ಕುಂದಾಪುರ: ಹೋಟೆಲ್ ನಲ್ಲಿ ತಂಗಿದ್ದ ವ್ಯಕ್ತಿಯೋರ್ವರ ಲಕ್ಷಾಂತರ ಮೌಲ್ಯದ ಚಿನ್ನಾಭರಣವನ್ನು ಜೊತೆಗಿದ್ದ ಸ್ನೇಹಿತನೇ ಕಳ್ಳತನ ಮಾಡಿರುವ ಕುರಿತಂತೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಾಜಿ ಗೋಲ್ಡ್ ಎಂಡ್ ಡೈಮಂಡ್ಸ್ ಜುವೆಲ್ಲರಿಯಲ್ಲಿ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡಿಕೊಂಡಿರುವ ಮೂಲತಃ ರಾಜಸ್ಥಾನದವರಾದ ಪ್ರಸ್ತುತ ಅತ್ತಾವರ ನಿವಾಸಿ ರಮೇಶ್ ಕುಮಾರ್ (26) ಜೂನ್ 10 ರಂದು 421.380 ಮಿಲಿ ಗ್ರಾಂ ತೂಕದ ಚಿನ್ನಾಭರಣಗಳನ್ನು ಹಾಜಿ ಗೋಲ್ಡ್ ಎಂಡ್ ಡೈಮೆಂಡ್ ಶಾಫ್ ನಿಂದ ಮಾರಾಟ ಮಾಡಲು ಹೊರಟಿದ್ದರು. ಈ ವೇಳೆ ಮಧ್ಯಾಹ್ನ 12:00 ಗಂಟೆಗೆ ತನ್ನ ಸ್ನೇಹಿತರಾದ ರಾಜಸ್ಥಾನದ ಪಾಲಿ ಜಿಲ್ಲೆಯ ರಾಮ್ ಎಂಬಾತ ಮಂಗಳೂರಿನ ಪಂಪ್ವೇಲ್ ಬಳಿ ಸಿಕ್ಕಿದ್ದು ಇಬ್ಬರೂ ಕೂಡ ಜೊತೆಯಲ್ಲಿ ಬಸ್ಸಿನಲ್ಲಿ ಹೊರಟು ಸಂಜೆ 04:30 ಗಂಟೆಗೆ ಉಪ್ಪುಂದದ ಅಶೋಕ್ ಜ್ಯುವೆಲ್ಲರಿಗೆ ಹೋಗಿ 14 ಗ್ರಾಂ ಚಿನ್ನಾಭರಣ ಮಾರಾಟ ಮಾಡಿ ಅಲ್ಲಿಂದ 14 ಗ್ರಾಂ ಚಿನ್ನದ ಗಟ್ಟಿಯನ್ನು ತೆಗೆದುಕೊಂಡು ವಾಪಸು ಮಂಗಳೂರಿಗೆ ಹೊರಟಿದ್ದರು.
ಕುಂದಾಪುರ ತಲುಪುವಾಗ ಸಂಜೆ 07:00 ಗಂಟೆ ಆದ್ದರಿಂದ ರಮೇಶ್ ಕುಮಾರ್ ಹಾಗೂ ಅವರ ಸ್ನೇಹಿತ ರಾಮ್ ಕುಂದಾಪುರದ ಖಾಸಗಿ ಹೊಟೇಲ್ ಒಂದರಲ್ಲಿ ರೂಮ್ ನಂಬರ್ 206 ರಲ್ಲಿ ಉಳಿದ್ದುಕೊಂಡಿದ್ದು, ರಾತ್ರಿ ರಮೇಶ್ ಅವರು ಮಲಗುವ ಮಂಚದ ಬಳಿ ಚಿನ್ನಾಭರಣ ಇರುವ ಬ್ಯಾಗ್ ಇಟ್ಟು ಮಲಗಿದ್ದರು.
ಜೂನ್ 11 ರಂದು ಬೆಳಗ್ಗಿನ ಜಾವ 03:00 ಗಂಟೆ ಸುಮಾರಿಗೆ ರಮೇಶ್ ಕುಮಾರ್ ನೀರು ಕುಡಿಯಲು ಎದ್ದಾಗ ಜೊತೆಗಿದ್ದ ರಾಮ್ ರೂಮ್ ನಲ್ಲಿ ಇರಲಿಲ್ಲ. ಸಂಶಯಗೊಂಡು ಚಿನ್ನಾಭರಣದ ಬ್ಯಾಗ್ ಅನ್ನು ಪರಿಶೀಲಿಸಿದಾಗ ಕಳ್ಳತನ ಮಾಡಿರುವುದಾಗಿ ಬೆಳಕಿಗೆ ಬಂದಿದೆ.
ಕಳವಾದ ಚಿನ್ನಾಭರಣಗಳ ಒಟ್ಟು ಮೌಲ್ಯ 22,56,000/- ರೂಪಾಯಿ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಕುರಿತು ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…