Featured

ಕುಂಭಮೇಳ ಪ್ರವಾಸ ಹೆಸರಲ್ಲಿ ಜನರಿಂದ ಹಣ ಪಡೆದು ಲಕ್ಷಾಂತರ ರೂ. ವಂಚನೆ  – vishwanews24

ಕುಂಭಮೇಳ ಪ್ರವಾಸ ಹೆಸರಲ್ಲಿ ಜನರಿಂದ ಹಣ ಪಡೆದು ಲಕ್ಷಾಂತರ ರೂ. ವಂಚನೆ

ಬೆಂಗಳೂರು: ಕುಂಭಮೇಳ ಪ್ರವಾಸ ಹೆಸರಲ್ಲಿ 100ಕ್ಕೂ ಹೆಚ್ಚು ಜನರಿಂದ ಹಣ ಪಡೆದು ಲಕ್ಷಾಂತರ ರೂಪಾಯಿ ವಂಚನೆ ಮಾಡಿದ್ದ ಆರೋಪಿಯನ್ನು ಗೋವಿಂದರಾಜನಗರ ಪೊಲೀಸರು ಬಂಧಿಸಿದ್ದಾರೆ. ರಾಘವೇಂದ್ರ ರಾವ್ ಬಂಧಿತ ಆರೋಪಿ. ಪಾಂಚಜನ್ಯ ಟೂರ್ಸ್ ಆ್ಯಂಡ್​ ಟ್ರಾವೆಲ್ಸ್​ನಿಂದ ಅಯೋಧ್ಯೆ, ಕಾಶಿ, ಪ್ರಯಾಗ್​ರಾಜ್ , ವಾರಣಾಸಿ ಸೇರಿಂದತೆ ವಿವಿಧ ತೀರ್ಥ ಕ್ಷೇತ್ರಗಳಿಗೆ 14 ದಿನದ ಪ್ರವಾಸಕ್ಕೆ ಕರೆದುಕೊಂಡು ಹೋಗುವುದಾಗಿ ಫೇಸ್​ಬುಕ್​ನಲ್ಲಿ ಜಾಹೀರಾತು ನೀಡಿದ್ದಾನೆ.

ಇದನ್ನು ನಂಬಿದ ಯಾತ್ರಾರ್ಥಿಗಳು ರಾಘವೇಂದ್ರ ರಾವ್​ನನ್ನು ಸಂಪರ್ಕಿಸಿದ್ದಾರೆ. ಆಗ, ಆರೋಪಿ ರಾಘವೇಂದ್ರ ರಾವ್, ಏಳು ದಿನಗಳ ಪ್ಯಾಕೇಜ್​ಗೆ ತಲಾ 49 ಸಾವಿರ ರೂ. ಪಡೆದಿದ್ದಾನೆ.​ ಹೀಗೆ, ಪ್ರವಾಸದ ಹೆಸರಲ್ಲಿ 100ಕ್ಕೂ ಹೆಚ್ಚು ಜನರಿಂದ 70 ಲಕ್ಷ ರೂ. ಪಡೆದಿದ್ದಾನೆ. ಬಳಿಕ, ರಾಘವೇಂದ್ರ ರಾವ್ ಎರಡು ರೀತಿ ವಂಚನೆ ಎಸಗಿದ್ದಾನೆ.

ಕೆಲವರಿಗೆ ಟಿಕೆಟ್ ಬುಕ್ ಮಾಡಿ, ನಂತರ ರದ್ದು ಮಾಡಿದ್ದಾನೆ. ರದ್ದು ಮಾಡಿದ ಬಳಿಕ ವಾಪಸ್​ ಆದ ಹಣವನ್ನು ತನ್ನ ಖಾತೆಗೆ ಜಮೆ ಮಾಡಿಕೊಂಡಿದ್ದಾನೆ.

ಇನ್ನು ಕೆಲವರಿಗೆ, ಪ್ರಯಾಗ್ ರಾಜ್​ಗೆ ಯಾತ್ರಿಕರು ತಲುಪಿದ ನಂತರ ಅವರ ರಿಟರ್ನ್ ಟಿಕೆಟ್ ರದ್ದು ಮಾಡಿದ್ದಾನೆ. ವಾಪಸ್​ ಆದ ಹಣವನ್ನು ತನ್ನ ಖಾತೆಗೆ ಹಾಕಿಸಿಕೊಂಡಿದ್ದಾನೆ. ಟಿಕೆಟ್ ರದ್ದಾದ ಬಳಿಕ ರಾಘವೇಂದ್ರ ರಾವ್​ ಮೊಬೈಲ್ ಸ್ವಿಚ್​ ಆಫ್ ಮಾಡಿದ್ದಾನೆ. ಈ ಬಗ್ಗೆ ಗೋವಿಂದರಾಜನಗರ ಪೊಲೀಸ್​ ಠಾಣೆಯಲ್ಲಿ 20 ಕ್ಕೂ ಹೆಚ್ಚು ಜನರು ದೂರು‌ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ರಾಘವೇಂದ್ರ ರಾವ್​ನನ್ನು ಬಂಧಿಸಿದ್ದಾರೆ.

ವಂಚಿಸಿ ಪಡೆದಿದ್ದ ಹಣದಲ್ಲಿ ರಾಘವೇಂದ್ರ ರಾವ್ ಬೆಟ್ಟಿಂಗ್ ಆಡಿ ಸೋತಿದ್ದಾನೆ. ರಾಂಘವೇಂದ್ರ ರಾವ್​ ಬೆಟ್ಟಿಂಗ್ ಆ್ಯಪ್​ನಲ್ಲಿ ಹಣ ಹಾಕಿರುವುದು ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ. ಗೋವಿಂದರಾಜನಗರ ಠಾಣೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Vishwa News 24

Recent Posts

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ – vishwanews24

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…

4 hours ago

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

8 hours ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

9 hours ago

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬಳಿಕ…

9 hours ago

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

10 hours ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

10 hours ago