ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಭೇಟಿ – vishwanews24
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಭೇಟಿ
ಕಡಬ : ಭಾರತೀಯ ಸಿನಿರಂಗದ ಹೆಸರಾಂತ ಹಿನ್ನಲೆ ಗಾಯಕಿ, ಗಾನಕೋಗಿಲೆ ಎಸ್.ಜಾನಕಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಕುಕ್ಕೆ ಶ್ರೀಸುಬ್ರಮಣ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಎಸ್.ಜಾನಕಿ ಅವರಿಗೆ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ಯೇಸುರಾಜ್ ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಬಳಿಕ ಸುಬ್ರಹ್ಮಣ್ಯ ಸಂಪುಟ ನರಸಿಂಹ ಸ್ವಾಮಿ ಮಠಕ್ಕೆ ಭೇಟಿ ನೀಡಿದ ಅವರು ಸ್ವಾಮೀಜಿಯವರ
ಆಶೀರ್ವಾದ ಪಡೆದರು.
ಸಿನಿ ಜಗತ್ತಿನಲ್ಲಿ ಜಾನಕಿಯಮ್ಮ ಎಂದೇ ಪ್ರಸಿದ್ಧರಾಗಿರುವ ಎಸ್. ಜಾನಕಿ ಅವರು 48ಸಾವಿರಕ್ಕೂ ಹೆಚ್ಚಿನ ಹಾಡುಗಳನ್ನು ಹಾಡಿ ಪ್ರಸಿದ್ಧರಾಗಿದ್ದಾರೆ.
ಕಾಪು ಶ್ರೀ ಹೊಸ ಮಾರಿಗುಡಿ : ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ದಿನಗಣನೆ ಆರಂಭ – vishwanews24
