ಸುಬ್ರಹ್ಮಣ್ಯ: ಮಹಾತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಪ್ರಧಾನ ದಿನವಾದ ಕಾರ್ತಿಕ ಶುದ್ಧ ಷಷ್ಠಿಯ ಡಿ.7ರ ಶನಿವಾರ ಬೆಳಗ್ಗೆ ಚಂಪಾಷಷ್ಠಿ ಮಹಾರಥೋತ್ಸವ ನೆರೆದಿದ್ದ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಜರುಗಿತು.
ಪ್ರಾತಃಕಾಲ 6.57ರ ವೃಶ್ಚಿಕ ಲಗ್ನ ಸುಮುಹೂರ್ತದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವರು ಬ್ರಹ್ಮರಥಾರೋಹಣರಾದರು.
ಸುವರ್ಣ ವೃಷ್ಠಿಯಾಗಿ, ಚಿಕ್ಕ ರಥೋತ್ಸವ ಜರುಗಿತು. ಬಳಿಕ ಚಂಪಾಷಷ್ಠಿ ಮಹಾರಥೋತ್ಸವ ಜರುಗಿತು. ಬಳಿಕ ಷಷ್ಠಿ ಕಟ್ಟೆಯಲ್ಲಿ ಮತ್ತು ಒಳಾಂಗಣದ ಕಟ್ಟೆಯಲ್ಲಿ ಅವಳಿ ದೇವರಿಗೆ ಪೂಜೆ ನೆರವೇರಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್., ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಾಧಿಕಾರಿ ಜುಬಿನ್ ಮೊಹಪಾತ್ರ, ಶಾಸಕಿ ಭಾಗೀರಥಿ ಮುರುಳ್ಯ, ಮಾಜಿ ಸಚಿವ ಬಿ.ರಮಾನಾಥ ರೈ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ, ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಸಹಾಯಕ ಕಾರ್ಯನಿರ್ಹಕ ಅಧಿಕಾರಿ ಯೇಸುರಾಜ್ ಸೇರಿದಂತೆ ಕ್ಷೇತ್ರದ ಭಕ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…