Featured

ಕುಕ್ಕೆ ಸುಬ್ರಹ್ಮಣ್ಯ ಚಂಪಾ ಷಷ್ಠಿ : ಅನ್ಯಮತೀಯರ ವ್ಯಾಪಾರ ನಿಷೇಧಕ್ಕೆ ಒತ್ತಾಯ – vishwanews24

ಕುಕ್ಕೆ ಸುಬ್ರಹ್ಮಣ್ಯ ಚಂಪಾ ಷಷ್ಠಿ  – ಅನ್ಯಮತೀಯರ ವ್ಯಾಪಾರ ನಿಷೇಧಕ್ಕೆ ಒತ್ತಾಯ

ಮಂಗಳೂರು : ಕರಾವಳಿಯಲ್ಲಿ ಧರ್ಮದಂಗಲ್ ಮುಂದುವರೆದಿದ್ದು, ಇದೀಗ ಇತಿಹಾಸ ಪ್ರಸಿದ್ದ ಕುಕ್ಕೆಯ ಚಂಪಾಷಷ್ಠಿಯಲ್ಲೂ ಅನ್ಯಮತೀಯರ ವ್ಯಾಪಾರಕ್ಕೆ ವಿರೋಧ ವ್ಯಕ್ತವಾಗಿದ್ದು, ಹಿಂದೂಪರ ಸಂಘಟನೆಗಳು ಅನ್ಯಮತೀಯರ ವ್ಯಾಪಾರಕ್ಕೆ ಅವಕಾಶ ನೀಡದಂತೆ ಹಿಂದೂ ಸಂಘಟನೆಗಳು ಒತ್ತಾಯ ಮಾಡಿವೆ.

ಕರಾವಳಿಯಲ್ಲಿ ಇದೀಗ ಜಾತ್ರೆಗಳ ಸೀಸನ್ ಪ್ರಾರಂಭವಾಗಿದ್ದು, ಈ ನಡುವೆ ಈಗಾಗಲೇ ಧರ್ಮದಂಗಲ್ ಪ್ರಾರಂಭವಾಗಿದೆ. ಡಿಸೆಂಬರ್ 18 ರಂದು ಕುಕ್ಕೆಯಲ್ಲಿ ಚಂಪಾ ಷಷ್ಠಿ ನಡೆಯಲಿದ್ದು, ಈ ಸಂದರ್ಭದಲ್ಲಿ ಅನ್ಯಮತೀಯರ ವ್ಯಾಪಾರಕ್ಕೆ ಅವಕಾಶ ನೀಡದಂತೆ ಹಿಂದೂ ಸಂಘಟನೆಗಳು ಒತ್ತಾಯ ಮಾಡಿವೆ. ಅಲ್ಲದೆ ಈ ಸಂಬಂಧ ಹಿಂದೂ ಸಂಘಟನೆ ಮುಖಂಡರು ದೇವಳದ ಕಾರ್ಯನಿರ್ವಹಣಾಧಿಕಾರಿಯವರಿಗೆ ಮನವಿ ಕೂಡ ಸಲ್ಲಿಸಿದ್ದಾರೆ.

ಸುಬ್ರಹ್ಮಣ್ಯದ ಕುಮಾರಧಾರ ಬಳಿ ಬ್ಯಾನರ್ ಕೂಡ ಹಾಕಿದ್ದಾರೆ. ಹಿಂದೂ ಹಿತರಕ್ಷಣಾ ವೇದಿಕೆ ಸುಬ್ರಹ್ಮಣ್ಯ ಅನ್ನೋ ಹೆಸರಲ್ಲಿ ಬ್ಯಾನರ್ ಹಾಕಲಾಗಿದೆ. ಇತಿಹಾಸ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಚಂಪಾಷಷ್ಠಿಯ ಸಂದರ್ಭದಲ್ಲಿ ಈ ಪರಿಸರದಲ್ಲಿ ಅನ್ಯಮತೀಯ ವ್ಯಾಪಾರ ವಹಿವಾಟುಗಳನ್ನು ನಿಷೇಧಿಸಲಾಗಿದೆ ಅಂತ ಬ್ಯಾನರ್ ನಲ್ಲಿ ತಿಳಿಸಲಾಗಿದೆ. ಶ್ರೀ ಕ್ಷೇತ್ರ ಸುಬ್ರಹ್ಮಣ್ಯ ದೇವಸ್ಥಾನವು ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ್ದಾಗಿದೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

15 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

15 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

16 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

16 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

16 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

16 hours ago