ಕುಂಭಮೇಳದಲ್ಲಿ ಕಾಲ್ತುಳಿತ : ಮೃತರಿಗೆ ಪ್ರಧಾನಿ ಮೋದಿ , ಸಿಎಂ ಸಿದ್ದರಾಮಯ್ಯ ತೀವ್ರ ಸಂತಾಪ – vishwanews24
ಕುಂಭಮೇಳದಲ್ಲಿ ಕಾಲ್ತುಳಿತ : ಮೃತರಿಗೆ ಪ್ರಧಾನಿ ಮೋದಿ , ಸಿಎಂ ಸಿದ್ದರಾಮಯ್ಯ ತೀವ್ರ ಸಂತಾಪ
ಬೆಂಗಳೂರು : ಪ್ರಯಾಗ್ರಾಜ್‌ನ ಮಹಾಕುಂಭಮೇಳದಲ್ಲಿ ಕಾಲ್ತುಳಿತದಿಂದ ಮೃತಪಟ್ಟವರಿಗೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರಯಾಗ್ರಾಜ್‌ನ ಮಹಾಕುಂಭಮೇಳದಲ್ಲಿ ಇಂದು ಮುಂಜಾನೆ ಸಂಭವಿಸಿದ ಕಾಲ್ತುಳಿತದಲ್ಲಿ ಹಲವರು ಸಾವಿಗೀಡಾದ ಸುದ್ದಿ ತಿಳಿದು ದುಃಖವಾಗಿದೆ. ಮೃತರ ಆತ್ಮಗಳಿಗೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಘಟನೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.
ಪ್ರಯಾಗ್ರಾಜ್ನ ಮಹಾಕುಂಭಮೇಳದಲ್ಲಿ ಇಂದು ಮುಂಜಾನೆ ಸಂಭವಿಸಿದ ಕಾಲ್ತುಳಿತದಲ್ಲಿ ಹಲವರು ಸಾವಿಗೀಡಾದ ಸುದ್ದಿ ತಿಳಿದು ದುಃಖವಾಯಿತು. ಮೃತರ ಆತ್ಮಗಳಿಗೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಘಟನೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ.
ಕಾಲ್ತುಳಿತದಲ್ಲಿ ರಾಜ್ಯದ ಕೆಲವರು… pic.twitter.com/wS80ZQ7Sav
— Siddaramaiah (@siddaramaiah) January 29, 2025
ಕಾಲ್ತುಳಿತದಲ್ಲಿ ರಾಜ್ಯದ ಕೆಲವರು ಗಾಯಗೊಂಡಿರುವ ಮಾಹಿತಿಯಿದೆ. ಅವರೆಲ್ಲರನ್ನು ಕ್ಷೇಮವಾಗಿ ರಾಜ್ಯಕ್ಕೆ ಕರೆತರಲು ಅಧಿಕಾರಿಗಳನ್ನು ನಿಯೋಜಿಸಿದ್ದು, ನಮ್ಮವರ ರಕ್ಷಣೆಗೆ ಸರಕಾರ ಎಲ್ಲ ರೀತಿಯ ಪ್ರಯತ್ನವನ್ನು ನಡೆಸುತ್ತಿದೆ ಎಂದು ತಿಳಿಸಿದ್ದಾರೆ.
ಕುಂಭಮೇಳದಲ್ಲಿ ಪಾಲ್ಗೊಂಡಿರುವ ಕನ್ನಡಿಗರು ಸ್ವಲ್ಪ ಜಾಗರೂಕತೆಯಿಂದಿರಿ ಎಂದು ಹೇಳಿದ್ದಾರೆ.
ಮಹಾ ಕುಂಭದಲ್ಲಿ ನಡೆದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ತೀವ್ರ ಸಂತಾಪ ಸೂಚಿಸಿದ್ದು, ಈ ದುರಂತ ಅತ್ಯಂತ ದುಃಖಕರ ಎಂದು ಬಣ್ಣಿಸಿದ್ದಾರೆ.
ಈ ಕುರಿತು X ನಲ್ಲಿ ಪೋಸ್ಟ್ ಮಾಡಿರುವ ಅವರು, ʼ ನಾನು ಮುಖ್ಯಮಂತ್ರಿ ಯೋಗಿ ಜಿ ಅವರೊಂದಿಗೆ ಮಾತನಾಡುತ್ತಿದ್ದೇನೆ, ರಾಜ್ಯ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆʼ ಎಂದು ಹೇಳಿದ್ದಾರೆ.
ಪ್ರಯಾಗ್‌ರಾಜ್‌ನ ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲಾ ಸಹಾಯವನ್ನು ನೀಡುತ್ತಿದೆ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನರೇಂದ್ರ ಮೋದಿ ಹಾರೈಸಿದ್ದಾರೆ.
प्रयागराज महाकुंभ में हुआ हादसा अत्यंत दुखद है। इसमें जिन श्रद्धालुओं ने अपने परिजनों को खोया है, उनके प्रति मेरी गहरी संवेदनाएं। इसके साथ ही मैं सभी घायलों के शीघ्र स्वस्थ होने की कामना करता हूं। स्थानीय प्रशासन पीड़ितों की हरसंभव मदद में जुटा हुआ है। इस सिलसिले में मैंने…
— Narendra Modi (@narendramodi) January 29, 2025
ಕಾರ್ಕಳ : ಅತ್ತೂರು ಜಾತ್ರೆ ; ರಾತ್ರಿ 10 ಗಂಟೆಯ ಬಳಿಕ ಧ್ವನಿವರ್ಧಕ ಬಳಸದಂತೆ ಪೊಲೀಸರ ಸೂಚನೆ – vishwanews24
