Featured

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ : ತಂಬಾಕು ಉತ್ಪನ್ನಗಳು ವಶಕ್ಕೆ – vishwanews24

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ : ತಂಬಾಕು ಉತ್ಪನ್ನಗಳು ವಶಕ್ಕೆ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದ ಅಂಗಡಿಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, ತಂಬಾಕು ಉತ್ಪನ್ನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಅಂಗಧಿಗಳಲ್ಲಿ ತಂಬಾಕು ಉತ್ಪನ್ನಗಳಾದ ಸಿಗರೇಟ್, ಪಾನ್ ಪರಾಗ್, ಮಧು, ಮಾರುತಿ, ಕೂಲ್ ಲಿಪ್ ಬೇರೆ ಬೇರೆ ರೀತಿಯ ತಂಬಾಕು ಉತ್ಪನ್ನಗಳನ್ನು ಹಾಗೂ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಬ್ರಹ್ಮಣ್ಯ ಗ್ರಾ.ಪಂ. ಅಧ್ಯಕ್ಷರು, ಸದಸ್ಯರು, ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಸಿಬ್ಬಂದಿ, ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು, ದೇವಸ್ಥಾನದ ಸಿಬ್ಬಂದಿ, ಸುಬ್ರಹ್ಮಣ್ಯ ಪೊಲೀಸರು ಅಂಗಡಿಗಳ ಮೇಲೆ ದಿಢೀರ್ ದಾಳಿ ನಡೆಸಿ ಪರಿಶೀಲಿಸಿದರು.

ದಾಳಿ ವೇಳೆ ತಂಬಾಕು ಉತ್ಪನ್ನಗಳ ದಾಸ್ತಾನು, ಮಾರಾಟ ಪತ್ತೆಯಾಗಿದ್ದು, ಅಧಿಕಾರಿಗಳು ತಂಬಾಕು ಪದಾರ್ಥಗಳನ್ನು ವಶಕ್ಕೆ ಪಡೆದು ಅಂಗಡಿಯವರಿಗೆ ದಂಡ ವಿಧಿಸಿದರು. ದೇವಸ್ಥಾನದ ಸುತ್ತಮುತ್ತ ಎಲ್ಲಿಯೂ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಬಾರದು. ಒಂದು ವೇಳೆ ಮಾರಾಟ ಮಾಡಿದರೆ ಮುಂದಿನ ದಿನಗಳಲ್ಲಿ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಅಮಗಡಿಯವರಿಗೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಈ ದಾಳಿಯಲ್ಲಿ ಗ್ರಾ.ಪಂ. ಅಧ್ಯಕ್ಷೆ ಸುಜಾತಾ ಕಲ್ಲಾಜೆ, ತಾಲೂಕು ಆರೋಗ್ಯಾಧಿಕಾರಿ ಡಾ. ನಂದಕುಮಾರ್, ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ತ್ರಿಮೂರ್ತಿ, ಗ್ರಾಮ ಪಂಚಾಯತ್ ಪಿಡಿಒ ಮಹೇಶ್, ಕಾರ್ಯದರ್ಶಿ ಮೋನಪ್ಪ ಡಿ., ಗ್ರಾ.ಪಂ. ಮಾಜಿ ಅಧ್ಯಕ್ಷೆ ಲಲಿತಾ ಗುಂಡಡ್ಕ, ಸದಸ್ಯೆ ಭಾರತಿ ದಿನೇಶ್, ಗ್ರಾ.ಪಂ. ಸಿಬ್ಬಂದಿ, ಸಂಜೀವಿನಿ ಒಕ್ಕೂಟ ಸದಸ್ಯರು ಭಾಗಿಯಾಗಿದ್ದರು.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

22 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

22 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

22 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

23 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

23 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago