Featured

ಕುಂಭಮೇಳದಲ್ಲಿ ಭಾಗವಹಿಸಲು ಆಗಮಿಸುವಂತಹ ಭಕ್ತರಿಗೆ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ -Vishwanews24

ಕುಂಭಮೇಳದಲ್ಲಿ ಭಾಗವಹಿಸಲು ಆಗಮಿಸುವಂತಹ ಭಕ್ತರಿಗೆ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ -Vishwanews24

ಡೆಹ್ರಾಡೂನ್: ಈ ಬಾರಿಯ ಕುಂಭಮೇಳಕ್ಕೆ ಭಾಗವಹಿಸಲು ಆಗಮಿಸುವಂತಹ ಭಕ್ತರಿಗೆ 72 ಗಂಟೆಗಳ ಒಳಗಿನ ಕೋವಿಡ್ ನೆಗೆಟಿವ್ ಟೆಸ್ಟ್ ರಿಪೋರ್ಟ್ ಕಡ್ಡಾಯ ಎಂದು ಉತ್ತರಾಖಂಡದ ಸರ್ಕಾರ ಆದೇಶ ಹೊರಡಿಸಿದೆ.

ಉತ್ತರಾಖಂಡದಲ್ಲಿ ಮತ್ತೆ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಕಳೆದ ಒಂದೇ ದಿನ 200 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿತ್ತು. ಹಾಗಾಗಿ ಹರಿದ್ವಾರದಲ್ಲಿ ನಡೆಯಲಿರುವ ಈ ಬಾರಿಯ ಕುಂಭಮೇಳಕ್ಕೆ ಬರುವ ಭಕ್ತರಿಗೆ 72 ಗಂಟೆಗಳ ಒಳಗಿನ ಕೊರೊನಾ ನೆಗೆಟಿವ್ ಟೆಸ್ಟ್ ಕಡ್ಡಾಯಗೊಳಿಸಲಾಗಿದೆ.

ಇದನ್ನೂ ಓದಿ : ಸಿಡಿ ಲೇಡಿಯ 2ನೇ ವಿಡಿಯೋ ಬಿಡುಗಡೆ : ಅಪ್ಪ ಅಮ್ಮನಿಗೆ ರಕ್ಷಣೆ ನೀಡಿ , ಅವರು ಸೇಫ್ ಎಂದು ತಿಳಿದ ತಕ್ಷಣ ಎಸ್‌ಐಟಿ ವಿಚಾರಣೆಗೆ ಹಾಜರಾಗಿ ಹೇಳಿಕೆ ನೀಡುತ್ತೇನೆ -Vishwanews24

ಈಗಾಗಲೇ ಹರಿದ್ವಾರದಲ್ಲಿ ಕುಂಭಮೇಳಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಎಪ್ರಿಲ್ 1 ರಿಂದ ಕುಂಭಮೇಳ ಆರಂಭವಾಗುತ್ತಿದೆ. ಈ ನಡುವೆ ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕಳೆದ ಒಂದೇ ದಿನ ಹರಿದ್ವಾರದಲ್ಲಿ 71, ಡೆಹ್ರಾಡೂನ್ 63, ನೈನಿತಾಲ್ 22 ಮತ್ತು ಇತರ ನಗರಗಳಲ್ಲಿ ಹೊಸ ಕೊರೊನಾ ಕೇಸ್ ಪತ್ತೆಯಾಗಿದೆ.

ಕುಂಭಮೇಳಕ್ಕೆ ಆಗಮಿಸುವ ಭಕ್ತರು 72 ಗಂಟೆಗಳ ಒಳಗಿನ ಕೋವಿಡ್ ನೆಗೆಟಿವ್ ವರದಿ ಅಥವಾ ಕೊರೊನಾ ಲಸಿಕೆ ಪಡೆದುಕೊಂಡ ವರದಿಯನ್ನು ಸಲ್ಲಿಸಿ ಕುಂಭಮೇಳದಲ್ಲಿ ಪಾಲ್ಗೊಳ್ಳುವಂತೆ ಉತ್ತರಾಖಂಡದ ಹೈಕೋರ್ಟ್ ಆದೇಶ ಹೊರಡಿಸಿರುವುದಾಗಿ ಕುಂಭಮೇಳದ ಮುಖ್ಯ ಕಾರ್ಯದರ್ಶಿ ಓಂ ಪ್ರಕಾಶ್ ಸ್ಥಳೀಯ ಮಾಧ್ಯಮದೊಂದಿಗೆ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ : ಕೋವಿಡ್ 2ನೇ ಅಲೆ : ಹೊಸ ಮಾರ್ಗ ಸೂಚಿ ಪ್ರಕಟ, ಮದುವೆಗೆ 200, ರಾಜಕೀಯ ಕಾರ್ಯಕ್ರಮಕ್ಕೆ– 500 ಮಂದಿಗೆ ಅವಕಾಶ -Vishwanews24

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago