Featured

ಕುಂದಾಪುರ:  400 ವರ್ಷಗಳ ಬಳಿಕ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ನೂತನ ರಥ ಸಮರ್ಪಣೆ – Vishwanews24

ಕುಂದಾಪುರ:  400 ವರ್ಷಗಳ ಬಳಿಕ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ನೂತನ ರಥ ಸಮರ್ಪಣೆ

ಕುಂದಾಪುರ:  400 ವರ್ಷಗಳ ಬಳಿಕ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ನೂತನ ರಥ ನಿರ್ಮಾಣಗೊಂಡಿದೆ. ಉದ್ಯಮಿ ದಿ.ಆರ್.ಎನ್.ಶೆಟ್ಟಿ ಅವರ ಪುತ್ರ ಸುನಿಲ್ ಆರ್.ಶೆಟ್ಟಿ ಅವರು ಈ ಬ್ರಹ್ಮರಥವನ್ನು ಸೇವಾರೂಪದಲ್ಲಿ ನಿರ್ಮಿಸಿಕೊಟ್ಟಿದ್ದು ಮೊದಲಿನ ರಥದ ಮಾದರಿಯಲ್ಲೇ ನೂತನ ರಥ ಕುಂಭಾಸಿಯ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರದಲ್ಲಿ ರಥವನ್ನು ನಿರ್ಮಿಸಲಾಗಿದ್ದು, ಫೆ.16ರಂದು ಮೂಕಾಂಬಿಕೆಗೆ ಬ್ರಹ್ಮರಥ ಸಮರ್ಪಣೆಯಾಗಲಿದೆ.

ಆ ಪ್ರಯುಕ್ತ ಫೆ.15ರಂದು ಕೋಟೇಶ್ವರದಲ್ಲಿ ಪುರ ಪ್ರವೇಶಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಕೊಲ್ಲೂರು ಮೂಕಾಂಬಿಕಾ ದೇವಸ್ತಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಚಂದ್ರಶೇಖರ ಶೇಟ್ಟಿ ಕೆರಾಡಿ, ವ್ಯವಸ್ಥಾಪನಾ ಸಮಿತಿ ಸದಸ್ಯರು, ಶಿಲ್ಪಿಗಳಾದ ಲಕ್ಷ್ಮೀನಾರಾಯಣ ಆಚಾರ್ಯ, ರಾಜಶೇಖರ ಆಚಾರ್ಯ, ವಿವಿಧ ದೇವಸ್ಥಾನಗಳ ಪ್ರಮುಖರು ಉಪಸ್ಥಿತರಿದ್ದರು.

ನೂತನ ಬ್ರಹ್ಮರಥವನ್ನು ಕುಂದಾಪುರ ಮಾರ್ಗದುದ್ದಕ್ಕೂ ದೇವಸ್ಥಾನಗಳ ವತಿಯಿಂದ ವಾದ್ಯಘೋಷ, ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಯಿತು. ರಥಕ್ಕೆ ಪೂಜೆ ಸಲ್ಲಿಸಲಾಯಿತು. ಸಾಕಷ್ಟು ಸಂಖ್ಯೆಯಲ್ಲಿ ಸೇರಿದ ಕುಂದಾಪುರದ ವಿವಿಧ ದೇವಸ್ಥಾನಗಳ ಪ್ರಮುಖರು, ಸಾರ್ವಜನಿಕರು ನೂತನ ರಥಕ್ಕೆ ಹೂ ಸಮರ್ಪಿಸಿದರು.

ಫೆ.16ರಂದು ಕೊಲ್ಲೂರಿನಲ್ಲಿ ದಾನಿಗಳ ಸಮ್ಮುಖದಲ್ಲಿ ರಥ ದೇವಿಗೆ ಸಮರ್ಪಣೆಯಾಗಲಿದೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

10 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

10 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

11 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

11 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

12 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

12 hours ago