ಕುಕ್ಕೆ ಸುಬ್ರಹ್ಮಣ್ಯ ಚಂಪಾಷಷ್ಠಿ ವಾರ್ಷಿಕ ಜಾತ್ರಾ ಮಹೋತ್ಸವ, ಇಂದು ಪಂಚಮಿ ರಥೋತ್ಸವ,ನಾಳೆ ಬ್ರಹ್ಮರಥೋತ್ಸವ -Vishwanews24

Featured, ದಕ್ಷಿಣ ಕನ್ನಡ

ಕುಕ್ಕೆ ಸುಬ್ರಹ್ಮಣ್ಯ ಚಂಪಾಷಷ್ಠಿ ವಾರ್ಷಿಕ ಜಾತ್ರಾ ಮಹೋತ್ಸವ, ಇಂದು ಪಂಚಮಿ ರಥೋತ್ಸವ,ನಾಳೆ ಬ್ರಹ್ಮರಥೋತ್ಸವ -Vishwanews24

ಭಕ್ತರಿಗೆ ಪ್ರವೇಶ ನಿರ್ಬಂಧ

ಸುಬ್ರಹ್ಮಣ್ಯ: ರಾಜ್ಯದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವ ಆರಂಭಗೊಂಡಿದೆ. ಈ ಬಾರಿ ಕೋವಿಡ್ ನಿಯಮಾವಳಿಯಂತೆ ಜಾತ್ರೆ ನಡೆಸಲು ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಮುಂಜಾಗ್ರತೆಗಾಗಿ ಅಂತರ ಜಿಲ್ಲಾ ಹಾಗೂ ಅಂತರ ರಾಜ್ಯದ ಭಕ್ತರನ್ನು ಸುಬ್ರಹ್ಮಣ್ಯಕ್ಕೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

ಶ್ರೀ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ವಾರ್ಷಿಕ ಜಾತ್ರಾ ಪ್ರಯುಕ್ತ ಮಾರ್ಗಶಿರ ಶುದ್ಧ ಪಂಚಮಿಯ ದಿನವಾದ ಡಿ.೧೯ರಂದು ತೈಲಾಭ್ಯಂಜನ ಮತ್ತು ಪಂಚಮಿ ರಥೋತ್ಸವ ನೆರವೇರಲಿದೆ.
ಮಧ್ಯಾಹ್ನ ಪಲ್ಲಪೂಜೆ,ರಾತ್ರಿ ವಿಶೇಷ ಪಲ್ಲಕ್ಕಿ ಉತ್ಸವ ಮತ್ತು ಬಂಡಿ ಉತ್ಸವ ದೇವಳದ ಹೊರಾಂಗಣದಲ್ಲಿ ನಡೆಯಲಿದೆ.

ದೇವಳದ ವತಿಯಿಂದ ಸೂಕ್ತ ವ್ಯವಸ್ಥೆಗಳನ್ನು ಮಾಡಲಾಗಿದೆ. ಪೊಲೀಸ್ ಇಲಾಖೆಯಿಂದ ಭದ್ರತೆ ಹಾಗೂ ತಪಾಸಣೆ ನಡೆಸಲಾಗುತ್ತಿದೆ. ಕ್ಷೇತ್ರಗಳನ್ನು ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿದೆ.

ಕೋವಿಡ್ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುತ್ತಿದ್ದ ಎಡೆಸ್ನಾನವನ್ನು ರದ್ದುಪಡಿಸಲಾಗಿತ್ತು. ಆದರೆ, ಕೆಲವೇ ಕೆಲವು ಮಂದಿ ಬೀದಿ ಮಡೆಸ್ನಾನ ಮಾಡುವ ದೃಶ್ಯ ಕಂಡು ಬಂದಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಾಧಿಕಾರಿ ಹಾಗೂ ಕಾರ್ಯ ನಿರ್ವಾಹಣಾಧಿಕಾರಿಗಳ ಮೇಲುಸ್ತುವಾರಿಯಲ್ಲಿ ಎಲ್ಲಾ ಕಾರ್ಯಗಳೂ ನಡೆಯುತ್ತಿವೆ.

ಅವಳಿ ರಥಗಳಿಗೆ ಪತಾಕೆಗಳನ್ನ ಇರಿಸಿ ಬಳಿಕ ಫಲವಸ್ತುಗಳಿಂದ,ಹೂವುಗಳಿAದ ಅಲಂಕಾರ ನೆರವೇರಲಿದೆ.ಕೊರೊನಾ ಹಿನ್ನೆಲೆಯಲ್ಲಿ ಜಾತ್ರೆ ವೇಳೆ ಸಂತೆ ವ್ಯಾಪಾರಿ ಅಂಗಡಿಗಳನ್ನು ನಿರ್ಭಂಧಿಸಲಾಗಿದೆ.ಜಾತ್ರಾ ವೇಳೆ ಗರಿಷ್ಟ ಪ್ರಮಾಣದಲ್ಲಿ ಕೋವಿಡ್-೧೯ ನಿಯಮ ಪಾಲನೆ ಮಾಡಲು ಕ್ರಮಕೈಗೊಳ್ಳಲಾಗುವುದು ಎಂದು ದೇವಳದ ಆಡಳಿತಾಧಿಕಾರಿ ಮತ್ತು ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಡಾ.ಯತೀಶ್ ಉಳ್ಳಾಲ ತಿಳಿಸಿದ್ದಾರೆ.