ಮಂಗಳೂರು : ಮಂಗಳೂರಿನಲ್ಲಿ ಭಾರೀ ದೊಡ್ಡ ಅನಾಹುತ ತಪ್ಪಿದೆ, ಇದಕ್ಕೆ ದೇವರಿಗೆ ಧನ್ಯವಾದಗಳು ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅಲೋಕ್ ಕುಮಾರ್ ಮಂಗಳೂರಿನಲ್ಲಿ ದೊಡ್ಡ ದುರಂತವೊಂದು ತಪ್ಪಿ ಹೋಗಿದೆ.
ಗರೋಡಿ ಕ್ಷೇತ್ರದ 200 ಮೀಟರ್ ದೂರ ಕುಕ್ಕರ್ ಬಾಂಬ್ ಬ್ಲಾಸ್ಟ್ ಆಗಿದೆ. ಈ ಭಯಾನಕ ಅನಾಹುತ ತಪ್ಪಿಸಿದ್ದೇ ಗರೋಡಿ ಕ್ಷೇತ್ರದ ಕಾರಣಿಕ ಶಕ್ತಿಗಳು ಎಂದು ಭಕ್ತರು ಹೇಳಿದ್ದಾರೆ ಎಂದು ಅಲೋಕ್ ಕುಮಾರ್ ಹೇಳಿದ್ದಾರೆ.
ಬರೀ ಮಾನವ ಬಲವೊಂದಿದ್ದರೆ ಸಾಲದು ದೈವಬಲವೂ ಬೇಕು ಅನ್ನೋದಕ್ಕೆ ಇದೇ ಸಾಕ್ಷಿ, ಮಂಗಳೂರಿನ ಗರೋಡಿ ಶ್ರೀ ಬ್ರಹ್ಮ ಬೈದರ್ಕಳ ಕ್ಷೇತ್ರದಲ್ಲಿ ನೆಲೆಯೂರಿರುವ ಕೋಟಿ-ಚೆನ್ನಯ್ಯ ಅವಳಿ ಮಹಾಪುರುಷ ಶಕ್ತಿಗಳು ಮಂಗಳೂರಿನಲ್ಲಿ ಸಂಭವಿಸುತ್ತಿದ್ದ ದೊಡ್ಡ ದುರಂತವೊಂದನ್ನು ತಪ್ಪಿಸಿದೆ ಎಂದರು.
ಮಂಗಳೂರಿನ ನಾಗುರಿಯ ಕಂಕನಾಡಿ ಪೊಲೀಸ್ ಠಾಣೆ ಬಳಿ ಆಟೋದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಗಾಯಗೊಂಡಿರುವ ಶಾರೀಕ್ನ ಕುಟುಂಬಸ್ಥರು ಮಂಗಳೂರಿನ ಆಸ್ಪತ್ರೆಗೆ ಆಗಮಿಸಿ ಆತನ ಗುರುತು ಪತ್ತೆ ಹಚ್ಚಿದ್ದಾರೆ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ. ಆಟೋದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಗಾಯಗೊಂಡಿರುವ ಶಂಕಿತ ಶಾರೀಕ್ನ ಚಿಕ್ಕಮ್ಮ, ಸಹೋದರಿ ಶಿವಮೊಗ್ಗದಿಂದ ಮಂಗಳೂರಿನ ಆಸ್ಪತ್ರೆಗೆ ಆಗಮಿಸಿದ್ದು ಆತನ ಗುರುತು ಪತ್ತೆ ಹಚ್ಚಿದ್ದಾರೆ. ಈತ ಮಂಗಳೂರಿನ ಗೋಡೆ ಬರಹದ ಆರೋಪಿ ಕೂಡ ಆಗಿದ್ದು, ವಿಧ್ವಂಸಕ ಕೃತ್ಯ ಎಸೆಗಲು ಸಂಚು ರೂಪಿಸಿದ್ದು, ಆತ ಗುಣಮುಖನಾದ ಬಳಿನ ಕಸ್ಟಡಿಗೆ ತೆಗೆದುಕೊಂಡು ಹೆಚ್ಚಿನ ತನಿಖೆ ನಡೆಸಲಾಗುವುದು ಎಂದರು.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…