ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವ ನ. 16ರಿಂದ ಡಿ. 2ರ ತನಕ ನೆರವೇರಲಿದೆ. ಜಾತ್ರಾ ಮಹೋತ್ಸವದ ಅಂಗವಾಗಿ ನ. 14ರಿಂದ ಡಿ. 2ರ ತನಕ ಸರ್ಪಸಂಸ್ಕಾರ ಸೇವೆ ನೆರವೇರುವುದಿಲ್ಲ ಎಂದು ದೇವಸ್ಥಾನದ ಪ್ರಕಟನೆ ತಿಳಿಸಿದೆ.
ನ. 15ರಂದು ಶನಿವಾರ ಏಕಾದಶಿ ಹಾಗೂ ಮೂಲಮೃತ್ತಿಕಾ ಪ್ರಸಾದ ವಿತರಣೆ, ನ. 16ರಂದು ಕೊಪ್ಪರಿಗೆ ಏರಿ ಜಾತ್ರಾ ಮಹೋತ್ಸವ ಆರಂಭವಾಗುವುದರಿಂದ ನ. 14ರಿಂದಲೇ ಸರ್ಪಸಂಸ್ಕಾರ ಸೇವೆ ಆರಂಭವಾಗುವುದಿಲ್ಲ. ಡಿ. 3 ಬುಧವಾರದಿಂದ ಸರ್ಪಸಂಸ್ಕಾರ ಸೇವೆ ಪುನರಾರಂಭಗೊಳ್ಳಲಿದೆ.
ಲಕ್ಷದೀಪೋತ್ಸವ (ನ.19), ಚೌತಿ (ನ.24), ಪಂಚಮಿ (ನ.25) ದಿನದಂದು ರಾತ್ರಿ ಹೊತ್ತಿನಲ್ಲಿ ಪ್ರಾರ್ಥನೆ ಸೇವೆ ಇರುವುದಿಲ್ಲ. ಚಂಪಾಷಷ್ಠಿ (ನ. 26) ದಿನದಂದು ಮಧ್ಯಾಹ್ನ ಪ್ರಾರ್ಥನೆ ಸೇವೆ ನಡೆಯುವುದಿಲ್ಲ. ಅಲ್ಲದೆ ಚಂಪಾಷಷ್ಠಿ ದಿನ ಆಶ್ಲೇಷಾ ಬಲಿ ಮತ್ತು ನಾಗಪ್ರತಿಷ್ಠೆ ಸೇವೆಗಳು ನೆರವೇರುವುದಿಲ್ಲ.
ಜಾತ್ರೆ ಮತ್ತು ಪ್ರಮುಖ ದಿನಗಳನ್ನು ಬಿಟ್ಟು ಇತರ ದಿನಗಳಲ್ಲಿ ಆಶ್ಲೇಷಾ ಬಲಿ, ಪಂಚಾಮೃತ ಮಹಾಭಿಷೇಕ, ಶೇಷ ಸೇವೆ, ಕಾರ್ತಿಕಪೂಜೆ, ಮಹಾಪೂಜೆ, ತುಲಾಭಾರ, ನಾಗಪ್ರತಿಷ್ಠೆ, ಉತ್ಸವ, ರಥೋತ್ಸವ ಮೊದಲಾದ ಸೇವೆಗಳು ನೆರವೇರಲಿದೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…