಗೆ ಕರೆ ನೀಡುವ ೆಚ್ಚರಿಕೆಯನ್ನೂ ಶಾಸಕ ಗುರುರಾಜ್ ಗಂಟಿಹೊಳೆ ನೀಡಿದ್ದಾರೆ.

Vishwa News 24

Recent Posts

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

2 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

2 days ago

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

3 days ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

3 days ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

4 days ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

4 days ago