Featured

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಆಶ್ಲೇಷ ಬಲಿ, ಸರ್ಪ ಸಂಸ್ಕಾರ ಸೇವೆ ಸಲ್ಲಿಸಿದ ಬಾಲಿವುಡ್​ ನಟ ಅರ್ಜುನ್ ಕಪೂರ್ – vishwanews24

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಆಶ್ಲೇಷ ಬಲಿ, ಸರ್ಪ ಸಂಸ್ಕಾರ ಸೇವೆ ಸಲ್ಲಿಸಿದ ಬಾಲಿವುಡ್​ ನಟ ಅರ್ಜುನ್ ಕಪೂರ್

ಸುಬ್ರಹ್ಮಣ್ಯ: ಕಡಬ ತಾಲೂಕಿನಲ್ಲಿರುವ ಪ್ರಸಿದ್ಧ ಧಾರ್ಮಿಕ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಪ್ರತೀ ದಿನ ಭಕ್ತರ ದಂಡು ಹರಿದುಬರುತ್ತದೆ. ನಾಗಾರಾಧನೆಯ ಪುಣ್ಯಕ್ಷೇತ್ರವು ಜನಸಾಮಾನ್ಯರನ್ನು ಮಾತ್ರವಲ್ಲದೇ ಹೆಸರಾಂತ ಸೆಲೆಬ್ರಿಟಿಗಳನ್ನೂ ತನ್ನತ್ತ ಆಕರ್ಷಿಸುತ್ತದೆ. ಈಗಾಗಲೇ ಹಲವು ಜನಪ್ರಿಯ ತಾರೆಯರು ಇಲ್ಲಿಗೆ ಭೇಟಿ ಕೊಟ್ಟಿದ್ದು, ಇದೀಗ ಅರ್ಜುನ್ ಕಪೂರ್ ಕೂಡಾ ದೇವರ ದರ್ಶನ ಪಡೆದಿದ್ದಾರೆ. ಜೊತೆಗೆ, ವಿಶೇಷ ಪೂಜಾ ವಿಧಿ ವಿಧಾನಗಳಲ್ಲಿಯೂ ಭಾಗಿಯಾಗಿ ಧನ್ಯರಾಗಿದ್ದಾರೆ.

ಬಾಲಿವುಡ್ ಸೂಪರ್ ಸ್ಟಾರ್ ಅರ್ಜುನ್ ಕಪೂರ್ ಅವರು ಕುಕ್ಕೆ ಸುಬ್ರಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇರಿದಂತೆ ವಿವಿಧ ಪೂಜೆಗಳನ್ನು ನೆರವೇರಿಸಿದರು. ಕಳೆದ ಮೂರು ದಿನಗಳಿಂದ ಕುಕ್ಕೆ ಕ್ಷೇತ್ರದಲ್ಲಿ ವಾಸ್ತವ್ಯವಿದ್ದ ಅವರು ಭಾನುವಾರ ಸರ್ಪ ಸಂಸ್ಕಾರ ಸೇವೆ ಸಲ್ಲಿಸಿದ್ದು, ಸೋಮವಾರ ಆಶ್ಲೇಷ ಬಲಿ ಪೂಜೆಯಲ್ಲಿ ಭಾಗವಹಿಸಿದರು.

ಇದನ್ನೂ ಓದಿ:👇

 

ಪೂಜೆ ಬಳಿಕ ಅವರು ದೇವಾಲಯದ ಆಡಳಿತ ಕಚೇರಿಗೆ ಭೇಟಿ ನೀಡಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಹರೀಶ್ ಇಂಜಾಡಿ ಅವರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಅಧ್ಯಕ್ಷರು, ನಟರನ್ನು ದೇಗುಲದ ವತಿಯಿಂದ ಗೌರವಿಸಿದರು. ಈ ವೇಳೆ ದೇವಾಲಯದ ಪಿಆರ್‌ಒ ಜಯರಾಮ್ ರಾವ್, ಮನ್ಮಥ ಬಟ್ಟೋಡಿ ಸೇರಿದಂತೆ ದೇವಾಲಯದ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. ನಟ ಅರ್ಜುನ್ ಕಪೂರ್ ಅವರ ಭೇಟಿ ಕ್ಷೇತ್ರದಲ್ಲಿ ವಿಶೇಷ ಗಮನ ಸೆಳೆಯಿತು.

ಇದನ್ನೂ ಓದಿ:👇

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 day ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago