ಬೆಂಗಳೂರು: ಕುಂಭಮೇಳ ಪ್ರವಾಸ ಹೆಸರಲ್ಲಿ 100ಕ್ಕೂ ಹೆಚ್ಚು ಜನರಿಂದ ಹಣ ಪಡೆದು ಲಕ್ಷಾಂತರ ರೂಪಾಯಿ ವಂಚನೆ ಮಾಡಿದ್ದ ಆರೋಪಿಯನ್ನು ಗೋವಿಂದರಾಜನಗರ ಪೊಲೀಸರು ಬಂಧಿಸಿದ್ದಾರೆ. ರಾಘವೇಂದ್ರ ರಾವ್ ಬಂಧಿತ ಆರೋಪಿ. ಪಾಂಚಜನ್ಯ ಟೂರ್ಸ್ ಆ್ಯಂಡ್ ಟ್ರಾವೆಲ್ಸ್ನಿಂದ ಅಯೋಧ್ಯೆ, ಕಾಶಿ, ಪ್ರಯಾಗ್ರಾಜ್ , ವಾರಣಾಸಿ ಸೇರಿಂದತೆ ವಿವಿಧ ತೀರ್ಥ ಕ್ಷೇತ್ರಗಳಿಗೆ 14 ದಿನದ ಪ್ರವಾಸಕ್ಕೆ ಕರೆದುಕೊಂಡು ಹೋಗುವುದಾಗಿ ಫೇಸ್ಬುಕ್ನಲ್ಲಿ ಜಾಹೀರಾತು ನೀಡಿದ್ದಾನೆ.
ಇದನ್ನು ನಂಬಿದ ಯಾತ್ರಾರ್ಥಿಗಳು ರಾಘವೇಂದ್ರ ರಾವ್ನನ್ನು ಸಂಪರ್ಕಿಸಿದ್ದಾರೆ. ಆಗ, ಆರೋಪಿ ರಾಘವೇಂದ್ರ ರಾವ್, ಏಳು ದಿನಗಳ ಪ್ಯಾಕೇಜ್ಗೆ ತಲಾ 49 ಸಾವಿರ ರೂ. ಪಡೆದಿದ್ದಾನೆ. ಹೀಗೆ, ಪ್ರವಾಸದ ಹೆಸರಲ್ಲಿ 100ಕ್ಕೂ ಹೆಚ್ಚು ಜನರಿಂದ 70 ಲಕ್ಷ ರೂ. ಪಡೆದಿದ್ದಾನೆ. ಬಳಿಕ, ರಾಘವೇಂದ್ರ ರಾವ್ ಎರಡು ರೀತಿ ವಂಚನೆ ಎಸಗಿದ್ದಾನೆ.
ಕೆಲವರಿಗೆ ಟಿಕೆಟ್ ಬುಕ್ ಮಾಡಿ, ನಂತರ ರದ್ದು ಮಾಡಿದ್ದಾನೆ. ರದ್ದು ಮಾಡಿದ ಬಳಿಕ ವಾಪಸ್ ಆದ ಹಣವನ್ನು ತನ್ನ ಖಾತೆಗೆ ಜಮೆ ಮಾಡಿಕೊಂಡಿದ್ದಾನೆ.
ಇನ್ನು ಕೆಲವರಿಗೆ, ಪ್ರಯಾಗ್ ರಾಜ್ಗೆ ಯಾತ್ರಿಕರು ತಲುಪಿದ ನಂತರ ಅವರ ರಿಟರ್ನ್ ಟಿಕೆಟ್ ರದ್ದು ಮಾಡಿದ್ದಾನೆ. ವಾಪಸ್ ಆದ ಹಣವನ್ನು ತನ್ನ ಖಾತೆಗೆ ಹಾಕಿಸಿಕೊಂಡಿದ್ದಾನೆ. ಟಿಕೆಟ್ ರದ್ದಾದ ಬಳಿಕ ರಾಘವೇಂದ್ರ ರಾವ್ ಮೊಬೈಲ್ ಸ್ವಿಚ್ ಆಫ್ ಮಾಡಿದ್ದಾನೆ. ಈ ಬಗ್ಗೆ ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ 20 ಕ್ಕೂ ಹೆಚ್ಚು ಜನರು ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ರಾಘವೇಂದ್ರ ರಾವ್ನನ್ನು ಬಂಧಿಸಿದ್ದಾರೆ.
ವಂಚಿಸಿ ಪಡೆದಿದ್ದ ಹಣದಲ್ಲಿ ರಾಘವೇಂದ್ರ ರಾವ್ ಬೆಟ್ಟಿಂಗ್ ಆಡಿ ಸೋತಿದ್ದಾನೆ. ರಾಂಘವೇಂದ್ರ ರಾವ್ ಬೆಟ್ಟಿಂಗ್ ಆ್ಯಪ್ನಲ್ಲಿ ಹಣ ಹಾಕಿರುವುದು ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ. ಗೋವಿಂದರಾಜನಗರ ಠಾಣೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…