ಕುಂದಾಪುರ: ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ಸೀಟು ಸಿಕ್ಕಿದ್ದಕ್ಕೆ ಬೇಸರಗೊಂಡ ಅಪ್ರಾಪ್ತ ಪ್ರಾಯದ ವಿದ್ಯಾರ್ಥಿಯೊಬ್ಬ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಕುಂದಾಪುರ ತಾಲೂಕಿನ ಹಳ್ನಾಡು ಎಂಬಲ್ಲಿ ನಡೆದಿದೆ.
ಹಳ್ನಾಡು ಗ್ರಾಮದ ಶಿವಪ್ರಸಾದ್ ಶೆಟ್ಟಿ ಎಂಬುವರ ಮಗ ಸುಪ್ರಜ್ ಶೆಟ್ಟಿ(17) ಆತ್ಮಹತ್ಯೆ ಮಾಡಿಕೊಂಡಾತ. ಕುಂದಾಪುರದ ಖಾಸಗೀ ಆಂಗ್ಲಮಾಧ್ಯಮ ಶಾಲೆಯಲ್ಲಿ ಪಿಯು ವಿದ್ಯಾಭ್ಯಾಸ ಮಾಡಿದ್ದ ಸುಪ್ರಜ್ ಶೆಟ್ಟಿಗೆ ಮೆಡಿಕಲ್ ಓದುವ ಆಸೆಯಿತ್ತೆನ್ನಲಾಗಿದೆ. ಆದರೆ ಆತನಿಗೆ ಬೆಂಗಳೂರಿನಲ್ಲಿ ಇಂಜಿನಿಯರ್ ಸೀಟ್ ದೊರಕಿತ್ತು. ಇದು ಆತನಿಗೆ ಇಷ್ಟವಿರಲಿಲ್ಲ ಎನ್ನಲಾಗಿದೆ. ಆತನ ಮನೆಯವರು ಮಗನಿಗೆ ಬುದ್ಧಿವಾದ ಹೇಳಿ ಬೆಂಗಳೂರಿಗೆ ಕಳುಹಿಸಲು ಬಟ್ಟೆಬರೆಗಳನ್ನು ಪ್ಯಾಕ್ ಮಾಡಿದ್ದರೆನ್ನಲಾಗಿದೆ. ಎಲ್ಲವೂ ಸರಿಯಾಗಿದ್ದರೆ ಗುರುವಾರ ಆತ ಬೆಂಗಳೂರಿಗೆ ಹೊರಡಬೇಕಿತ್ತು. ಆದರೆ ಬುಧವಾರ ಸಂಜೆ ಹಳ್ನಾಡು ಮನೆಯ ಸಮೀಪದ ಹೊಳೆಯ ಬದಿಯಲ್ಲಿ ತನ್ನ ಚಪ್ಪಲಿ ಮತ್ತು ಮೊಬೈಲ್ ಬಿಟ್ಟಿರುವುದು ಕಂಡು ಬಂದಿದೆ.
ಇದರಿಂದ ಅನುಮಾನಗೊಂಡ ಮನೆಯವರು ಹಾಗೂ ಸ್ಥಳೀಯತು ಹುಡುಕಾಟ ನಡೆಸಿದ್ದರೂ ಪ್ರಯೋಜನವಾಗಿರಲಿಲ್ಲ. ಗುರುವಾರ ಮಧ್ಯಾಹ್ನ ಬಾಲಕನ ಮೃತದೇಹ ಅದೇ ಹೊಳೆಯಲ್ಲಿ ಪತ್ತೆಯಾಗಿದೆ. ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…